ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್

ಕನ್ನಡ ನಾಮಫಲಕ ಅಳವಡಿಕೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಹಾಗೂ ಅಂಗಡಿ ಮುಂಗಟ್ಟುಗಳಿಗೆ ದಾಳಿ ನಡೆಸಿ ಇತರೆ ಭಾಷಾ ನಾಮಫಲಕ ಕಿತ್ತುಹಾಕಿದ ಪ್ರಕರಣ ಸಂಬಂಧ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿತ್ತು. ಇವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌, ಜಾಮೀನು ಮಂಜೂರು ಮಾಡಿದೆ.

ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್
ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತು 29 ಮಂದಿ ಕಾರ್ಯಕರ್ತರಿಗೆ ಜಾಮೀನು ಮಂಜೂರು
Follow us
ನವೀನ್ ಕುಮಾರ್ ಟಿ
| Updated By: Rakesh Nayak Manchi

Updated on:Jan 06, 2024 | 5:49 PM

ದೇವನಹಳ್ಳಿ, ಜ.6: ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ (Narayana Gowda) ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಅವರಿದ್ದ ಪೀಠ, ನಾರಾಯಣಗೌಡ ಮತ್ತು ಇತರೆ 29 ಕಾರ್ಯಕರ್ತರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನಾಮಫಲಕ ಧ್ವಂಸ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಗೌಡ, ಕಾರ್ಯಕರ್ತರಾದ ಶರತ್, ಲೋಕೇಶ್ ಗೌಡ, ಹೇಮಂತ್ ಅವರಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇವರಿಗೆ ಹಾರ ಹಾಕಿ ಪಟಾಕಿ ಸಿಡಿಸಿ ಕರವೇ ಕಾರ್ಯಕರ್ತರು ಬರಮಾಡಿಕೊಂಡರು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿಂದ ನಾಲ್ವರು ಕರವೇ ಕಾರ್ಯಕರ್ತರ ಬಿಡುಗಡೆ

ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿತ್ತು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್​ಗಳನ್ನು ಕಿತ್ತೆಸೆಯಲಾಗಿತ್ತು. ಈ ಸಂಬಂಧ ಪೊಲೀಸರು ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Sat, 6 January 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ