AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಬಡವರಿಗೆ ನಿವೇಶನ ಹಂಚಿಕೆ ಹೆಸರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಭಾರಿ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಸಮತಟ್ಟಾದ ಭೂಮಿಯನ್ನು ಪ್ರಭಾವಿಗಳಿಗೆ ಮೀಸಲಿಟ್ಟು, 20-30 ಅಡಿ ಆಳದ ಕ್ವಾರಿ ಜಾಗವನ್ನು ಬಡವರಿಗೆ ಮಂಜೂರು ಮಾಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ
ಕ್ವಾರಿ ಜಾಗ
ನವೀನ್ ಕುಮಾರ್ ಟಿ
| Edited By: |

Updated on: Dec 19, 2025 | 7:24 PM

Share

ದೇವನಹಳ್ಳಿ, ಡಿಸೆಂಬರ್​ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು

ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ ನಿವೇಶನ ಪಡೆಯಲು ಕಾದು ಕುಳಿತಿದ್ದರು. ಜೊತೆಗೆ ಜನರ ಮನವಿಗೆ ಸ್ಪಂದಿಸಿದ ಸ್ಥಳಿಯ ಶಾಸಕ ಹಾಗೂ ಸಚಿವ ಕೆಹೆಚ್ ಮುನಿಯಪ್ಪ ಪಂಚಾಯತಿಗಳಲ್ಲಿ ಭುಮಿ ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಲು ಸೂಚಿಸಿದ್ದರು. ಅದರಂತೆ ನಿವೇಶನಗಳಿಗೆ ಸೂಕ್ತವಾದ ಜಾಗ ನೀಡಬೇಕಾದ ಕಂದಾಯ ಅಧಿಕಾರಿಗಳು ಇದೀಗ ಪಕ್ಕದಲ್ಲೇ ಸಮತಟ್ಟಾದ ಭೂಮಿ ಇದ್ದರು ಕಲ್ಲು ಕ್ವಾರಿಯ ಜಮೀನನ್ನ ಮಂಜೂರು ಮಾಡಿದ್ದಾರಂತೆ.

ಇದನ್ನೂ ಓದಿ: ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?

ಹೀಗಾಗೆ ಕಲ್ಲು ಕ್ವಾರಿಯ ಜಮೀನಿನಲ್ಲಿ ಯಾವ ರೀತಿ ಮನೆ ಕಟ್ಟಲು ಸದ್ಯವಾಗುತ್ತೆ ಅಂತ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ರೊಚಿಗೆದ್ದಿದ್ದು, ಕಲ್ಲು ಕ್ವಾರಿ ಜಮೀನು ಮಂಜೂರು ಮಾಡಿರುವುದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರಿಗೆ ಅನುಕೂಲ ಮಾಡಲು ಈ ರೀತಿ ಉತ್ತಮ ಜಾಗ ಬಿಟ್ಟು ಕಲ್ಲುಗಳಿರುವ ಜಾಗ ನೀಡಿದ್ದಾರೆ ಅಂತ ಪಿಡಿಒ ಸೇರಿದಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರಾದ ಗೋವಿಂದರಾಜು ಎನ್ನುವವರು ಆಕ್ರೋಶ ಹೊರಹಾಕಿದ್ದಾರೆ.

ಆಶ್ರಯ ಯೋಜನೆಯಡಿಯಲ್ಲಿ ಬಡ ಜನರಿಗೆ ನಿವೇಶನ ನೀಡಲು ಕಲ್ಲು ಕ್ವಾರಿ ಜಾಗ ಗುರುತಿಸಿರುವುದು ಯಾವ ಮಾನದಂಡದ ಮೇಲೆ ಅಂತ ಇಓ ಮತ್ತು ತಹಶೀಲ್ದಾರ್​​​ಗೆ ಗ್ರಾಮಸ್ಥರು ದೂರು ನೀಡಿದ್ದು, ಕಲ್ಲು ಬಂಡೆ ಜಮೀನು ಹಿಂಪಡೆದು ಸಮತಟ್ಟಾದ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ.

ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಹೇಳಿದ್ದಿಷ್ಟು 

ಇನ್ನು ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಮಾತನಾಡಿದ್ದು, ಕಂದಾಯ ಇಲಾಖೆ ನಮ್ಮ ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡಿದ್ದು, ನಾವು ಆ ಜಮೀನು ಕೊಡುವಂತೆ ಕೇಳಿಲ್ಲ. ಇದೀಗ ಅದು ನಿವೇಶನಗಳಿಗೆ ಯೋಗ್ಯವಾಗದ ಕಾರಣ ಆ ಜಮೀನನ್ನ ವಾಪಸ್ ಪಡೆಯುವಂತೆ ಡಿಸಿ ಅವರಿಗೆ ಪತ್ರ ಬರೆದಿದ್ದು, ಬದಲಿಯಾಗಿ ಯೋಗ್ಯವಾದ ಜಮೀನು ನಿವೇಶನಗಳಿಗೆ ನೀಡುವಂತೆ ಕೇಳಿದ್ದೇವೆ ಎಂದರು.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಒಟ್ಟಿನಲ್ಲಿ ಏರ್ಪೋಟ್ ಬಳಿ ಭೂಮಿ ಬೆಲೆ ಗಗನಕ್ಕೇರುತ್ತಿದ್ದು ಒಂದಿಚ್ಚು ಭೂಮಿ ಬಂಗಾರದ ಬೆಲೆಬಾಳುತ್ತಿದೆ. ಈ ನಡುವೆ ಸರ್ಕಾರದಿಂದ ನಿವೇಶನ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಅಧಿಕಾರಿಗಳ ಎಡವಟ್ಟಿನಿಂದ ಆತಂಕ ಶುರುವಾಗಿದೆ. ಸದ್ಯ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಆಶ್ರಯ ಯೋಜನೆಗೆ ಸೂಕ್ತ ಭೂಮಿ ನೀಡುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ