AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಡೀಸೆಲ್ ಕಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸರು, ತೆಂಗಿನ ಮರಗಳ ಬುಡಕ್ಕೆ ವಿಷ ಇಟ್ಟ ದುಷ್ಕರ್ಮಿಗಳು

ಆರೋಪಿಗಳನ್ನ ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿ ಪರಾರಿಯಾಗುವುದಕ್ಕೆ ಯತ್ನಿಸಲಾಗಿದೆ. ಈ ವೇಳೆ ಒಬ್ಬ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್ ರಾಜು, ಮಲ್ಲನಗೌಡ ಅರೆಸ್ಟ್ ಮಾಡಲಾಗಿದೆ.

Crime News: ಡೀಸೆಲ್ ಕಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸರು, ತೆಂಗಿನ ಮರಗಳ ಬುಡಕ್ಕೆ ವಿಷ ಇಟ್ಟ ದುಷ್ಕರ್ಮಿಗಳು
ಡೀಸೆಲ್ ಕಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸರು
TV9 Web
| Updated By: ganapathi bhat|

Updated on:Mar 13, 2022 | 9:42 AM

Share

ಆನೇಕಲ್: ಡೀಸೆಲ್ ಕಳ್ಳನ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್‌ ತಾಲೂಕಿನ ಜಿಗಣಿ ಎಂಬಲ್ಲಿ ನಡೆದಿದೆ. ಶ್ರೀನಿವಾಸ್ ಅಲಿಯಾಸ್ ರಾಜು ಕಾಲಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರಿಂದ ಫೈರಿಂಗ್ ನಡೆಸಲಾಗಿದೆ. ಜಿಗಣಿಯ ಡಿಎಲ್‌ಎಫ್ ಬಳಿ ಘಟನೆ ನಡೆದಿದೆ. ಆರೋಪಿಗಳು ರಸ್ತೆಬದಿ ನಿಲ್ಲಿಸಿದ್ದ ವಾಹನಗಳಲ್ಲಿ ಡೀಸೆಲ್ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳನ್ನ ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿ ಪರಾರಿಯಾಗುವುದಕ್ಕೆ ಯತ್ನಿಸಲಾಗಿದೆ. ಈ ವೇಳೆ ಒಬ್ಬ ಆರೋಪಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್ ರಾಜು, ಮಲ್ಲನಗೌಡ ಅರೆಸ್ಟ್ ಮಾಡಲಾಗಿದೆ.

ದಾವಣಗೆರೆ: ತೆಂಗಿನ ಮರಗಳ ಬುಡಕ್ಕೆ ವಿಷ ಇಟ್ಟ ದುಷ್ಕರ್ಮಿಗಳು

ಇಲ್ಲಿನ ಚನ್ನಗಿರಿ ತಾಲೂಕಿನ ಕವಳಿ ತಾಂಡಾದಲ್ಲಿ 20 ವರ್ಷದ ತೆಂಗಿನ ಮರಗಳ ಬುಡಕ್ಕೆ ರಂಧ್ರವಿಟ್ಟು ದುಷ್ಕರ್ಮಿಗಳು ವಿಷ ಹಾಕಿರುವ ದುರ್ಘಟನೆ ಸಂಭವಿಸಿದೆ. ಇದರಿಂದ 19 ತೆಂಗಿನ ಮರಗಳು ಈಗಾಗಲೇ ಒಣಗಿ ಹೋಗಿದೆ. ಮತ್ತಷ್ಟು ತೆಂಗಿನ ಮರಗಳು ಒಣಗುವ ಭೀತಿ ಎದುರಾಗಿದೆ. ತಾಂಡಾದ ಎ. ಗಣೇಶ್‌ಗೌಡ ಎಂಬುವರಿಗೆ ಸೇರಿದ ತೆಂಗಿನ ತೋಟ ನಾಶವಾಗಿದೆ. ಪ್ರಕರಣ ಸಂಬಂಧ ರೈತ ಗಣೇಶ್ ಗೌಡ ಬಸವಾಪಟ್ಟಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ವಿಜಯಪುರ: ಅಂಗನವಾಡಿಯಲ್ಲಿದ್ದ ಆಹಾರ ಪದಾರ್ಥಗಳನ್ನು ಕದ್ದು ಸಾಗಾಟ; ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಅಂಗನವಾಡಿ ಕಾರ್ಯಕರ್ತೆ

ಅಂಗನವಾಡಿಯಲ್ಲಿ ಇದ್ದ ಆಹಾರ ಪದಾರ್ಥಗಳನ್ನು ಕದ್ದು ಸಾಗಿಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ ಎಂಬವರು ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಘಟನೆ ವಿಜಯಪುರದ ನಾಗಠಾಣ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ ಮಾಡಿದ್ದಾರೆ. ರಾತ್ರಿ ಮಕ್ಕಳಿಗಾಗಿ ನೀಡಿದ್ದ ಬೇಳೆ- ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಕರ್ತೆಯನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಮಕ್ಕಳಿಗೆ ಸರ್ಕಾರ ನೀಡಿದ್ದ ಆಹಾರವನ್ನ ಕದ್ದು ಮಾರಾಟ ಮಾಡುತ್ತಾಳೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಕಾರಿನಲ್ಲಿ ‌ಅಹಾರ‌‌ ಪದಾರ್ಥ ಸಾಗಾಟ ಮಾಡುವಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಕರ್ತೆ ಸಂದ್ಯಾ‌ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: Crime News: ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಯತ್ನ, ಪುಟ್ಟ ಮಗಳಿಗೂ ಕಿರುಕುಳ; ಆರೋಪಿ ಬಾಬು ಅರೆಸ್ಟ್

ಇದನ್ನೂ ಓದಿ: Bengaluru Crime: ಈಶಾನ್ಯ ರಾಜ್ಯದ ಮಹಿಳೆಯರನ್ನು ತಂದು ವೇಶ್ಯಾವಾಟಿಕೆ; ಮೂವರ ಬಂಧನ

Published On - 9:01 am, Sun, 13 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ