AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಗಲೀಕರಣಕ್ಕೆ ದೇಗುಲ ತೆರವು ಮಾಡಲ್ಲ: ರಾಜರಾಜೇಶ್ವರಿನಗರದಲ್ಲಿ ಡಿಕೆ ಶಿವಕುಮಾರ್

ದೇಗುಲ ಸ್ಥಳಾಂತರಿಸುವ ಮೂಲಕ ಗಣೇಶನ ಶಾಪಕ್ಕೆ ಗುರಿಯಾಗುವುದು ನನಗೆ ಬೇಕಿಲ್ಲ. ರಸ್ತೆ ಅಗಲೀಕರಣ ಮಾಡಬೇಕೆಂಬುದು ಗೊತ್ತಿದೆ. ಆದರೆ, ಅದಕ್ಕೆ ಪರ್ಯಾಯ ಮಾರ್ಗಗಳನ್ನು ಹುಡುಕುತ್ತೇವೆ ಎಂದು ರಾಜರಾಜೇಶ್ವರಿನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ನಿವಾಸಿಗಳ ಬೇಡಿಕೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ರಸ್ತೆ ಅಗಲೀಕರಣಕ್ಕೆ ದೇಗುಲ ತೆರವು ಮಾಡಲ್ಲ: ರಾಜರಾಜೇಶ್ವರಿನಗರದಲ್ಲಿ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Ganapathi Sharma
|

Updated on:Apr 08, 2024 | 7:07 AM

Share

ಬೆಂಗಳೂರು, ಏಪ್ರಿಲ್ 8: ರಸ್ತೆ ಅಗಲೀಕರಣಕ್ಕಾಗಿ ದೇಗುಲವನ್ನು ಸ್ಥಳಾಂತರ ಮಾಡುವ ಮೂಲಕ ಗಣೇಶನ ಶಾಪಕ್ಕೆ ಗುರಿಯಾಗಲಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ರಾಜರಾಜೇಶ್ವರಿನಗರದ (Rajarajeshwari Nagar) ರಸ್ತೆ ಅಗಲೀಕರಣಕ್ಕಾಗಿ ದೇಗುಲ ಸ್ಥಳಾಂತರ ವಿಚಾರ ಪ್ರಸ್ತಾಪವಾದಾಗ ಅವರು ಈ ಮೇಲಿನಂತೆ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ (DK Suresh) ಪರ ಪ್ರಚಾರದಲ್ಲಿ ಪಾಲ್ಗೊಂಡ ವೇಳೆ ಡಿಕೆ ಶಿವಕುಮಾರ್​ಗೆ ದೇಗುಲ ಸ್ಥಳಾಂತರದ ಪ್ರಶ್ನೆ ಎದುರಾಯಿತು.

ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ನಿವಾಸಿಗಳು ಅಪಾರ್ಟ್​​ಮೆಂಟ್ ಮುಂಭಾಗದಲ್ಲಿ ರಸ್ತೆ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಮಾಡಿದ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ದೇವಾಲಯವನ್ನು ಕೆಡವುದು ರಸ್ತೆ ಅಗಲೀಕರಣ ಯೋಜನೆಯ ಭಾಗವಾಗುವುದಿಲ್ಲ ಎಂದಿದ್ದಾರೆ.

ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ನಿವಾಸಿಗಳಿಗೆ ಉಪಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಇದು ತುಂಬಾ ಜನನಿಬಿಡ ಜಂಕ್ಷನ್ ಮತ್ತು ರಿಂಗ್ ರೋಡ್ ಅನ್ನು ಸಂಪರ್ಕಿಸುತ್ತದೆ ಎಂಬುದು ನನಗೆ ತಿಳಿದಿದೆ. ನಾನು ಪರ್ಯಾಯ ಮಾರ್ಗಗಳನ್ನು ಕಂಡುಹಿಡಿಯಲು ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಷಯದಲ್ಲಿ ಅನ್ಯಾಯ ಎಸಗಿರುವುದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ಒಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು ಎಂದು ಡಿಕೆ ಶಿವಕುಮಾರ್ ಇದೇ ವೇಳೆ ವ್ಯಂಗ್ಯವಾಡಿದರು.

ಬರ ಪರಿಹಾರಕ್ಕೂ ಚುನಾವಣಾ ನೀತಿ ಸಂಹಿತೆಗೂ ಸಂಬಂಧವಿಲ್ಲ. ನೀತಿ ಸಂಹಿತೆ ಜಾರಿಯಾಗುವ ಸುಮಾರು ನಾಲ್ಕು ತಿಂಗಳಿಗೂ ಮೊದಲೇ ನಾವು ಮನವಿ ಮಾಡಿದ್ದೆವು. ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡಿ ಇದೀಗ ವಾಸ್ತವ ವಿಚಾರವನ್ನು ನಿರ್ಮಲಾ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ, ಡಿಕೆ ನೋಟು ಡಾಕ್ಟ್ರಿಗೆ ವೋಟು ನಮ್ಮ ಸ್ಟ್ರಾಟಿಜಿ ಅಗಿದೆ: ಹೆಚ್ ಡಿ ಕುಮಾರಸ್ವಾಮಿ

ಕೇಂದ್ರ ಸರ್ಕಾರ ತಪ್ಪೆಸಗಿರುವುದು ಈಗ ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ. ಅದರೊಂದಿಗೆ, ಡಿಕೆ ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟವನ್ನು ಜನ ಬೆಂಬಲಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಡಿಕೆ ಶಿವಕುಮಾರ್ ಕುಟುಂಬವೇ ಪ್ರಚಾರದ ಅಖಾಡಕ್ಕಿಳಿದಿದೆ. ಅತ್ತ ಬಿಜೆಪಿಯಿಂದ ಡಾ. ಸಿಎನ್ ಮಂಜುನಾಥ್ ಕಣಕ್ಕಿಳಿದಿರುವುದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಣ ರಂಗೇರಿದೆ. ಶನಿವಾರವಷ್ಟೇ ಡಿಕೆ ಶಿವಕುಮಾರ್ ಪತ್ನಿ ಸಹ ಕ್ಷೇತ್ರ ಸಂಚಾರ ನಡೆಸಿ ಸುರೇಶ್ ಪರ ಮತ ಯಾಚನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Mon, 8 April 24