AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಸಿನಿಮೀಯ ಮಾದರಿ ದರೋಡೆ: ಬಂಗಾರದ ಅಂಗಡಿಗೆ ನುಗ್ಗಿ ಆಭರಣ ದೋಚಿ ಎಸ್ಕೇಪ್​​ ಆದ ಮೂವರು

ನೆಲಮಂಗಲದ ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್‌ಗೆ ನುಗ್ಗಿದ ಮೂವರು ದರೋಡೆಕೋರರು ಹಾಡಹಗಲೇ ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಭಾಗದಲ್ಲಿ ಮೇಲಿಂದ ಮೇಲೆ ದರೋಡೆ ಪ್ರಕರಣಗಳು ನಡೆಯುತ್ತಿರೋದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಹಾಡಹಗಲೇ ಸಿನಿಮೀಯ ಮಾದರಿ ದರೋಡೆ: ಬಂಗಾರದ ಅಂಗಡಿಗೆ ನುಗ್ಗಿ ಆಭರಣ ದೋಚಿ ಎಸ್ಕೇಪ್​​ ಆದ ಮೂವರು
ದರೋಡೆಯಾದ ಬಂಗಾರದ ಅಂಗಡಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on: Jun 02, 2026 | 11:47 AM

Share

ನೆಲಮಂಗಲ, ಜೂನ್​ 02: ಹಾಡಹಗಲೇ ಸಿನಿಮೀಯ ಮಾದರಿ ದರೋಡೆ ಪ್ರಕರಣವೊಂದು ಬೆಂಗಳೂರು (Bengaluru) ಗ್ರಾಮಾಂತರದ ನೆಲಮಂಗಲದಲ್ಲಿ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಆರೋಪಿಗಳು ಬಂಗಾರ ಅಂಗಡಿಯಲ್ಲಿದ್ದವರನ್ನು ಬೆದರಿಸಿ ಆಭರಣಗಳನ್ನು ದೋಚಿ ಎಸ್ಕೇಪ್​​ ಆಗಿದ್ದು, ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ನೆಲಮಂಗಲ ಭಾಗದಲ್ಲಿ ಮೇಲಿಂದ ಮೇಲೆ ದರೋಡೆ ಪ್ರಕರಣಗಳು ನಡೆಯುತ್ತಿರೋದು ಸಾರ್ವಜನಿಕರ ತೀವ್ರ ಆತಂಕಕ್ಕೂ ಕಾರಣವಾಗಿದೆ.

ಮುಖ್ಯಾಂಶಗಳು

  • ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ ದರೋಡೆ
  • ಬೈಕ್​​ನಲ್ಲಿ ಬಂದಿದ್ದ ಮೂವರು ಆರೋಪಿಗಳಿಂದ ಕೃತ್ಯ
  • ನೆಲಮಂಗಲದ ಟಿ.ಬೇಗೂರಿನಲ್ಲಿ ನಡೆದಿರುವ ಘಟನೆ

ಬೈಕ್​ನಲ್ಲಿ ಬಂದಿದ್ದ ಮೂವರು ದರೋಡೆಕೋರರು ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿರುವ ಮಹಾಲಕ್ಷ್ಮೀ ಜ್ಯುವೆಲರ್ಸ್​​ಗೆ ನುಗ್ಗಿದ್ದಾರೆ. ಬಂಗಾರದ ಅಂಗಡಿಯಲ್ಲಿದ್ದವರಿಗೆ ಡ್ಯಾಗರ್​​ ತೋರಿಸಿ ಬೆದರಿಸಿರುವ ಆರೋಪಿಗಳು, ಶೋ ಗ್ಲಾಸ್​​​ನಲ್ಲಿದ್ದ 20 ಉಂಗುರಗಳು ಇದ್ದ ಟ್ರೇ ದೋಚಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಕೆಲ ಉಂಗುರಗಳು ರಸ್ತೆಗೆ ಬಿದ್ದಿವೆ ಎನ್ನಲಾಗಿದೆ. ಒಟ್ಟು 5 ಉಂಗುರಗಳು ಕಳವಾಗಿರುವ ಬಗ್ಗೆ ಶಾಪ್​​ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ಕಳುವಾಗಿರುವ ಬಂಗಾರದ ಒಟ್ಟು ತೀಕ ಸುಮಾರು 35 ಗ್ರಾಂ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆನ್‌ಲೈನ್ ಹೂಡಿಕೆ ಹೆಸರಲ್ಲಿ ಭಾರಿ ವಂಚನೆ, ಮಹಿಳೆಯ ಮಾತಿಗೆ ಮರುಳಾಗಿ 5.95 ಕೋಟಿ ರೂ. ಕಳಕೊಂಡ ವ್ಯಕ್ತಿ

ಇನ್ನು ಘಟನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದು, ಬಂಗಾರದ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಆದರೆ ಅವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ವಿಚಾರ ಗೊತ್ತಾದ ಕಾರಣ, ಶಾಪ್​​ ಮಾಲೀಕನ ಬಳಿಯಿಂದಲೇ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ