AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಅತಿವೇವಾಗಿ ಬಂದ ಕಾರು ಡಿವೈಡರ್ ಹಾರಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿಯಾದ ಪರಿಣಾಕ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ. ಇದರಿಂದಾಗಿ ಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ದೇವನಹಳ್ಳಿ: ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಅಪಘಾತದ ರಭಸಕ್ಕೆ ನುಜ್ಜುಗುಜ್ಜಾಗಿರುವ ಕಾರು
ನವೀನ್ ಕುಮಾರ್ ಟಿ
| Edited By: |

Updated on:Dec 11, 2025 | 7:26 AM

Share

ದೇವನಹಳ್ಳಿ, ಡಿಸೆಂಬರ್ 11: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ದಿಕ್ಕಿನಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​​ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ಗೆ (KSRTC Bus) ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತದಲ್ಲಿ ಮೃತಪಟ್ಟವರನ್ನು ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ. ಇವರೆಲ್ಲ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ನಿವಾಸಿಗಳು.

ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ಅಪಘಾತದ ಕಾರಣ ಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ರಾತ್ರಿ ಟ್ರಾಫಿಕ್ ಜಾಮ್ ಉಂಟಾಯಿತು. ಅಪಘಾತದ ರಭಸಕ್ಕೆ ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಯಿತು. ಸದ್ಯ ಮೃತದೇಹಗಳನ್ನು ಆಕಾಶ್ ಆಸ್ವತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಈ ರೀತಿಯ ಕಾರು ಅಪಘಾತ ನೀವು ನೋಡಿರಲು ಸಾಧ್ಯವೇ ಇಲ್ಲ!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 am, Thu, 11 December 25

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ