ರಂಗೇರಿದ ಬೆಂಗಳೂರು ಗ್ರಾಮಾಂತರ ಚುನಾವಣೆ: ಜೆಡಿಎಸ್​ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ನೀಡಿದ ಡಿಕೆ ಸುರೇಶ್

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಅದರಲ್ಲೂ ಈ ಬಾರಿ ಬೆಂಗಳೂರು ಗ್ರಾಮಾಂತರ ಹೈಹೋಲ್ಟೇಜ್‌ ಕ್ಷೇತ್ರವಾಗಿದ್ದು, ಜೆಡಿಎಸ್​ ಕಾರ್ಯಕರ್ತರಿಗೆ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್​ ಮುಕ್ತ ಆಹ್ವಾನ ನೀಡಿದ್ದಾರೆ.

ರಂಗೇರಿದ ಬೆಂಗಳೂರು ಗ್ರಾಮಾಂತರ ಚುನಾವಣೆ: ಜೆಡಿಎಸ್​ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ನೀಡಿದ ಡಿಕೆ ಸುರೇಶ್
ಡಿಕೆ ಸುರೇಶ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 14, 2024 | 2:54 PM

ರಾಮನಗರ, (ಮಾರ್ಚ್ 14): ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ (Bengaluru Rule Loksabha)  ಬಿಜೆಪಿ ಡಾ. ಸಿ.ಎನ್.ಮಂಜುನಾಥ್ (Dr CN Manjunath) ಅವರನ್ನು ಕಣಕ್ಕೆ ಇಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎದುರಾಳಿ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ.ಸುರೇಶ್(DK Suresh), ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧೆ ನನಗೆ, ಶಿವಕುಮಾರ್​​ಗೆ ಹೊಸದಲ್ಲ. ದೇವೇಗೌಡರು, ಕುಮಾರಸ್ವಾಮಿಯವರ ಪಕ್ಷ ಸರಿಯಿಲ್ಲ ಎಂದು ಅಳಿಯ ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ಜನತಾದಳದ ಕಾರ್ಯಕರ್ತರು ಯೋಚನೆ ಮಾಡಬೇಕಿದೆ. ಈ ರಾಜ್ಯದಲ್ಲಿ ದೇವೇಗೌಡರ ಪಕ್ಷ, ಅವರ ಜನಪ್ರಿಯತೆ ಇಲ್ಲ ಎಂಬುದನ್ನ ಅವರ ಅಳಿಯ ನಿರ್ಧರಿಸಿದ್ದಾರೆ. ಅದಕ್ಕೆ ಬೇರೆ ಪಕ್ಷವನ್ನ ಮಂಜುನಾಥ್ ಆಯ್ಕೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಕಾರ್ಯಕರ್ತರೇ ಬನ್ನಿ, ನಿಮ್ಮ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಜೆಡಿಎಸ್​ ಕಾರ್ಯಕರ್ತರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

ಇಂದು (ಮಾರ್ಚ್ 14) ರಾಮನಗರ ಜಿಲ್ಲೆಯ ಚನ್ನಪಟ್ಟಣದ ತಿಟ್ಟಮಾರನಹಳ್ಳಿಯಲ್ಲಿ ಮಾತನಾಡಿರುವ ಡಿಕೆ ಸುರೇಶ್, ಅವರ ಪಕ್ಷ, ನಾಯಕತ್ವ ಅಸ್ತಿತ್ವದಲ್ಲಿ ಇಲ್ಲ ಎಂದು ಅಳಿಯ ನಿರ್ಧಾರ ಮಾಡಿದ್ದಾರೆ. ಜೆಡಿಎಸ್ ಸರಿಯಿಲ್ಲ ಎಂದು ನಾನು ಹೇಳುತ್ತಿಲ್ಲ. ಅವರ ಅಳಿಯ ಹೇಳುತ್ತಿರುವುದು. ಜೆಡಿಎಸ್ ಕಾರ್ಯಕರ್ತರೇ ಬನ್ನಿ, ನಿಮ್ಮ ಪರವಾಗಿ ನಾನು ಕೆಲಸ ಮಾಡುತ್ತೇನೆ. ಜೆಡಿಎಸ್ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ಕೊಡುತ್ತಿದ್ದೇನೆ. ಬನ್ನಿ ಕೆಲಸ ಮಾಡೋಣ ಎಂದು ಕಾಂಗ್ರೆಸ್​ಗೆ ಬರುವಂತೆ ಆಹ್ವಾನ ನಿಡಿದರು.

ಇದನ್ನೂ ಓದಿ: ಅಳಿಯ ಜಾಣ ಆದರೇನು, ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ: ಡಿಕೆ ಸುರೇಶ್​ಗೆ ಜೆಡಿಎಸ್ ಪ್ರಶ್ನೆ

ಡಿಕೆ ಬ್ರದರ್ಸ್ ವಿರುದ್ಧ ಕಿರಾತಕ‌ ಪದಬಳಕೆ ವಿಚಾರದ ಬಗ್ಗೆ ಮಾತನಾಡಿದ ಸುರೇಶ್, ಕುಮಾರಸ್ವಾಮಿಗೆ ನಿಧಾನವಾಗಿ ಉತ್ತರ ಕೊಡುತ್ತೇನೆ. ಅವರು ಮೊದಲು ಅರ್ಜಿ ಹಾಕಲಿ ಆಮೇಲೆ ಮಾತನಾಡುತ್ತೇನೆ. ಬಿಜೆಪಿಯಲ್ಲಿ ಪ್ರತಾಪ್ ಸಿಂಹಗೆ ಕೈಕೊಟ್ಟಿದ್ದಾರೆ. ಪಾಪಾ ಪಕ್ಷ ಕಟ್ಟಿದ ಕಟೀಲ್ ರನ್ನ ಏನ್ ಮಾಡಿದ್ದಾರೋ ಗೊತ್ತಿಲ್ಲ. ನನಗೆ ಗುಂಡಿಕ್ಕಿ ಕೊಲ್ಲುತ್ತೇನೆ ಅಂದೋರು ಬಂಡಾಯ ಅಂತಿದ್ದಾರೆ. ಇನ್ನೊಬ್ರು ಸಂವಿಧಾನ ಬದಲಾವಣೆ ಮಾಡಲು ಹೋದವರ ಕಥೆ ಏನಾಗುತ್ತೋ ಗೊತ್ತಿಲ್ಲ ಎಂದು ಟಿಕೆಟ್ ಸಿಗದ ಬಿಜೆಪಿ ನಾಯಕರ ಬಗ್ಗೆ ಡಿಕೆ ಸುರೇಶ್ ವ್ಯಂಗ್ಯವಾಡಿದರು.

ಮಂಜುನಾಥ್ ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳುವುದು ಸಮಂಜಸ ಅಲ್ಲ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಆಗಿರೋದ್ರಿಂದ ಅಚ್ಚರಿ ಅಭ್ಯರ್ಥಿ ಎಂದು ಅನ್ನಿಸಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ