ಹೊಸಕೋಟೆ: ರಾಜಕೀಯ ದ್ವೇಷದಿಂದ ಮೂಲ ಸೌಕರ್ಯಗಳಿಲ್ಲದೆ ಜನರ ಪರದಾಟ; ಅಹೋರಾತ್ರಿ ಗ್ರಾಮಸ್ಥರಿಂದ ಡಿಸಿ ಕಛೇರಿ ಮುಂದೆ ಧರಣಿ

ಅವರೆಲ್ಲ ಕಳೆದ 20 ವರ್ಷಗಳಿಂದ ಅದೇ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿರುವ ಕುಟುಂಬಗಳು. ಆದರೆ ಆ ಕುಟುಂಬಗಳ ಕಥೆ ಇದೀಗ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದ್ದು, ಅವರ ಹಕ್ಕುಗಳನ್ನ ಪಡೆದುಕೊಳ್ಳಲು ಡಿಸಿ ಕಛೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುವ ಮೂಲಕ ಹೋರಾಟದ ಹಾದಿ ಹಿಡಿದಿದ್ದಾರೆ.

ಹೊಸಕೋಟೆ: ರಾಜಕೀಯ ದ್ವೇಷದಿಂದ ಮೂಲ ಸೌಕರ್ಯಗಳಿಲ್ಲದೆ ಜನರ ಪರದಾಟ; ಅಹೋರಾತ್ರಿ ಗ್ರಾಮಸ್ಥರಿಂದ ಡಿಸಿ ಕಛೇರಿ ಮುಂದೆ ಧರಣಿ
ಅಹೋರಾತ್ರಿ ಗ್ರಾಮಸ್ಥರಿಂದ ಡಿಸಿ ಕಛೇರಿ ಮುಂದೆ ಧರಣಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 12, 2023 | 7:51 PM

ಬೆಂಗಳೂರು ಗ್ರಾಮಾಂತರ: ಕಗ್ಗತ್ತಲ ರಾತ್ರಿ ಅಧಿಕಾರಿಗಳೆಲ್ಲ ಕಛೇರಿಗೆ ಬೀಗ ಜಡಿದು ಮನೆಗಳಿಗೆ ತೆರಳಿದ್ರು. ವೃದ್ದರು ಮಹಿಳೆಯರು ಮಾತ್ರ ಮೈ ಕೊರೆಯುವ ಚಳಿಯಲ್ಲಿ ಕಛೇರಿ ಮುಂದೆ ಕುಳಿತಿದ್ದಾರೆ. ಇದಕ್ಕೆಲ್ಲ ಕಾರಣ 20 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸೋರಗುತ್ತಿರುವ ಮನೆಗಳು. ಹೌದು ಜಿಲ್ಲೆ ಹೊಸಕೋಟೆ ತಾಲೂಕಿನ ಕಣ್ಣೂರಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಜಮೀನಿನಲ್ಲಿ 35 ಕ್ಕೂ ಅಧಿಕ ಕುಟುಂಬಗಳು ಕಳೆದ 20 ವರ್ಷಗಳ ಹಿಂದೆ ಮನೆ ಕಟ್ಟಿಕೊಂಡಿದ್ದು ಇಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ 2014 ರಿಂದಲು 94 ಸಿ ಯ ಅಕ್ರಮ ಸಕ್ರಮದಲ್ಲಿ ಸರ್ಕಾರಿ ಜಾಗದಲ್ಲಿ ಕಟ್ಟಿಕೊಂಡ ಮನೆಗಳಿಗೆ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು ಇಂದು ಬರುತ್ತೆ ನಾಳೆ ಬರುತ್ತೆ ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಆದರೆ ಹಕ್ಕುಪತ್ರ ನೀಡಲು ಕೆಲವರು ರಾಜಕೀಯ ಹುನ್ನಾರ ಮಾಡಿದ ಕಾರಣ ಕಳೆದ 20 ವರ್ಷಗಳಿಂದ ಇವರಿಗೆ ಹಕ್ಕುಪತ್ರ ನೀಡಿಲ್ಲ. ಇದೇ ಕಾರಣಕ್ಕೆ ಇಂದು ಜಿಲ್ಲಾಡಳಿತ ಭವನ ಮುಂದೆ ವೃದ್ದರು ಮಹಿಳೆಯರು ಸೇರಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ಅಧಿಕಾರಿಗಳು ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ಈ ಗ್ರಾಮದಲ್ಲಿ ರಸ್ತೆ, ಕರೆಂಟ್ ಇಲ್ಲದ ಕಾರಣ ಪ್ರತಿನಿತ್ಯ ಮಹಿಳೆಯರು ನೀರು ತರಲು ಮತ್ತು ಮಕ್ಕಳು ಶಾಲೆಗೆ ತೆರಳಲು ಎರಡು ಮೂರು ಕಿಲೋ ಮೀಟರ್ ನಡೆದುಕೊಂಡು ಹೋಗುವ ದುಸ್ಥಿತಿ ಎದುರಾಗಿದೆ. ಕ್ಷೇತ್ರದಲ್ಲಿ ಸಚಿವರು ಶಾಸಕರಿದ್ರು ಪ್ರತಿಷ್ಠೆಯ ಪಣವಾಗಿಸಿಕೊಂಡು ಯಾರೊಬ್ಬರು ಇವರಿಗೆ ಹಕ್ಕು ಪತ್ರ ಕೊಡಿಸಿಲ್ಲ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಇನ್ನು ಸ್ಥಳಿಯ ನಿವಾಸಿಗಳು ಡಿಸಿ ಕಛೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಂತೆ ಎಚ್ಚೆತ್ತ ಹೊಸಕೋಟೆ ತಹಶೀಲ್ದಾರ್ ಮಹೇಶ್ ಕುಮಾರ್ ಸ್ಥಳಕ್ಕೆ ದೌಡಾಯಿಸಿ ಬಂದು ಪರಿಶೀಲನೆ ನಡೆಸಿದ್ದು, ಸ್ಥಳಯರ ಮನೆಗಳಿರುವ ಸರ್ಕಾರಿ ಗೋಮಾಳ ಜಮೀನು ಈಗಾಗಲೇ ಬೇರೆಯವರ ಹೆಸರಿಗೆ ಆಗಿದ್ದು ಈ ಬಗ್ಗೆ ಹಿರಿಯ ಅಧೀಕಾರಿಗಳ ಜೊತೆ ಚರ್ಚಿಸಿ ನ್ಯಾಯ ಕೊಡಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ಬಳ್ಳಾರಿ: ಗ್ರಾಮೀಣ ಭಾಗದಲ್ಲಿ ಹೆಚ್ಚಿದ ಕಳ್ಳರ ಹಾವಳಿ; ರಾತ್ರಿಯಲ್ಲ, ಹಗಲಿನಲ್ಲೇ ಕಳ್ಳನ ಕೈಚಳಕ

ಒಟ್ಟಾರೆ ಹಲವು ವರ್ಷಗಳಿಂದ ಒಂದೇ ಕಡೆ ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿದ್ದು, ಹಕ್ಕುಪತ್ರ ನೀಡಲು ನಿರ್ಲಕ್ಷ್ಯ ಮಾಡುತ್ತಿರುವುದು ಸ್ಥಳಿಯರನ್ನ ಕೆರಳಿಸಿದೆ. ಇನ್ನಾದರೂ ಜಿಲ್ಲಾಡಳಿತ ಇತ್ತ ಗಮನಹರಿಸಿ ಸ್ಥಳಿಯರಿಗೆ ಮೂಲ ಸೌಕರ್ಯಗಳನ್ನ ಒದಗಿಸುವ ಕೆಲಸ ಮಾಡಬೇಕಿದೆ.

ವರದಿ: ನವೀನ್ ಟಿವಿ9 ದೇವನಹಳ್ಳಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Sun, 12 March 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ