ದೇವನಹಳ್ಳಿ, ಜ.6: ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ (Narayana Gowda) ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಅವರಿದ್ದ ಪೀಠ, ನಾರಾಯಣಗೌಡ ಮತ್ತು ಇತರೆ 29 ಕಾರ್ಯಕರ್ತರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನಾಮಫಲಕ ಧ್ವಂಸ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಗೌಡ, ಕಾರ್ಯಕರ್ತರಾದ ಶರತ್, ಲೋಕೇಶ್ ಗೌಡ, ಹೇಮಂತ್ ಅವರಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇವರಿಗೆ ಹಾರ ಹಾಕಿ ಪಟಾಕಿ ಸಿಡಿಸಿ ಕರವೇ ಕಾರ್ಯಕರ್ತರು ಬರಮಾಡಿಕೊಂಡರು.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿಂದ ನಾಲ್ವರು ಕರವೇ ಕಾರ್ಯಕರ್ತರ ಬಿಡುಗಡೆ
ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿತ್ತು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್ಗಳನ್ನು ಕಿತ್ತೆಸೆಯಲಾಗಿತ್ತು. ಈ ಸಂಬಂಧ ಪೊಲೀಸರು ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:38 pm, Sat, 6 January 24