ಬೆಂಗಳೂರಿನಲ್ಲಿ ಮತ್ತೊಂದು ಕಾರಿನಲ್ಲಿ ವ್ಯಕ್ತಿ ಶವ ಪತ್ತೆ: ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪಟ್ಟಣದ ವಿಜಯಪುರ ಕ್ರಾಸ್ ಬಳಿಯಿರುವ ಯೂನಿಯನ್​ ಬ್ಯಾಂಕ್ ಬಳಿ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿಯ ಶವ ಪತ್ತೆಯಾಗಿದೆ. ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ದೇವನಹಳ್ಳಿ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಕಾರಿನಲ್ಲಿ ವ್ಯಕ್ತಿ ಶವ ಪತ್ತೆ: ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ
ಕಾರಿನಲ್ಲಿ ಶವ ಪತ್ತೆ
Edited By:

Updated on: Nov 18, 2026 | 8:25 PM

ಮುಖ್ಯಾಂಶಗಳು

  • ಬ್ಯಾಂಕ್ ಮುಂದೆ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಘಟನೆ
  • ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ದೇವನಹಳ್ಳಿ, ನವೆಂಬರ್​​ 18: ಬೆಂಗಳೂರಿನ ಮಂಗಳವಾರ ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ಇದೀಗ ಅಂತಹದೊಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. ಬ್ಯಾಂಕ್ ಮುಂದೆ ಮೂರು ದಿನಗಳಿಂದ ನಿಂತಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಅಮರ್‌ಚಂದ್ (45) ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ದೇವನಹಳ್ಳಿ ಪಟ್ಟಣದ ವಿಜಯಪುರ ಕ್ರಾಸ್ ಬಳಿಯಿರುವ ಯೂನಿಯನ್ ಬ್ಯಾಂಕ್ ಮುಂದೆ ಸೋಮವಾರ ಬೆಳಗ್ಗೆ KA 03 MS 1953 ನೋಂದಣಿ ಸಂಖ್ಯೆಯ ವೋಕ್ಸ್‌ವ್ಯಾಗನ್ ಕಾರು ನಿಂತಿತ್ತು. ಸತತ ಮೂರು ದಿನಗಳಿಂದ ಕಾರು ಅಲ್ಲಿಯೇ ನಿಂತಿತ್ತು. ಇಂದು ಕಾರನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಾದಾಗ ಒಳಗಡೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕಾರಿನೊಳಗೆ ಮೃತದೇಹ ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೇವನಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

Loading...

ಇದನ್ನೂ ಓದಿ: ಬೆಂಗಳೂರು: ಕಾರಿನಲ್ಲಿ ವ್ಯಕ್ತಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಗುಂಡಿಕ್ಕಿ ಹತ್ಯೆ ಶಂಕೆ

ಇನ್ನು ಘಟನಾ ಸ್ಥಳಕ್ಕೆ ಸೋಕೋ ತಂಡವೂ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಈ ವೇಳೆ ಕಾರಿನ ಒಳಗಡೆ ಮದ್ಯದ ಬಾಟಲಿ ಪತ್ತೆಯಾಗಿದೆ. ಅಮರ್‌ಚಂದ್ ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಮುಚ್ಚಿಕೊಂಡು ಮಲಗಿರುವ ಸಾಧ್ಯತೆಯಿದ್ದು, ಮೇಲ್ನೋಟಕ್ಕೆ ಕಾರಿನಲ್ಲಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೂರು ದಿನಗಳ ಬಳಿಕ ಮಹಿಳೆಯ ಮೃತದೇಹ ಪತ್ತೆ

ಮಂಗಳೂರಿನ ದಕ್ಷಿಣ ಪಿನಾಕಿನ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆ. ಕಲ್ಕುಂಟೆ ಅಗ್ರಹಾರದ ಕವಿತಾ ಆತ್ಮಹತ್ಯೆ ಶರಣಾಗಿದ್ದ ಮಹಿಳೆ. ಅಗ್ನಿಶಾಮಕ, SDRF, NDRF, ಕಂದಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆದ ಶೋಧ ಕಾರ್ಯದಲ್ಲಿ ಇಂದು ಬೆಳಿಗ್ಗೆ ಕವಿತಾ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us