‘ನನ್ನ ಮೇಲೆ ಸುಳ್ಳು ಪೋಕ್ಸೋ ಕೇಸ್ ಹಾಕಿದ್ದಾರೆ, ಅದಿಕ್ಕೆ ಹೀಗೆ ಮಾಡಿದೆ’: 9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ!

ದೇವನಹಳ್ಳಿಯಲ್ಲಿ ಯುವಕ ಆನಂದ್ 9 ಮಹಡಿ ಕಟ್ಟಡ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ ಆತ, ತನಗೆ ನ್ಯಾಯ ಬೇಕೆಂದು ಆಗ್ರಹಿಸಿ ಈ ಕೆಲಸಕ್ಕೆ ಮುಂದಾಗಿದ್ದ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಏಳು ಗಂಟೆಗಳ ಕಾರ್ಯಾಚರಣೆ ನಡೆಸಿ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿ ವಶಕ್ಕೆ ಪಡೆದಿದ್ದಾರೆ.

ನನ್ನ ಮೇಲೆ ಸುಳ್ಳು ಪೋಕ್ಸೋ ಕೇಸ್ ಹಾಕಿದ್ದಾರೆ, ಅದಿಕ್ಕೆ ಹೀಗೆ ಮಾಡಿದೆ: 9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ!
9ನೇ ಮಹಡಿಯಿಂದ ಹಾರಲು ಮುಂದಾಗಿದ್ದ ಯುವಕ ಆನಂದ್
Image Credit source: Tv9
Edited By:

Updated on: Apr 22, 2026 | 9:59 AM

ದೇವನಹಳ್ಳಿ, ಏಪ್ರಿಲ್ 22: ಬೈಪಾಸ್​​ನ ಖಾಸಗಿ ಅಪಾರ್ಟ್ಮೆಂಟ್ನ ಯುವಕನೋರ್ವ 9 ಮಹಡಿಗಳ ಬಿಲ್ಡಿಂಗ್ ಏರಿ ಹೈಡ್ರಾಮಾ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಯುವಕ ಆನಂದ್ ಪೋಕ್ಸೋ (POCSO) ಕೇಸ್​ನಲ್ಲಿ ಈಗಾಗಲೇ ಜೈಲೂಟದ ರುಚಿ ತಿಂದು ಇತ್ತೀಚೆಗಷ್ಟೇ ವಾಪಸಾಸಿದ್ದ ಬೆನ್ನಲ್ಲೇ ಮತ್ತೊಂದು ಅವಾಂತರ ಸೇಷ್ಟಿಸಿದ್ದಾನೆ. ನಿನ್ನೆ (21 ಏಪ್ರಿಲ್) ಮಧ್ಯಾಹ್ನ 12 ಗಂಟೆಯಿಂದಲೇ ಕೆಳಗೆ ಹಾರುವುದಾಗಿ ಬೆದರಿಕೆ ಹಾಕುತ್ತಿದ್ದವನನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಆತನ ಹುಚ್ಚಾಟದ ಹಿಂದಿನ ಕಾರಣ ಬಹಿರಂಗವಾಗಿದೆ.

ಅಪ್ರಾಪ್ತೆಯನ್ನು ಮದುವೆಯಾಗಿ ಜೈಲಿಗೆ ಹೋಗಿದ್ದ

ಆನಂದ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಅಂಬೇಡ್ಕರ್ ಕಾಲೋನಿಯ ನಿವಾಸಿ. ಶಾಲಾ ಕಾಲೇಜು ದಿನಗಳಲ್ಲಿಯೇ ಅದೇ ಏರಿಯಾದ 14 ವರ್ಷದ ಅಪ್ರಾಪ್ತ ಬಾಲಕಿಯನ್ನು 2023 ರಲ್ಲಿ ಪ್ರೀತಿಸಿದ್ದ. ಕದ್ದು ಮುಚ್ಚಿ ಮದುವೆಯೂ ಆಗಿದ್ದ. ಅಪ್ರಾಪ್ತೆಯನ್ನು ಮದುವೆಯಾಗಿದ್ದಕ್ಕೆ ಆತನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿ ಜೈಲು ಸೇರಿದ್ದ. ಆದರೆ ಆರೋಪಿ ಆನಂದ್ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದ. ಆಗಿದ್ದು ಆಗಿಹೋಯ್ತು ಎಂದು ಜೈಲಿನಿಂದ ಹೊರಬಂದ ನಂತರ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ.

ತನಗೆ ನ್ಯಾಯ ಬೇಕು, ಸ್ಥಳಕ್ಕೆ ಡಿಸಿ, ಕಮಿಷನರ್ ಬರಲೇಬೇಕು ಅಂತ ಪಟ್ಟು

ಹೀಗಿದ್ದರೂ ಆತನಿಗೆ ಸಮಾಧಾನವಿರಲಿಲ್ಲ. ಮತ್ತೆ ಅದೇ ಹುಡುಗಿಯ ಬಗ್ಗೆ ತಲೆಕೆಡಿಸಿಕೊಂಡಿದ್ದ. ಇದೇ ವಿಚಾರದಲ್ಲಿ ಹುಡುಗಿ ಕಡೆಯವರು ಮತ್ತೆ ಆನಂದ್ ಮೇಲೆ ಪೊಲೀಸರಿಗೆ ದೂರು ನೀಡಿದ್ದು, ಇತ್ತೀಚಿಗೆ ಗಲಾಟೆ ಕೇಸಲ್ಲೂ ಪೊಲೀಸರು ಕರೆದು ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ. ಇದೆಲ್ಲದರಿಂದ ಮನನೊಂದ ಆತ ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವನಹಳ್ಳಿ ಬೈಪಾಸ್ ಬದಿಯಲ್ಲಿರೋ ಖಾಸಗಿ ಅಪಾರ್ಟ್ಮೆಂಟ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ತನಗೆ ನ್ಯಾಯ ಬೇಕು, ಸ್ಥಳಕ್ಕೆ ಡಿಸಿ, ಕಮಿಷನರ್ ಬರಲೇಬೇಕು ಅಂತ ಪಟ್ಟು ಹಿಡಿದಿದ್ದ.

ಇದನ್ನೂ ಓದಿ ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ: ಮನವೊಲಿಕೆಗೂ ಬಗ್ಗದೆ ಮೊಂಡಾಟ

ಯುವಕ ಪೊಲೀಸರ ವಶಕ್ಕೆ

ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಎಸ್​ಡಿಆರ್​ಎಫ್ ತಂಡ ಸ್ಥಳಕ್ಕಾಗಮಿಸಿ ಯುವಕನನ್ನು ಮನವೊಲಿಸಲು ಹರಸಾಹಸಪಟ್ಟಿದ್ದಾರೆ. ಸಂಜೆ 7 ಗಂಟೆಯಾದರೂ ಆನಂದ್ ಇಳಿಯಲು ಸಮ್ಮತಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಾತುಕತೆ ನಡೆಸಿ, ಅವನ ಬೇಡಿಕೆಗಳನ್ನು ಪರಿಗಣಿಸುವ ಭರವಸೆ ನೀಡಿದ್ದಾರೆ. ಕೊನೆಗೆ ಸುಮಾರು ಏಳು ಗಂಟೆಗಳ ಕಾರ್ಯಾಚರಣೆ ಬಳಿಕ ಯುವಕನನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲು ಸಾಧ್ಯವಾಗಿದ್ದು, ಬಳಿಕ ದೇವನಹಳ್ಳಿ ಪೊಲೀಸರು ಆತನನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಆನಂದ್ ಹೇಳಿದ್ದೇನು?

ಕೆಳಗೆ ಬಂದ ಆನಂದ್ ಮಾಧ್ಯಮಗಳೊಂದಿಗೆ ಮಾತನಾಡಿ ತಾನು ಯಾವುದೇ ಹೈಡ್ರಾಮ ಮಾಡಿಲ್ಲ. ನನಗೆ ಬಹಳ ತೊಂದರೆ ಕೊಟ್ಟಿದ್ದಾರೆ. ಲವ್ ಮ್ಯಾಟರ್ ಅಲ್ಲಿ ನನ್ನ ಮೇಲೆ ಸುಳ್ಳು ಕಂಪ್ಲೇಂಟ್ ಕೊಟ್ಟಿದ್ರು. ಅದನ್ನ ವಾಪಾಸ್ ತಗೋಬೇಕು ಅಂತ ಹೀಗೆ ಮಾಡಿದ್ದೇನೆ ಎಂದಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us