ದೇವನಹಳ್ಳಿ: ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆಗೊಳಿಸಿದ ಮೋದಿ: ಏನಿದು? ಎಷ್ಟು ಕೋಟಿ ಖರ್ಚಾಗಿದೆ? ಇಲ್ಲಿದೆ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್​ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಲಾಗಿದೆ.

Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jan 19, 2024 | 3:41 PM

ಬೆಂಗಳೂರು ಗ್ರಾಮಾಂತರ, ಜನವರಿ 19: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್​ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್​ ನಿರ್ಮಾಣ ಮಾಡಲಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್​ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್​​ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​. ಅಶೋಕ್​ ಉಪಸ್ಥಿತರಿದ್ದರು.

ಬಿಐಇಟಿಸಿ ಕೇಂದ್ರದಿಂದ ಜಾಗತಿಕ ಏರೋಸ್ಪೇಸ್ ಉದ್ಯಮದ ಪ್ರಗತಿಗೆ ನೆರವು ನೀಡಲಾಗುತ್ತಿದೆ. 3,000ಕ್ಕೂ ಹೆಚ್ಚು ಇಂಜಿನಿಯರ್‌ಗಳನ್ನು ಹೊಂದುವ ಗುರಿಯನ್ನು ಬಿಐಇಟಿಸಿ ಹಾಕಿಕೊಂಡಿದೆ. ಸಂಶೋಧನೆ ಮತ್ತು ಅಭಿವೃದ್ಧಿ, ಕೃತಕ ಬುದ್ಧಿಮತ್ತೆ, ಮೆಷಿನ್ ಲರ್ನಿಂಗ್, ಇಂಡಸ್ಟ್ರಿಯಲ್ ಇಂಟರ್ನೆಟ್ ಆಫ್ ಥಿಂಗ್ಸ್, ಕ್ಲೌಡ್ ಕಂಪ್ಯೂಟಿಂಗ್, ಮಾಡೆಲ್ ಆಧಾರಿತ ಇಂಜಿನಿಯರಿಂಗ್ ಮತ್ತು ಅಡ್ಡಿಟಿವ್ ಉತ್ಪಾದನೆಯತ್ತ ಗಮನ ಕೇಂದ್ರೀಕರಿಸಲಿದೆ.

ಏನಿದು ಬೋಯಿಂಗ್ ಸುಕನ್ಯಾ ಯೋಜನೆ?

ದೇಶಾದ್ಯಂತ ಹೆಚ್ಚು ಹೆಣ್ಣು ಮಕ್ಕಳು ವೈಮಾನಿಕ ವಲಯಕ್ಕೆ ಸೇರಲು ನೆರವಾಗುವ ಉದ್ದೇಶ ಹೊಂದಿರುವ ಬೋಯಿಂಗ್ ಸುಕನ್ಯಾ ಯೋಜನೆ. ಈ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಪ್ರಮುಖ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕೌಶಲಗಳನ್ನು ಸಂಪಾದಿಸಲು ಅವಕಾಶ ಕಲ್ಪಿಸಲಿದೆ. ಹೆಣ್ಣು‌ಮಕ್ಕಳನ್ನು ವೈಮಾನಿಕ ಉದ್ಯೋಗಗಳಿಗೆ ಸಿದ್ಧಗೊಳಿಸಲಿದೆ.

ಬಾಲಕಿಯರಿಗಾಗಿ ಬೋಯಿಂಗ್ ಸುಕನ್ಯಾ ಯೋಜನೆ 150 ಸ್ಥಳಗಳಲ್ಲಿ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ತೆರೆಯಲಿದೆ. ವೈಮಾನಿಕ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಉತ್ತೇಜನ ನೀಡಲಿರುವ ಯೋಜನೆ. ಈ ಯೋಜನೆಯಡಿ ಪೈಲಟ್ ಆಗಲು ತರಬೇತಿ ಪಡೆಯುತ್ತಿರುವ ಬಾಲಕಿಯರಿಗೂ ವಿದ್ಯಾರ್ಥಿ ವೇತನ ಸಿಗಲಿದೆ.

ಬೋಯಿಂಗ್‌ ಇಂಡಿಯಾ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಸೆಂಟರ್‌ ಬಗ್ಗೆ

  • ಅಮೆರಿಕಾದಿಂದ ಹೊರಗೆ, ಸ್ಥಾಪನೆಯಾಗಿರುವ ಬೋಯಿಂಗ್ ಸಂಸ್ಥೆಯ ಅತಿದೊಡ್ಡ ಘಟಕವಾಗಿದೆ. 1,600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 43 ಎಕರೆಗಳಷ್ಟು ವಿಶಾಲ ಪ್ರದೇಶದಲ್ಲಿ ಬಿಐಇಟಿಸಿ ಕ್ಯಾಂಪಸ್ ವ್ಯಾಪಿಸಿದೆ.
  • ಈ ಸಂಸ್ಥೆ ಭಾರತೀಯ ಪ್ರತಿಭೆಗಳನ್ನು ಸ್ವಾಗತಿಸಲಿದ್ದು, ಅದರಲ್ಲೂ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳ ಪ್ರತಿಭೆಗಳಿಗೆ ಅವಕಾಶಗಳನ್ನು ಒದಗಿಸಲಿದೆ.
  • ಬಿಐಇಟಿಸಿ ಭಾರತದಲ್ಲಿ ಬೋಯಿಂಗ್‌‌ ಸಂಸ್ಥೆಯ ಅತಿದೊಡ್ಡ ವಿಭಾಗವಾಗಿದೆ.
  • ದೇಶದ ಸ್ಟಾರ್ಟಪ್‌ಗಳು, ಖಾಸಗಿ ವಲಯ ಮತ್ತು ಸರ್ಕಾರದೊಡನೆ ಈ ಬಿಐಇಟಿಸಿ ಕೇಂದ್ರ ಕಾರ್ಯಾಚರಿಸಲಿದೆ.
  • ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕೆ ನೂತನ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕೇಂದ್ರ ಗಮನ ಹರಿಸಲಿದೆ.
  • ಬಿಐಇಟಿಸಿ ಕೇಂದ್ರದಿಂದ ಜಾಗತಿಕವಾಗಿ ಏರೋಸ್ಪೇಸ್ ಉದ್ಯಮದ ಪ್ರಗತಿಗಾಗಿ ಕಾರ್ಯಾಚರಿಸಲು ಇನ್ನಷ್ಟು ಸಹಕಾರಿ.

ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಕೊಡುಗೆ ಬಹಳ ಇದೆ: ಪ್ರಧಾನಿ ಮೋದಿ

ಬಿಐಇಟಿಸಿ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಕೊಡುಗೆ ಬಹಳ ಇದೆ. ಮೇಕ್ ಇನ್ ಇಂಡಿಯಾ ಸಂಕಲ್ಪವನ್ನು ಸಶಕ್ತೀಕರಣಗೊಳಿಸುತ್ತದೆ. ಭವಿಷ್ಯದ ದಿನದಲ್ಲಿ ಏರ್​ಕ್ರಾಫ್ಟ್​​ನ ಡಿಸೈನ್ ಕೂಡ ಭಾರತ ಮಾಡಲಿದೆ. ಭಾರತದ ಯುವಸಮೂಹವನ್ನು ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ. ತಂತ್ರಜ್ಞಾನ ಕ್ಷೇತ್ರದಲ್ಲಿ ನಿಮಗೆ ಹೊಸ ಅವಕಾಶಗಳು ಬರುತ್ತಿದೆ. ಭಾರತದಲ್ಲಿ ಶೇ.15ರಷ್ಟು ಮಹಿಳಾ ಪೈಲಟ್​​ಗಳಿದ್ದಾರೆ. ಬಡ ವಿದ್ಯಾರ್ಥಿಗಳು ಪೈಲಟ್​ ಆಗುವ ಕನಸು ಇಂದು ನನಸಾಗುತ್ತಿದೆ ಎಂದು ಹೇಳಿದ್ದಾರೆ.

ಬೋಯಿಂಗ್ ಸುಕನ್ಯಾ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಭಾರತ ಇಂದು ವಿಶ್ವದ 3ನೇ ಡೊಮೆಸ್ಟಿಕ್ ಮಾರ್ಕೆಟ್​ ಆಗಿದೆ. ವೈಮಾನಿಕ ಕ್ಷೇತ್ರದಲ್ಲಿ ಭಾರತ ಹೊಸ ಮೈಲಿಗಲ್ಲು ಸೃಷ್ಟಿಸಲಿದೆ. ವೈಮಾನಿಕ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶ ಸಿಗುತ್ತಿವೆ. ಚಂದ್ರಯಾನ ಮೂಲಕ ಯಾವ ದೇಶವೂ ತಲುಪದ ಕಡೆ ತಲುಪಿದ್ದೇವೆ. ನಮ್ಮ ಸ್ಥಾನ ವಿಶ್ವದಲ್ಲಿ ಇನ್ನೂ ಮೇಲಿನ ಸ್ತರಕ್ಕೆ ಈ ಮೂಲಕ ಹೋಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:13 pm, Fri, 19 January 24

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?