AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkataswamy: ಕಾಂಗ್ರೆಸ್​​ನ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನ ಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

Venkataswamy: ಕಾಂಗ್ರೆಸ್​​ನ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ
ಕಾಂಗ್ರೆಸ್​ ಮಾಜಿ ಶಾಸಕ ವೆಂಕಟಸ್ವಾಮಿ
ವಿವೇಕ ಬಿರಾದಾರ
|

Updated on:Apr 15, 2023 | 7:02 AM

Share

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ (Devanahalli) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನ (Congress) ಮಾಜಿ ಶಾಸಕ ವೆಂಕಟಸ್ವಾಮಿ (Former MLA Venkatswamy) (53) ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 02:20ಕ್ಕೆ ಆಸ್ವತ್ರೆಯಲ್ಲಿ ಕೊನೆಯುಸಿರೆಳೆದರು. ಮಾಜಿ ಶಾಸಕ ವೆಂಕಟಸ್ವಾಮಿಯವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.  ಸ್ವಗ್ರಾಮ ಸಾದಹಳ್ಳಿಯ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಹೃದಯಾಘಾತದಿಂದ ಆಸ್ಪತ್ರಗೆ ದಾಖಲಾಗಿದ್ದ ವೆಂಕಟಸ್ವಾಮಿ

ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದ ವೆಂಕಟಸ್ವಾಮಿ ಅವರಿಗೆ 2023ರ ಮಾರ್ಚ್ 21 ರಂದು ಪ್ರಚಾರ ಮುಗಿಸಿ ಮನೆಗೆ ಬಂದಾಗ ಹೃದಯಾಘಾತವಾಗಿತ್ತು. ಕೂಡಲೆ ವೆಂಕಟಸ್ವಾಮಿಯವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

2008ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದ ವೆಂಕಟಸ್ವಾಮಿಯವರು ಸಾಕಷ್ಟು ಜನಪ್ರಿಯತೆಯನ್ನು ಬೆಳೆಸಿಕೊಳ್ಳುವ ಮೂಲಕ ತಮ್ಮದೆಯಾದ ಒಂದಷ್ಟು ಬಳಗವನ್ನು ಕ್ಷೇತ್ರದಲ್ಲಿ ಹೊಂದಿದ್ದರು. ಮುಂದೆ 2013 ರಲ್ಲಿ ದೇವನಹಳ್ಳಿಯಿಂದ ಸ್ಪರ್ಧಿಸಿ, ಪಕ್ಷದ ಮುಖಂಡರ ಒಳ ಜಗಳದಿಂದ ಜೆಡಿಎಸ್ ಅಭ್ಯರ್ಥಿ ಮುಂದೆ ಸೋಲನ್ನು ಅನುಭವಿಸಿದ್ದರು.

2018 ರಲ್ಲಿ ಕೂಡ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಹಾಗೇ ಈ ಬಾರಿಯೂ ಸ್ಪರ್ಧಿಸುವ ಇಚ್ಛೆ ಹೊಂದಿದ್ದ ವೆಂಕಟಸ್ವಾಮಿಯವರು, ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು. ಆದರೆ ಕ್ಷೇತ್ರದ ಟಿಕೆಟ್​ ಕೈ ತಪ್ಪಿತ್ತು. ಇದರಿಂದ  ಬೇಸರಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:13 am, Sat, 15 April 23

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್