AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ: ಧಗಧಗಿಸಿದ ಮನೆ, ಯುವಕ ಸಜೀವ ದಹನ

ತಾಯಿ ಮತ್ತು ಮಗ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬ. ತಾಯಿ ಮತ್ತು ಮಗ ವಾಸವಿದ್ದ ಮನೆ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲು, ಸಜೀವ ದಹನ. ಮಗ ಆಗಾಗ ಕುಡಿದು ಮನೆಗೆ ಬರುತ್ತಿದ್ದನು. ಶುಕ್ರವಾರ ಸಂಜೆ ಸಹ ಕುಡಿದು ಮನೆಗೆ ಬಂದ ಮಗ ಅಮಲಿನಲ್ಲಿ ಸಿಗರೇಟ್​ ಹಚ್ಚಿ, ನಿದ್ದೆಗೆ ಜಾರಿದ್ದಾನೆ. ಮುಂದೇನಾಯ್ತು? ಇಲ್ಲಿದೆ ವಿವರ

ದೇವನಹಳ್ಳಿ: ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ: ಧಗಧಗಿಸಿದ ಮನೆ, ಯುವಕ ಸಜೀವ ದಹನ
ಮೃತ ಉದಯ್, ಸುಟ್ಟು ಕರಕಲಾದ ಮನೆ
ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on:Jul 19, 2025 | 6:19 PM

Share

ದೇವನಹಳ್ಳಿ, ಜುಲೈ 19: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಕನ್ನಮಂಗಲ ಕಾಲೋನಿಯಲ್ಲಿನ ಮನೆಯೊಂದು ಶುಕ್ರವಾರ (ಜು.18) ಸಂಜೆ ಧಗಧಗಿಸಿ ಉರಿದು, ಸುಟ್ಟು ಕರಕಲಾಗಿದೆ. ಮನೆಯಲ್ಲಿ ಮಲಗಿದ್ದ ಯುವಕ ಸಜೀವ ದಹನವಾಗಿದ್ದಾನೆ. ಉದಯ್ ಮೃತ ದುರ್ದೈವಿ. ಕನ್ನಮಂಗಲ ಕಾಲೋನಿಯಲ್ಲಿ ನರಸಮ್ಮ ಮತ್ತು ಮೃತ ಉದಯ್ ತಾಯಿ-ಮಗ ವಾಸ ಮಾಡುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಶುಕ್ರವಾರ (ಜು.18) ಸಂಜೆ ಉದಯ್​ ಕೆಲಸ ಮುಗಿಸಿಕೊಂಡು, ಕುಡಿದು ಮನೆಗೆ ಬಂದಿದ್ದಾನೆ. ಮನೆಯಲ್ಲಿ ತಾಯಿ ನರಸಮ್ಮ ಇರಲಿಲ್ಲ. ಎಣ್ಣೆ ನಶೆಯಲ್ಲಿ ಕೋಣೆಯೊಳಗೆ ಮಲಗಿದವನಿಗೆ ಧೂಮಪಾನ ಮಾಡಬೇಕು ಅಂತ ಬಯಕೆ ಆಗಿದೆ. ಸಿಗರೇಟ್ ಹಚ್ಚಿ ಸೇದಿದ್ದಾನೆ. ಕೊನೆಗೆ ಕಿಡಿಯನ್ನು ಆರಿಸದೆ ನಶೆಯಲ್ಲಿ ಹಾಗೆ ನಿದ್ದೆಗೆ ಜಾರಿದ್ದಾನೆ. ಸಿಗರೇಟ್​ ಕಿಡಿ ಕೋಣೆಯಲ್ಲಿನ ಬಟ್ಟೆಗಳಿಗೆ ತಗುಲಿದ್ದು, ಬೆಂಕಿ ಹೊತ್ತಿಕೊಂಡಿದೆ. ಕ್ಷಣ ಮಾತ್ರದಲ್ಲಿ ಮನೆಯ ತುಂಬ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡರೂ ನಶೆಯಲ್ಲಿದ್ದ ಉದಯ್​ಗೆ ಎಚ್ಚರವಾಗಿಲ್ಲ. ಕುಡಿದು ನಶೆಯಲ್ಲಿ ಮಲಗಿದ್ದ ಉದಯ್​ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಚಿರನಿದ್ರೆಗೆ ಜಾರಿದ್ದಾನೆ.

ಇದನ್ನೂ ಓದಿ: ಎಣ್ಣೆ ಪಾರ್ಟಿಯಲ್ಲಿ ಗಲಾಟೆ: 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ

ಇದನ್ನೂ ಓದಿ
Image
ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ
Image
ನೆಲಮಂಗಲ: ನೀರಿನ ಹಂಡೆಯಲ್ಲಿ ಮುಳುಗಿಸಿ ಮಗು ಕೊಂದ ತಾಯಿ
Image
ಯುವಕನಿಗೆ ಹಲ್ಲೆ ಕೇಸ್​: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಬಂಧನ
Image
ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ

ದಟ್ಟ ಹೊಗೆ ಹಾಗೂ ಬೆಂಕಿಯ ಕಿಡಿ ಕಂಡ ಅಕ್ಕ ಪಕ್ಕದವರು ಮನೆ ಬಳಿ ಬಂದು ನೋಡಿದಾಗ ಮನೆ ಹೊತ್ತಿ ಉರಿಯುತ್ತಿತ್ತು. ಕೂಡಲೇ ಸ್ಥಳಿಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೆ ನಶೆಯಲ್ಲಿ ನಿದ್ದೆಗೆ ಜಾರಿದ್ದ ಉದಯ್ ಸುಟ್ಟು ಕರಕಲಾಗಿದ್ದನು. ಮಗನ ಸಾವು ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಸಾವು ಮತ್ತು ಮನೆಯ ದುಸ್ಥಿತಿ ಕಂಡು ವೃದ್ದ ತಾಯಿಗೆ ಬರಸಿಡಿಲು ಬಡಿದಂತಾಗಿದೆ. ಪ್ರಕರಣ ಸಂಬಂಧ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Sat, 19 July 25

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ