ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ದರೋಡೆ ನಡೆದಿದೆ. ರೈಡ್​ ಮಾಡುವ ನೆಪದಲ್ಲಿ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು ಬರೋಬ್ಬರಿ 24 ಲಕ್ಷ ರೂ ದೋಚಿ ಖದೀಮರು ಪರಾರಿಯಾಗಿದ್ದಾರೆ. ಸದ್ಯ ದೇವನಹಳ್ಳಿ ಪೊಲೀಸರು 09 ಜನ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು
ದೇವನಹಳ್ಳಿ ಪೊಲೀಸ್ ಠಾಣೆ
Image Credit source: tv9 kannada
Edited By:

Updated on: Feb 23, 2026 | 4:11 PM

ದೇವನಹಳ್ಳಿ, ಫೆಬ್ರವರಿ 23: ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು 24 ಲಕ್ಷ ರೂ ಹಣವನ್ನ ದೋಚಿ (Robbery) ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿದಂತೆ 12 ಜನರ ಪೈಕಿ 09 ಆರೋಪಿಗಳನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ, ಮುರುಗೇಶನ್, ಶಿವ, ಲತೀಪ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣವನ್ನು ಜಪ್ತಿ ಮಾಡಲಾಗಿದೆ.

ನಡೆದಿದ್ದೇನು? 

ಶಂಕರಪ್ಪ ಎಂಬುವವರಿಗೆ ಹಣ ತ್ರಿಬಲ್ ಮಾಡಿಕೊಡುವುದಾಗಿ ಹೇಳಿ ಎ1 ಆರೋಪಿ ಕೃಷ್ಣ ಕುಮಾರ್​​​ ಫೋನ್​ ಮಾಡಿ ಕರೆಸಿಕೊಂಡಿದ್ದಾನೆ. ಅದರಂತೆ ಶಂಕರಪ್ಪ ಚಿನ್ನಾಭರಣ ಅಡವಿಟ್ಟು 24 ಲಕ್ಷ ರೂ ಹಣವನ್ನು ತಂದಿದ್ದಾರೆ. ಇತ್ತ ಮೊದಲೇ ಮಾಡಿಕೊಂಡಿದ್ದ ಪ್ಲ್ಯಾನ್​​ನಂತೆ ಖಾಸಗಿ ಕಾರಿನಲ್ಲಿ ಕೃಷ್ಣ ಕುಮಾರ್ ಸಹಚರರು ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಹೆಸರಿನಲ್ಲಿ ಖಾಸಗಿ‌ ಕಾರ್​​ಗೆ ಬೋರ್ಡ್ ಹಾಕಿಕೊಂಡು ಅಧಿಕಾರಿಗಳ ಸೋಗಿನಲ್ಲಿ ಬಂದು 24 ಲಕ್ಷ ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಫ್ಲಿಪ್‌ಕಾರ್ಟ್​​ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ

ಹಣ ಎಗರಿಸಿದ ನಂತರ ಎ1 ಆರೋಪಿ ಕೃಷ್ಣಕುಮಾರ್​​ ಪೊಲೀಸ್ ಠಾಣೆಗೆ ಬಂದು ತಾನೇ ದೂರು ನೀಡಿದ್ದ. ಪೊಲೀಸರ ವಿಚಾರಣೆ ವೇಳೆ ದೂರು‌ ನೀಡಿದ್ದ ಆರೋಪಿಯೇ ದರೋಡೆಕೋರ ಎನ್ನುವುದು ಬಯಲಾಗಿದೆ. ಸದ್ಯ ದೇವನಹಳ್ಳಿ ಠಾಣೆ ಪೊಲೀಸರು 12 ಜನರಲ್ಲಿ 09 ಆರೋಪಿಗಳನ್ನ ಬಂಧಿಸಿದ್ದಾರೆ.

ಪ್ರತಿಷ್ಠಿತ ಕೆನರಾ ಬ್ಯಾಂಕ್​ನಲ್ಲಿ ಕಳ್ಳತನಕ್ಕೆ ಯತ್ನ

ಇನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಪ್ರತಿಷ್ಠಿತ ಕೆನರಾ ಬ್ಯಾಂಕ್​​ನಲ್ಲಿ ಬೆಳಗಿನ ಜಾವ 3ರ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿರುವಂತಹ ಘಟನೆ ನಡೆದಿದೆ. ಸೈರನ್ ಆಗುತ್ತಿದ್ದಂತೆ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ದರೋಡೆ ಕೇಸ್​​ ಬೇಧಿಸಿದ ಬೆಂಗಳೂರು ಪೊಲೀಸ್​​: ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ ಘೋಷಣೆ

ರಾತ್ರಿ ಬ್ಯಾಂಕ್ ಹಿಂಬದಿ ಇದ್ದ ಗ್ರಿಲ್ ಕಟ್ ಮಾಡಿ ಒಳ ನುಗ್ಗಿರುವ ಕಳ್ಳ, ಪೂರ್ತಿ ಬ್ಯಾಂಕ್ ಸರ್ಚ್ ಮಾಡಿದ್ದಾನೆ. ಸ್ಟ್ರಾಂಗ್ ರೂಮ್ ಹತ್ತಿರ ಹೋಗಿ ವೈರ್ ಕಟ್ ಮಾಡಿದ್ದು, ವೈರ್ ಕಟ್ ಮಾಡುತ್ತಿದಂತೆ ಸೈರನ್ ಆನ್ ಆಗಿದೆ. ಬಳಿಕ ಅಲ್ಲಿಂದ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us