ಹೊಸಕೋಟೆ, ನೆಲಮಂಗಲದಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಗೆ ಡಿಹೆಚ್​ಒ ಕಿರುಕುಳ

ಬೆಂಗಳೂರಿನಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣದ ನಂತರ ರಾಜ್ಯದ ವಿವಿಧ ಕಡೆಗಳಲ್ಲಿ ಸಾಲು ಸಾಲು ಪ್ರಕರಣಗಳು ಬಂದವು. ಈ ಪೈಕಿ ಹೊಸಕೋಟೆ, ನೆಲಮಂಗಲದಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣಗಳು ಕೂಡ ಸೇರಿವೆ. ಆದರೆ, ಈ ಎರಡು ಕಡೆಗಳಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಡಿಹೆಚ್​ಒ ಸುನೀಲ್ ಕುಮಾರ್ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಹೊಸಕೋಟೆ, ನೆಲಮಂಗಲದಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಗೆ ಡಿಹೆಚ್​ಒ ಕಿರುಕುಳ
ಬೆಂಗಳೂರು ಗ್ರಾಮಾಂತರ ಡಿಹೆಚ್​ಒ ಸುನೀಲ್ ಕುಮಾರ್ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್
Edited By: Rakesh Nayak Manchi

Updated on: Mar 21, 2024 | 10:38 AM

ದೇವನಹಳ್ಳಿ, ಮಾ.21: ಹೊಸಕೋಟೆ (Hoskote) ಮತ್ತು ನೆಲಮಂಗಲದಲ್ಲಿ (Nelamangala) ಭ್ರೂಣಹತ್ಯೆ (Feticide) ಪ್ರಕರಣವನ್ನು ಬಯಲು ಮಾಡಿದ ಅಧಿಕಾರಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್​ಒ (DHO) ಸುನೀಲ್ ಕುಮಾರ್ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಅಲ್ಲದೆ, ಕಿರುಕುಳದಿಂದ ಬೇಸತ್ತ ಅಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಹೊಸಕೋಟೆ ಮತ್ತು ನೆಮಂಗಲದಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪ್ರಕರಣವನ್ನು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ಅವರು ಬಯಲು ಮಾಡಿದ್ದರು. ಆದರೆ, ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್ ಕುಮಾರ್, ಜಿಲ್ಲೆಯ ಮತ್ತಷ್ಟು ಆಸ್ವತ್ರೆಗಳ ಲೋಪದೋಷ ಹಾಗೂ ಗರ್ಭಪಾತ ಕರ್ಮಕಾಂಡದ ಬಗ್ಗೆ ಬಯಲು ಮಾಡದಂತೆ ಮಂಜುನಾಥ್ ಅವರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ.

ಮೂರು ದಿನಗಳಿಗೊಮ್ಮೆ ನೋಟಿಸ್ ನೀಡುತ್ತಾ ಆಸ್ವತ್ರೆಗಳ ಲೋಪದೋಷ ವರದಿ ನೀಡದಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಂಜುನಾಥ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ನೆಲಮಂಗಲದ ಆಸರೆ ಆಸ್ವತ್ರೆಯ 74 ಗರ್ಭಪಾತದ ವರದಿ ಮಾಡದಂತೆ ಸುನೀಲ್ ಕುಮಾರ್ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಪ್ರಕರಣ; ಕೆಲ ಮಹತ್ವದ ದಾಖಲೆ ವಶಕ್ಕೆ ಪಡೆದ ಅಧಿಕಾರಿಗಳು

ಒತ್ತಡದ ನಡುವೆಯು ಆಸ್ವತ್ರೆಯ ಕರ್ಮಕಾಂಡ ಬಯಲು ಮಾಡಿ ಕೇಸ್ ದಾಖಲಿಸಿದಕ್ಕೆ ಮಂಜುನಾಥ್ ಅವರಿಗೆ ಕಿರುಕುಳ ನೀಡಿದ್ದಾರೆ. ಅಷ್ಟೇ ಅಲ್ಲದೆ, ಮಂಜುನಾಥ್ ಅವರು ಹೊಸಕೋಟೆಯ ಓವಂ ಆಸ್ವತ್ರೆಯಲ್ಲೂ MTP ಖಾಯ್ದೆಯಡಿ ಅನುಮತಿ ಪಡೆಯದೆ ಗರ್ಭಪಾತ ಪ್ರಕರಣ ಪತ್ತೆ ಮಾಡಿದ್ದಾರೆ. ಈ ಬಗ್ಗೆ ವರದಿ ಮಾಡಿ ಬಯಲು ಮಾಡದಂತೆ ಡಿಹೆಚ್ಒ ಸುನೀಲ್ ಅವರು ಕಿರುಕುಳ ನೀಡಿದ್ದಾಗಿ ಪತ್ರದಲ್ಲಿ ಆರೋಪಿಸಲಾಗಿದೆ.

DHO ಮಾತು ಕೇಳದಕ್ಕೆ ವಿನಾಕಾರಣ ನೋಟಿಸ್ ನೀಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದಾಗಿ ಮಾನಸಿಕ ಸ್ಥೀಮಿತ ಕಳೆದುಕೊಂಡು ಜೀವ ಕಳೆದುಕೊಂಡರೆ ಡಿಹೆಚ್ಒ ಕಾರಣ ಅಂತ ಪತ್ರದಲ್ಲಿ ಮಂಜುನಾಥ್ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us