ಪ್ರೀತಿಸಿದ ಯುವತಿಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು
ಪ್ರೀತಿಸಿದ ಯುವತಿಯಿಂದ ಕಿರುಕುಳಕ್ಕೊಳಗಾಗಿ ಓರ್ವ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟದಲ್ಲಿ ಜೂನ್ 13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೇವನಹಳ್ಳಿ, ಜೂನ್ 23: ಪ್ರೀತಿಸಿದ ಯುವತಿಯಿಂದ (girl) ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದು ಯುವಕ (boy) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್, ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ.
ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ
ಮಾತ್ರೆ ಸೇವಿಸಿದ್ದ ಮಂಜುನಾಥ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೊಬೈಲ್ ಪಾಸ್ವರ್ಡ್ ಸಮೇತ ಯುವಕ ಸೆಲ್ಫಿ ವಿಡಿಯೋ ಮಾಡಿದ್ದಾನೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಯುವತಿ ಮತ್ತು ಆಕೆ ಕುಟುಂಬಸ್ಥರು ನಾಪತ್ತೆ ಆಗಿದ್ದಾರೆ.
ಆಟವಾಡುತ್ತಿದ್ದ ಬಾಲಕಿ ಪುಸಲಾಯಿಸಿ ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ: ವಶಕ್ಕೆ
ಆಟವಾಡುತ್ತಿದ್ದ ಬಾಲಕಿ ಪುಸಲಾಯಿಸಿ ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಘಟನೆ ಭಾನುವಾರ ಸಂಜೆ ದಾವಣಗೆರೆ ತಾಲೂಕಿನ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಇಬ್ಬರನ್ನು ಹದಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!
ಮನೆಯಲ್ಲಿ ಮಗಳು ಇಲ್ಲದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬಹಿರಂಗವಾಗಿದೆ. 15 ವರ್ಷ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಕೃತ್ಯ ಎಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.







