AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ, ಆಗಿದ್ದೇನು?

ದೇವನಹಳ್ಳಿ ತಾಲೂಕಿನ ಸಾವನಕನಹಳ್ಳಿಯಲ್ಲಿ 38 ವರ್ಷದ ನಾಗರತ್ನ ಎಂಬ ಗೃಹಿಣಿ ಸಾವನ್ನಪ್ಪಿದ್ದಾರೆ. ಸಾಂಬಾರ್ ವಿಚಾರವಾಗಿ ಉಂಟಾದ ಜಗಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಹಾಗೂ ಮಕ್ಕಳು ಹೇಳಿದ್ದಾರೆ. ಆದರೆ, ಮೃತಳ ಕುಟುಂಬಸ್ಥರು ಪತಿಯಿಂದ ಕೊಲೆಯಾಗಿದೆ ಎಂದು ಆರೋಪಿಸಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ, ಆಗಿದ್ದೇನು?
ಮೃತ ನಾಗರತ್ನ
ನವೀನ್ ಕುಮಾರ್ ಟಿ
| Edited By: |

Updated on: May 31, 2025 | 11:44 AM

Share

ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ (couple) ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ (death) ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮಗಳದ್ದು ಆತ್ಮಹತ್ಯೆಯಲ್ಲ‌, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ ಮೃತಳ ಅಣ್ಣ ಮತ್ತು ತಾಯಿ ಆರೋಪಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಸಾಂಬಾರ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಗಂಡ ಮತ್ತು ಮಕ್ಕಳು ಹೇಳುತ್ತಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಾಜಿ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿಯಲ್ಲಿ ನಡೆದಿದೆ. ದೇವಜನ ಜಗದೀಶ್(56) ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ.

ಇದನ್ನೂ ಓದಿ
Image
ಇನ್ಮುಂದೆ ಗುಟ್ಕಾ ಉಗುಳುವುದು, ಸಿಗರೇಟ್ ಸೇದಿದ್ರೆ 4 ಪಟ್ಟು ದಂಡ
Image
ಹಿಟ್ ಆ್ಯಂಡ್​ ರನ್​​ಗೆ ತಂದೆ-ಮಗಳು ಬಲಿ: ದೇವಸ್ಥಾನಕ್ಕೆ ಹೊರಟವರು ಮಸಣಕ್ಕೆ
Image
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್:ಹಲವಡೆ ಲೋಕಾಯುಕ್ತ ದಾಳಿ
Image
ಗುಡ್ಡಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ, ಅಧಿಕಾರಿಗಳ ವಿರುದ್ಧ ದೂರು

ಇದನ್ನೂ ಓದಿ: ಬೆಂಗಳೂರು: ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಗ್ಯಾಂಗ್ ಸಿಕ್ಕಿಬಿತ್ತು, ಮಾಡಿದ್ದೇನು ಗೊತ್ತಾ?

ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿರುವ ಜಗದೀಶ್, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್​ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡು ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ವಿರೂಪಾಕ್ಷಯ್ಯ ಚಿಕ್ಕಮಠ (40) ಆತ್ಮಹತ್ಯೆ ಮಾಡಿಕೊಂಡ ರೈತ. ಕೆವಿಜಿ ಬ್ಯಾಂಕನಲ್ಲಿ 2 ಲಕ್ಷ 50 ಸಾವಿರ ರೂ, ಕೈಗಡವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳ ಜಗಳ ಬಿಡಿಸಲು ಹೋದ ತಾಯಿ ದುರಂತ ಸಾವು, ಜನ್ಮ ಕೊಟ್ಟವಳಿಗೆ ಇರಿದು ಕೊಂದ ಮಗ

ಮೂರು ಎಕರೆ ಜಮೀನಲ್ಲಿ ಸರಿಯಾಗಿ ಬೆಳೆಬಾರದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ದೊರೆತಿದೆ. ಗ್ರಾಮದ ಹೊರ ವಲಯದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್