ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದಲ್ಲಿರುವ ಪ್ರತಿಷ್ಠಿತ ಕಂಪನಿಯೊಂದರ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಘಟನೆ ನಡೆದಿದೆ. ಸಾವಿರಾರೂ ಸಿಬ್ಬಂದಿ ಕೆಲಸ ಮಾಡುವ ಕಂಪನಿಯಲ್ಲಿ ನಡೆದ ಆತಂಕಕಾರಿ ಘಟನೆ ಬಗ್ಗೆ ಕಂಪನಿ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!
ಫಾಕ್ಸ್​ಕಾನ್ ಕಂಪನಿ
Image Credit source: tv9 kannada
Edited By:

Updated on: Apr 22, 2026 | 9:05 PM

ದೇವನಹಳ್ಳಿ, ಏಪ್ರಿಲ್​ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಬಳಿ ಇರುವ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯಲ್ಲಿ (Foxconn Factory) ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು.  ಮೊಬೈಲ್ ತಯಾರಿಕಾ ಲೋಕದ ದೈತ್ಯ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣವೊಂದು ಪತ್ತೆಯಾಗಿದ್ದು, ಇಡೀ ಆಡಳಿತ ಮಂಡಳಿಯನ್ನು ಬೆಚ್ಚಿಬೀಳಿಸಿದೆ. ಸದ್ಯ ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸುಮಾರು 25 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೆಲಸ ನಿರ್ವಹಿಸುವ ಈ ಬೃಹತ್ ಘಟಕದಲ್ಲಿ, ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ತಕ್ಷಣ ಕಂಪನಿಯ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ವಿಶ್ವನಾಥಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇನ್ನು ಪತ್ತೆಯಾದ ಭ್ರೂಣವು ಗಂಡೋ ಅಥವಾ ಹೆಣ್ಣೋ ಎಂಬುದು ಇನ್ನು ದೃಢಪಟ್ಟಿಲ್ಲ.

ಇದನ್ನೂ ಓದಿ: ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಕಂಪನಿಯ ಆವರಣದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳಲ್ಲಿ ಇದು ತೀವ್ರ ಆತಂಕ ಮೂಡಿಸಿದೆ. ಸದ್ಯ ಪೊಲೀಸರು ಎಲ್ಲಾ ಆಯಾಮಗಳಿಂದ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ನಾಪತ್ತೆಯಾಗಿದ್ದ ಕುರಿಗಾಹಿ ಮಹಿಳೆ ಶವವಾಗಿ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕನಹಳ್ಳಿ ಕೆರೆ ಬಳಿ ನಡೆದಿದೆ. ವಿಜಯಪುರ ಮಾರ್ಕೆಟ್ ರಸ್ತೆ ನಿವಾಸಿ ಸರ್ವಮಂಗಳ(55) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಕಿಮ್ಸ್​ ಸಾಧನೆ: ಶಸ್ತ್ರಚಿಕಿತ್ಸೆ ಮಾಡಿ ಗಂಡು ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣ ಹೊರಕ್ಕೆ

ಕಳೆದ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಕುರಿಗಾಹಿ ಮಹಿಳೆ ಸರ್ವಮಂಗಳ, ಇಂದು ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಇನ್ನು ಮಹಿಳೆ ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us