ಒನ್‌ವೇನಲ್ಲಿ ಬಂದು ಬೈಕ್‌ಗೆ ಕಾರು ಡಿಕ್ಕಿ: ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾವು
ದೇವನಹಳ್ಳಿ ಬಳಿ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದ 31 ವರ್ಷದ ಮಹಿಳೆ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಒನ್‌ವೇ ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರು, ಆಗಸ್ಟ್ 24: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ (flyover) ಮೇಲಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಬಚ್ಚಳ್ಳಿ ಗೇಟ್ ಫ್ಲೈಓವರ್ನಲ್ಲಿ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಮೂಲದ ನೇತ್ರಾವತಿ (31) ಮೃತ ಮಹಿಳೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೂಪರ್‌ವೈಸರ್ ಆಗಿದ್ದ ನೇತ್ರಾವತಿ ಪತಿ, 2 ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ನೇತ್ರಾವತಿ ಕೂಡ ಖಾಸಗಿ ಟೀ ಶಾಪ್‌ನಲ್ಲಿ ಸೂಪರ್‌ವೈಸರ್ ಆಗಿದ್ದರು. ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆ ದಂಪತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಒನ್‌ವೇನಲ್ಲಿ ವೇಗವಾಗಿ ಬಂದ ಕಾರಿನಿಂದ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿ ರಭಸಕ್ಕೆ ನೇತ್ರಾವತಿ ಫ್ಲೈಓವರ್ ಮೇಲಿಂದ ಕೆಳಗೆ ಬಿದಿದ್ದು, ತಲೆಗೆ ಬಲವಾದ ಪೆಟ್ಟು ಹಿನ್ನಲೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕಿಡ್ಯ್ನಾಪ್ ಆ್ಯಂಡ್ ಮರ್ಡರ್ ಕೇಸ್ ಭೇದಿಸಿದ ಪೊಲೀಸ್: 6 ವರ್ಷದ ನಂತ್ರ ಆರೋಪಿಗಳ ಬಂಧನ
ಇನ್ನು ಬೈಕ್‌ನ ಎಡ ಭಾಗಕ್ಕೆ ಬಿದ್ದಿದ್ದರಿಂದ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತವೆಸಗಿ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಕಾರು ಚಾಲಕನ ಹುಡುಕಾಟ ನಡೆಸಿದ್ದಾರೆ.
ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಸವಾರ ದುರ್ಮರಣ
ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣದ ಹೆದ್ದಾರಿಯಲ್ಲಿ ಸಂಭವಿಸಿದೆ. ಸದ್ಯ ಪೊಲೀಸರು ಮೃತ ಬೈಕ್ ಸವಾರನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ: ಯಲ್ಲಾಪುರ: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ; ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಿಂದ ಬೈಕ್ ಸಮೇತ ಸವಾರನನ್ನ ಸೈಡಿಗೆ ಎಳೆದೊಯ್ದಿದೆ. ಲಾರಿ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜು ಆಗಿದೆ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಶಿಫ್ಟ್ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



