ಹೊಸಕೋಟೆಯಲ್ಲಿ ಓರ್ವ ಮಹಿಳೆ ಸಾವು, 271 ಜನ ಅಸ್ವಸ್ಥ: ಬಯಲಾಯ್ತು ವಿಷ ಪ್ರಸಾದ ಹಿಂದಿನ ಸತ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರ ಹಾಗೂ ಸುತ್ತಾಮುತ್ತ ಕಳೆದ ಶನಿವಾರ ಮತ್ತು ಭಾನುವಾರ ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ಅಂತ ಸಾವಿರಾರು ಜನ ಪ್ರಸಾದ ಸೇವಿಸಿದ್ದರು. ಆ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 271 ಜನ ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥರಾದವರ ಲ್ಯಾಬ್ ರಿಪೋರ್ಟ್ ಬಂದಿದ್ದು, ಪ್ರಸಾದ ವಿಷವಾಗಲು ನೀರು ಕಾರಣವಾಗಿದೆ.

ಹೊಸಕೋಟೆಯಲ್ಲಿ ಓರ್ವ ಮಹಿಳೆ ಸಾವು, 271 ಜನ ಅಸ್ವಸ್ಥ: ಬಯಲಾಯ್ತು ವಿಷ ಪ್ರಸಾದ ಹಿಂದಿನ ಸತ್ಯ
ಅಸ್ವಸ್ಥಗೊಂಡವರಿಗೆ ಚಿಕಿತ್ಸೆ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 28, 2023 | 3:08 PM

ದೇವನಹಳ್ಳಿ, ಡಿಸೆಂಬರ್​ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (Hoskote) ಯಲ್ಲಿ ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು ಮತ್ತು 271 ಜನ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ ಪ್ರಸಾದ ದುರಂತದ ಹಿಂದಿನ ಸತ್ಯ ಇದೀಗ ಬಯಲಾಗಿದೆ. ಪ್ರಸಾದ ವಿಷವಾಗಲು ನೀರು ಕಾರಣವಾಗಿದೆ ಎಂದು ಪ್ರಸಾದ ದುರಂತದಿಂದ ಅಸ್ವಸ್ಥರಾದವರ ಲ್ಯಾಬ್ ರಿಪೋರ್ಟ್​ನಲ್ಲಿ ಈ ಆತಂಕಕಾರಿ ಅಂಶ ಬಯಲಾಗಿದೆ.

ಕಾಲರಾದಿಂದ ವಿಷವಾಯಿತು ದೇವಾಲಯದ ಪ್ರಸಾದ

ಖಾಸಗಿ ಆಸ್ವತ್ರೆಗಳಿಗೆ ದಾಖಲಾಗಿದ್ದ ಎಲ್ಲರ ಲ್ಯಾಬ್ ರಿಪೋರ್ಟ್​ನಲ್ಲಿ ಕಾಲರಾ ಅಂಶ‌ ಪತ್ತೆ ಆಗಿದೆ. ಕಾಲರಾದಿಂದ ನೂರಾರು ಜನರಿಗೆ ವಾಂತಿ ಬೇದಿ ಶುರುವಾಗಿದೆ. ನಗರದಲ್ಲಿ ಸ್ವಚ್ಚತೆಯಿಲ್ಲದ ಕಾರಣ ಕಾಲರಾ ಹರಡಿರುವ ಭೀತಿ ಎದುರಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು

ಸದ್ಯ ಲ್ಯಾಬ್ ರಿಪೋರ್ಟ್ ಜಿಲ್ಲಾಡಳಿತ ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಡಿಮೆ ಪ್ರಮಾಣದಲ್ಲಿ ಕಾಲರಾ ಇರುವುದು ಸ್ವಲ್ಪ ಸಮಾಧಾನವಾಗಿದೆ. ಕಾಲರಾ‌ ಅಂಶ ತಿಳಿಯಲು‌ ನೀರಿನ ಮಾದರಿ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಎಷ್ಟು ಪ್ರಮಾಣದಲ್ಲಿ ಎಲ್ಲೆಲ್ಲಿ ಕಾಲರಾ ಹಬ್ಬಿದ ಅಂತ ಅಧಿಕಾರಿಗಳಿಂದ ತನಿಖೆ ಮಾಡಲಾಗುತ್ತಿದೆ.

ಹೊಸಕೋಟೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ 136 ಕ್ಕೂ ಅಧಿಕ ಜನ ಇದೇ ರೀತಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದು ನೂರಾರು ಜನರು ಆಸ್ಪತ್ರೆಯತ್ತ ದಾವಿಸಿ ಬಂದಿದ್ದರು. ಹೀಗಾಗಿ ಒಮ್ಮೆಲೆ ನೂರಾರು ಜನ ಬಂದ ಕಾರಣ ಆಸ್ಪತ್ರೆಯಲ್ಲಿ ಬೆಡ್ಗಳಿಲ್ಲದೆ ಜನ ಪರದಾಡಿ ಕೆಲವರು ಸಿಕ್ಕ ಸಿಕ್ಕ ಆಸ್ವತ್ರೆ ಸೇರಿದ್ರೆ ಇನ್ನೂ ಕೆಲವರು ಕೋಲಾರ ಬೆಂಗಳೂರಿನ ಆಸ್ವತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದ್ದರು.

ಇದನ್ನೂ ಓದಿ: ರಾಯಚೂರು: ಊಟ ಸೇವಿಸಿದ್ದ ಹಾಸ್ಟೆಲ್​ನ 14 ವಿದ್ಯಾರ್ಥಿಯರು ಅಸ್ವಸ್ಥ

ಇನ್ನೂ ಪ್ರಸಾದ ಸೇವಿಸಿ ಮಹಿಳೆ ಮೃತಪಟ್ಟಿದ್ದಾಳೆ ಅನ್ನೂ ವಿಚಾರ ತಿಳಿಯುತ್ತಿದ್ದಂತೆ ಸ್ಥಳಿಯ ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಧಿಕಾರಿಗಳ ವಿರುದ್ದ ಗರಂ ಆಗಿದ್ದರು. ಹಬ್ಬ ಹರಿದಿನಗಳಲ್ಲಿ ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ದ ಕೆಂಡಾಮಂಡಲವಾಗಿದ್ದರು.

ಅಲ್ಲದೆ ಸಭೆ ಮುಗಿಸಿ ಆಸ್ವತ್ರೆಗಳಿಗೆ ಭೇಟಿ ನೀಡಿದ ಶರತ್ ಬಚ್ಚೇಗೌಡ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಜನರು ಹಾಗೂ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದರು. ಇನ್ನೂ ಮೆಲ್ನೂಟಕ್ಕೆ 8 ವಿವಿಧ ದೇವಸ್ಥಾನಗಳಲ್ಲಿ ಪ್ರಸಾದ ಸ್ವೀಕರಿಸಿದವರಲ್ಲಿ ಹೆಚ್ಚಾಗಿ ಮಹಿಳೆಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ಬಗ್ಗೆ ತನಿಖೆ ನಡೆಸಿ ಖಾಸಗಿ ಆಸ್ವತ್ರೆಯಲ್ಲಿರುವವರ ಚಿಕಿತ್ಸಾ ವೆಚ್ಚ ಭರಿಸುವ ಬಗ್ಗೆ ಸರ್ಕಾರದ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ