AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ಆಚೆ ಬಿಡುವ ಪೋಷಕರೇ ಎಚ್ಚರ; 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ. ಅದೃಷ್ಟವಶಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮಕ್ಕಳನ್ನು ಆಚೆ ಬಿಡುವ ಪೋಷಕರೇ ಎಚ್ಚರ; 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ
ದೇವನಹಳ್ಳಿ: 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ, ಮುಖಕ್ಕೆ ಗಾಯ
ನವೀನ್ ಕುಮಾರ್ ಟಿ
| Edited By: |

Updated on: Jul 08, 2024 | 10:07 AM

Share

ದೇವನಹಳ್ಳಿ, ಜುಲೈ.08: 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು (Street Dogs) ದಾಳಿ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ 4 ವರ್ಷದ ಅವಾಜ್ ಬಾಷಾ ಎಂಬ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ನಿನ್ನೆ ಸಂಜೆ ಮಕ್ಕಳ‌ ಜೊತೆ ಅಂಗಡಿಗೆ ಹೋಗುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಬೀದಿನಾಯಿಗಳು ಮಗುವನ್ನು ಕಚ್ಚಿ ಘಾಸಿಗೊಳಿಸಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಮಗು ಪಾರಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೂರು ತಿಂಗಳ ಹೆಣ್ಣು ಮಗುವನ್ನು ಅನಾಥ ಮಾಡಿದ ತಾಯಿ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಹೆಡಗರಹಳ್ಳಿ ಗ್ರಾಮದಲ್ಲಿ ಮುದ್ದಾದ ಮೂರು ತಿಂಗಳ ಹೆಣ್ಣು ಮಗುವನ್ನ ನಿರ್ದಯಿ ತಾಯಿ ಅನಾಥವಾಗಿ ಬಿಟ್ಟುಹೋಗಿದ್ದಾಳೆ. ಆಶಾ ಕಾರ್ಯಕರ್ತೆಯೊಬ್ಬರು ವಾಕಿಂಗ್ ಮಾಡುವ ವೇಳೆ ಮಗುವಿನ ಅಳುವಿನ ಶಬ್ಧ ಕೇಳಿಸಿದ್ದು ಸ್ಥಳಕ್ಕೆ ಹೋಗಿ ನೋಡಿದಾಗ ಮಗು ಪತ್ತೆಯಾಗಿದೆ. ಆಶಾ ಕಾರ್ಯಕರ್ತೆ ಕಲಾವತಿಯವರು ತಕ್ಷಣ ನೊಣವಿನಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಆಂಬುಲೆನ್ಸ್ ಮೂಲಕ ಮಗುವನ್ನ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಆರೋಗ್ಯವಾಗಿದೆ. ಮಗು 4.5ಕೆ.ಜಿ ತೂಕವಿದ್ದು ಮಕ್ಕಳ ತಜ್ಞೆ ಡಾ.ಶಿರಿಷ ಅವರಿಂದ ಮಗುವಿನ ಆರೋಗ್ಯ ತಪಾಸಣೆ ನಡೆಸಲಾಗಿದೆ. ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಗಂಡು ಮಗುವಿಗೆ ಜನ್ಮ ನೀಡಿದ ರೀಟಾ, ವಿಡಿಯೋ ನೋಡಿ

ಗೋಮಾಂಸ ಮಾರುತ್ತಿದ್ದವರ ವಿರುದ್ಧ FIR

ಗೋಮಾಂಸ ಮಾರಾಟ ಮಾಡುತ್ತಿದ್ದವರನ್ನ ಹಿಂದೂ ಕಾರ್ಯಕರ್ತರು ತಡೆದು, ದೂರು ದಾಖಲಿಸಿದ್ದಾರೆ. ಬಾಗಲಕೋಟೆ ‌ಜಿಲ್ಲೆ ಹುನಗುಂದ ತಾಲ್ಲೂಕಿನ ಕಮತಗಿಯಲ್ಲಿ ಘಟನೆ ನಡೆದಿದ್ದು, ಮನೆ ಮನೆಗೂ ತೆರಳಿ ಗೋಮಾಂಸ ಮಾರಾಟ ಮಾಡುತ್ತಿದ್ದ ನಾಲ್ವರ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ. ಶಬ್ಬೀರ್ ಬೇಪಾರಿ, ಕಮಲಸಾಬ್ ಬೇಪಾರಿ, ಮಹಿಬೂಬಸಾಬ ಬೇಪಾರಿ, ಮೌಲಾಲಿ ವಿರುದ್ಧ ಅಮೀನಗಢ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ