ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್!

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ವಸತಿ ಶಾಲೆಯ ಮಾಲೀಕ ಮತ್ತು ಆತನ ಪತ್ನಿ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಎಸಗಿದ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಾಲೀಕ ಬಾಲಕಿಯರಿಗೆ ಕಿರುಕುಳ ನೀಡಿದ್ದು, ಪತ್ನಿ ವಿಷಯ ಮುಚ್ಚಿಡಲು ಒತ್ತಡ ಹೇರಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪೋಷಕರಿಗೆ ದೂರು ನೀಡದಂತೆ ಎಂಟು ದಿನ ಹೊರಗೆ ಹೋಗಲು ಬಿಡದೆ ಹಿಂಸೆ ನೀಡಲಾಗಿದೆ ಎನ್ನಲಾಗಿದೆ.

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್!
ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್!
Edited By:

Updated on: Feb 28, 2026 | 9:52 AM

ದೇವನಹಳ್ಳಿ, ಫೆಬ್ರವರಿ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದಲ್ಲಿರುವ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ವಸತಿ ಶಾಲೆಯ ಮಾಲೀಕ ಧನಂಜಯ್ (A1) ಮತ್ತು ಅವರ ಪತ್ನಿ ಶೈಲಜಾ (A2) ವಿರುದ್ಧ ಪೋಕ್ಸೋ ಕಾಯ್ದೆಯಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನ ವಿಕೃತಿಗೆ ಹೆಂಡತಿ ಸಾಥ್!

ವಸತಿ ಶಾಲೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಬಾಲಕಿಯರಿಗೆ ಅದರ ಮಾಲೀಕನೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಧನಂಜಯ್ ರಾತ್ರಿವೇಳೆ ಮದ್ಯದ ಅಮಲಿನಲ್ಲಿ ಬಾಲಕಿಯರ ಕೊಠಡಿಗೆ ತೆರಳಿ, ಒಮ್ಮೊಮ್ಮೆ ವಾರ್ಡನ್ ಕೊಠಡಿಗೆ ಕರೆಸಿ ಕಿರುಕುಳ ನೀಡುತ್ತಿದ್ದ. ತಾತನ ವಯಸ್ಸಾಗಿದ್ದರೂ ಪುಟ್ಟ ಬಾಲಕಿಯರ ಮೇಲೆ ದೌರ್ಜನ್ಯ ಎಸಗುತ್ತಿದ್ದವನ ಕರ್ಮಕಾಂಡವನ್ನು ಸಹಿಸಲಾಗದ ಮಕ್ಕಳು ಆತನ ಪತ್ನಿ ಶೈಲಜಾಗೆ ಈ ಬಗ್ಗೆ ಹೇಳಿದ್ದರು. ಆದರೆ ಆಕೆಯೂ ಗಂಡನ ನೀಚ ಕೃತ್ಯಕ್ಕೆ ಸಾಥ್ ನೀಡಿ, ಕಿರುಕುಳದ ಬಗ್ಗೆ ಯಾರಿಗೂ ಹೇಳದಂತೆ ತಾಕೀತು ಮಾಡಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

8 ದಿನಗಳ ಕಾಲ ಬಾಲಕಿಯರ ಮೇಲೆ ಒತ್ತಡ

ಇದೇ ನರಕದಲ್ಲಿ ಬೇಯುತ್ತಿದ್ದ ಬಾಲಕಿಯರ ಮೇಲೆ ಒತ್ತಡ ಹೇರಿದ್ದ ದಂಪತಿ, ವಸತಿ ಶಾಲೆಯಲ್ಲಿ ನಡೆದ ದೌರ್ಜನ್ಯದ ಕುರಿತು ಯಾರ ಬಳಿಯೂ ಹೇಳದಂತೆ ಒತ್ತಡ ಹೇರುತ್ತಿದ್ದರು. ಅದರಲ್ಲಿಯೂ ಪಾಲಕರಿಗೆ ಸುದ್ದಿ ಮುಟ್ಟಿಸಬಾರದೆಂದು ಸತತ 8 ದಿನ ಹೊರಗೆ ಹೋಗಲೂ ಬಿಡದೆ, ಪೋಷಕರಿಗೆ ಕರೆ ಮಾಡಲೂ ಬಿಡದೆ ಕಿರುಕುಳ ನೀಡಿದ್ದರು ಎಂದು ಬಾಲಕಿಯರು ಹೇಳಿದ್ದಾರೆ. ಅದಾದ ಬಳಿಕ ನಿನ್ನೆ (ಫೆ.27) ಪೋಷಕರಿಗೆ ಕರೆ ಮಾಡಿದ ಬಾಲಕಿಯರು ತಮ್ಮ ಮೇಲಾದ ದೌರ್ಜನ್ಯವನ್ನು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೆ ಶಾಲೆ ಬಳಿ ಬಂದ ಬಾಲಕಿಯರ ಪೋಷಕರು ದಂಪತಿ ವಿರುದ್ಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಆತ್ಮಹತ್ಯೆ? ಹಸೆಮಣೆ ಏರಬೇಕಿದ್ದವಳ ದಾರುಣ ಅಂತ್ಯ

ಈ ವಸತಿ ಶಾಲೆಯಲ್ಲಿ ಸುಮಾರು 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಇದರ ಮಾಲೀಕ ಧನಂಜಯ್ ಅನುದಾನ‌ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷನೂ ಹೌದು. ಈತನ ಕುಕೃತ್ಯದಿಂದ ನೊಂದ ಬಾಲಕಿಯರಿಗೆ ಅವನ ಹೆಂಡತಿ ಪಪ್ಪಾಯ ತಿನ್ನಿಸಿದ್ದು, ತನಿಖೆ ವೇಳೆ ದಂಪತಿ ಈ ಎಲ್ಲಾ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಸಧ್ಯಕ್ಕೆ ಇವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us