ಟಿವಿ9 ವರದಿ ಇಂಪ್ಯಾಕ್ಟ್: ಒತ್ತುವರಿಯಾಗಿದ್ದ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ತೆರವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನು ತೆರವು ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ವಡ್ಡರಹಳ್ಳಿ ಸರ್ವೆ ನಂಬರ್ 162ರಲ್ಲಿನ ಸರ್ಕಾರಿ ಗೋಮಾಳ ಜಮೀನನ್ನು ಆರ್​ಐ ಶಿವಪ್ರಸಾದ್ ನೇತೃತ್ವದಲ್ಲಿ ಜೆಸಿಬಿಯಿಂದ ತೆರವು ಮಾಡಲಾಗಿದೆ. 

ಟಿವಿ9 ವರದಿ ಇಂಪ್ಯಾಕ್ಟ್: ಒತ್ತುವರಿಯಾಗಿದ್ದ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ತೆರವು
ತೆರವು ಕಾರ್ಯಾಚರಣೆ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 05, 2024 | 4:48 PM

ದೇವನಹಳ್ಳಿ, ಜನವರಿ 05: ಸರ್ಕಾರಿ ಜಮೀನು ಒತ್ತುವರಿ (encroachment) ತೆರವುಗೊಳಿಸದೆ ಲೋಕಾಯುಕ್ತಕ್ಕೆ ವರದಿ ಕೇಸ್​ಗೆ ಸಂಬಂಧಿಸಿದಂತೆ ಟಿವಿ9 ವರದಿಯಿಂದ ಎಚ್ಚೆತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನು ತೆರವು ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಗ್ರಾಮದ ವಡ್ಡರಹಳ್ಳಿ ಸರ್ವೆ ನಂಬರ್ 162ರಲ್ಲಿನ ಸರ್ಕಾರಿ ಗೋಮಾಳ ಜಮೀನನ್ನು ಆರ್​ಐ ಶಿವಪ್ರಸಾದ್ ನೇತೃತ್ವದಲ್ಲಿ ಜೆಸಿಬಿಯಿಂದ ತೆರವು ಮಾಡಲಾಗಿದೆ.  ಸರ್ವೆ ನಂ.162ರಲ್ಲಿನ ಸಂಪೂರ್ಣ ಒತ್ತುವರಿ ತೆರವಿಗೆ ಅಧಿಕಾರಿಗಳು ಸಜ್ಜಾಗಿದ್ದಾರೆ.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸದೆ ಲೋಕಾಯುಕ್ತಕ್ಕೆ ತಹಶೀಲ್ದಾರ್‌, ಆರ್‌ಐ ಸುಳ್ಳು ವರದಿ ನೀಡಿದ ಆರೋಪ ಕೇಳಿಬಂದಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಡ್ಡರಹಳ್ಳಿ ಬಳಿ ಒತ್ತುವರಿಯಾಗಿರುವ ಜಮೀನು ಬಳಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ: ಸಚಿವರ ಆದೇಶ ಒಂದೇ ದಿನದಲ್ಲಿ ಜಾರಿ: 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು

ಈ ಹಿಂದೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿದ್ದ ಮೋಹನ್ ಕುಮಾರಿ, ಆರ್‌ಐ ಶಿವಪ್ರಸಾದ್‌ ಲೋಕಾಯುಕ್ತಕ್ಕೆ ಸುಳ್ಳು ವರದಿ ನೀಡಿರುವ ಆರೋಪ ಮಾಡಲಾಗಿದೆ. ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರಿಂದ ಪ್ರತಿಭಟನೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಕೇವಲ ಮೂರೇ ತಿಂಗಳಲ್ಲಿ 1134 ಕಡೆ ಸರ್ಕಾರಿ ಭೂಮಿ ಒತ್ತುವರಿ

ಸುಳ್ಳು ವರದಿ ಸಲ್ಲಿಕೆ ಬಗ್ಗೆ ಲೋಕಾಯುಕ್ತಕ್ಕೂ ಗ್ರಾಮಸ್ಥರು ದೂರು ನೀಡಿದ್ದು, ಒತ್ತುವರಿ ತೆರವು ಮಾಡಿ ಗ್ರಾಮಸ್ಥರಿಗೆ ಸೈಟ್ ನೀಡುವಂತೆ ಒತ್ತಾಯ ಮಾಡಲಾಗಿದೆ. ವಡ್ಡರಹಳ್ಳಿಯ ಸರ್ವೆ ನಂಬರ್ 162ರಲ್ಲಿ 7ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ದೂರಿನನ್ವಯ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ಗೆ ಸೂಚಿಸಲಾಗಿತ್ತು. ಈ ವೇಳೆ ಒತ್ತುವರಿ ತೆರವು ಮಾಡಿ ಬೋರ್ಡ್ ಹಾಕಿರುವುದಾಗಿ ಸುಳ್ಳು ವರದಿ ಸಲ್ಲಿಸಿದ್ದಾರೆಂದು ಗ್ರಾಮಸ್ಥರು ಆರೋಪ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:37 pm, Fri, 5 January 24

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ