ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ

ಪ್ರೀತಿಸಲು ನಿರಾಕರಿಸಿದಳೆಂದು ಯುವಕನೊಬ್ಬ ಆಕೆಯ ಕತ್ತನ್ನೇ ಸೀಳಿ ಹತ್ಯೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Dec 23, 2022 | 1:30 PM

ದೇವನಹಳ್ಳಿ: ತನ್ನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬನೊಂದಿಗೆ ನಿಶ್ಚಿತಾರ್ಥಕ್ಕೆ ತಯಾರಿ ನಡೆಸುತ್ತಿದ್ದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ ದಾವಣಗರೆಯಲ್ಲಿ ನಡು ರಸ್ತೆಯಲ್ಲಿ ಕತ್ತು ಸೀಳಿ ಕೊಲೆ  (Youth Kills Young Girl)ಮಾಡಿದ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಘಟನೆ ಮರುಕಳಿಸಿದೆ. ಯುವಕನೊಬ್ಬ ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕತ್ತುಕೊಯ್ದು (Youth slits young girl’s throat) ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ (Suicide Attempt) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಮೂಲದ ಮಂಜುನಾಥ ಎಂಬಾತ ಇನ್ಸ್ಟಾಗ್ರಾಮ್ ಮೂಲಕ ಯುವತಿಯೊಬ್ಬಳ ಜೊತೆ ಸಂಪರ್ಕದಲ್ಲಿದ್ದನು. ಕೆಲ ತಿಂಗಳಕಾಲ ಪೋನ್​ನಲ್ಲಿ ಚಾಟಿಂಗ್ ಮಾಡಿಕೊಂಡಿದ್ದ ಇಬರು ಪರಸ್ಪರ ಭೇಟಿಯೂ ಆಗಿದ್ದಾರೆ. ಅದೇ ಸಲುಗೆಯಿಂದ ಯುವತಿಗೆ ಮಂಜುನಾಥ ಮೊಬೈಲ್ ಕೊಡಿಸಿದ್ದನು. ನಂತರ ಮಂಜುನಾಥ ಪ್ರೀತಿಸುವಂತೆ ಯುವತಿಗೆ ಒತ್ತಾಯಿಸುತ್ತಿದ್ದನು. ಈ ಎಲ್ಲಾ ವಿಚಾರ ತಿಳಿದ ಯುವತಿಯ ಪೋಷಕರು ಬುದ್ಧಿವಾದ ಹೇಳಿ ಆಕೆಯನ್ನು ಅತ್ತೆ ಮನೆಯಲ್ಲಿರಿಸಿದ್ದರು.

ಇದನ್ನೂ ಓದಿ: Kanakapura: ಕನಕಪುರದ ಬಾಲಕ ನಾಪತ್ತೆಯಾಗಿ 6 ತಿಂಗಳಾಯ್ತು! ಇಬ್ಬರು ಆರೋಪಿಗಳಿಗೆ ಬ್ರೈನ್ ಮ್ಯಾಪಿಂಗ್: ಸಲಿಂಗಕಾಮ ಕಾರಣವಾಯ್ತಾ? 

ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಅತ್ತೆ ಮನೆಯಲ್ಲಿರಿಸಿದ್ದ ವಿಚಾರ ತಿಳಿದ ಮಂಜುನಾಥ, ಯುವತಿಗೆ ಫೋನ್​ ಮಾಡಿ ವಿಳಾಸ ಪಡೆದು ಮನೆಗೆ ಬಂದು ತನ್ನ ಜತೆ ಬರುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಯುವತಿ ನಿರಾಕರಿಸಿದಾಗ ಕೋಪಗೊಂಡ ಮಂಜುನಾಥ ಆಕೆಯ ಮೇಲೆ ಹಲ್ಲೆ ನಡೆಸಿ ಬ್ಲೇಡ್​ನಿಂದ ಕತ್ತು ಕೊಯ್ದು ನಂತರ ತನ್ನ ಕತ್ತನ್ನೂ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಘಟನೆಯಲ್ಲಿ ಅಸ್ವಸ್ಥರಾಗಿದ್ದ ಯುವತಿ ಹಾಗೂ ಮಂಜುನಾಥನನ್ನು ಕೂಡಲೇ ಯುವತಿಯ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೃತ್ಯ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬ್ರೆಜಿಲ್: ಸಂಗಾತಿ ತನ್ನಿಂದ ಬೇರ್ಪಟ್ಟದ್ದರಿಂದ ರೊಚ್ಚಿಗೆದ್ದ ಅವನು ಮಕ್ಕಳೆದುರೇ ಅಕೆಯನ್ನು ಬರ್ಬರವಾಗಿ ತಿವಿದು ಕೊಂದ!

ದಾವಣಗೆರೆ ನಗರದ ಬಿಜೆ ಬಡಾವಣೆಯ ಐತಿಹಾಸಿ ಮುಂಭಾಗದಲ್ಲಿ ಬುರ್ಖಾದಾರಿ ಮುಸ್ಲಿಂ ಯುವತಿ ತನ್ನ ಕೆಲಸಕ್ಕೆ ಹೋಗುವಾಗ ಪಾಗಲ್ ಪ್ರೇಮಿಯೊಬ್ಬ ಆಕೆಯ ಎದುರು ಬಂದು ಗಾಡಿ ನಿಲ್ಲಿಸಿ ಮನ ಬಂದಂತೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಅವಳು ಸಾವನ್ನಪ್ಪಿದ್ದಾಳೆ ಎಂದು ಖಚಿತವಾಗುವ ತನಕ ಚುಚ್ಚಿದ್ದಾನೆ. ರಕ್ತ ಚಿಮ್ಮಿದೆ. ಪ್ರಜ್ಞೆ ತಪ್ಪಿ ತಾನು ಹೋಗುತ್ತಿದ್ದ ಆಕ್ಟಿವ್ ಹೊಂಡಾ ಗಾಡಿ ಮೇಲೆ ಬಿದ್ದು ಯುವತಿ ಸಾವನ್ನಪ್ಪಿದ್ದಾಳೆ. ಈ ಘಟನೆ ನಿನ್ನೆಯಷ್ಟೇ ನಡೆದಿದ್ದು, ಇದೀಗ ಇಂತಹದ್ದೇ ಘಟನೆ ಬೆಂಗಳೂರು ಗ್ರಾಮಾಂತರದಲ್ಲೂ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ