AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಹೊತ್ತಲ್ಲಿ ಕಳ್ಳರ ಕರಾಮತ್ತು: 8 ಲಾರಿಗಳ 16 ಬ್ಯಾಟರಿ, 150 ಲೀ ಡೀಸೆಲ್ ಕಳವು

ದೊಡ್ಡಬಳ್ಳಾಪುರದಲ್ಲಿ ಒಂದೇ ರಾತ್ರಿಯಲ್ಲಿ 8 ಲಾರಿಗಳಿಂದ 16 ಬ್ಯಾಟರಿಗಳು ಮತ್ತು 150 ಲೀಟರ್ ಡೀಸೆಲ್ ಕಳವು ಮಾಡಲಾಗಿದೆ. ರೈಲು ನಿಲ್ದಾಣ ಮತ್ತು ಹಳೆ ಬಸ್ ನಿಲ್ದಾಣದಿಂದಲೂ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೀಸೆಲ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ರಾತ್ರಿ ಹೊತ್ತಲ್ಲಿ ಕಳ್ಳರ ಕರಾಮತ್ತು: 8 ಲಾರಿಗಳ 16 ಬ್ಯಾಟರಿ, 150 ಲೀ ಡೀಸೆಲ್ ಕಳವು
ರಾತ್ರಿ ಹೊತ್ತಲ್ಲಿ ಕಳ್ಳರ ಕರಾಮತ್ತು: 8 ಲಾರಿಗಳ 16 ಬ್ಯಾಟರಿ, 150 ಲೀ ಡೀಸೆಲ್ ಕಳವು
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 23, 2025 | 3:31 PM

Share

ದೇವನಹಳ್ಳಿ, ಫೆಬ್ರವರಿ 23: ಒಂದೇ ರಾತ್ರಿಯಲ್ಲಿ 8 ಲಾರಿಗಳ 16 ಬ್ಯಾಟರಿ ಸೇರಿದಂತೆ 150 ಲೀ. ಡೀಸೆಲ್ (Diesel) ಕಳವು ಮಾಡಿ ಕಳ್ಳರು ತಮ್ಮ ಕೈಚಳಕ ತೋರಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ರಾತ್ರಿ ವೇಳೆ ಬ್ಯಾಟರಿ, ಡೀಸೆಲ್ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ಕಾರ್ಪಿಯೊ ಕಾರಿನಲ್ಲಿ ಬಂದಿದ್ದ ಮೂವರಿಂದ ರೈಲು ನಿಲ್ದಾಣದ ಬಳಿ 12 ಬ್ಯಾಟರಿ, ಹಳೆ ಬಸ್ ನಿಲ್ದಾಣದ 4 ಬ್ಯಾಟರಿ ಮತ್ತು ಪಾಲನಜೋಗನಹಳ್ಳಿ ಬಳಿ ನಿಲ್ಲಿಸಿದ್ದ ಲಾರಿಗಳಿಂದ 150 ಲೀ. ಡೀಸೆಲ್ ಕಳವು ಮಾಡಿದ್ದಾರೆ. ಕಳ್ಳರು ಬ್ಯಾಟರಿ, ಡೀಸಲ್​​ ಟಾರ್ಗೆಟ್​ನಿಂದ ಚಾಲಕರು ಬೆಚ್ಚಿಬಿದಿದ್ದಾರೆ.

ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: ಮೂವರ ಸ್ಥಿತಿ ಗಂಭೀರ

ನಾಮಕರಣಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ ಆಗಿ ಮೂವರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಳಿ ಅಪಘಾತ ಸಂಭವಿಸಿದೆ. ತುಮಕೂರು ಜಿಲ್ಲೆಯ ಶಿರಾದಿಂದ ಯಲಹಂಕಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ: ದೇವನಹಳ್ಳಿ: ತಹಶೀಲ್ದಾರ್ ಸಹಿ‌ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್​ಐ!

ಮಿನಿ ಬಸ್​​​ನಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸರ್ಕಾರಿ ಜಾಗದಿಂದ ಹಾಡಹಗಲೇ ಮರಗಳ್ಳತನ

ಸರ್ಕಾರಿ ಜಾಗದಿಂದ ಹಾಡಹಗಲೇ ಮರಗಳ್ಳತನ ಮಾಡಿರುವಂತಹ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ. ಆರು ಎಕರೆ ಜಾಗ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿಗೆ ಸೇರಿದ ಪಂಚಾಯಿತಿಗೆ ಸೇರಿದೆ.

ಇದನ್ನೂ ಓದಿ: ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು

ಸರ್ಕಾರಿ ಜಾಗದಲ್ಲಿದ್ದ ಸಿಲ್ವರ್ ಓಕ್ ಮರಗಳನ್ನು ಟಿಂಬರ್​ಗಾಗಿ ಲಕ್ಷಾಂತರ ರೂ ಮೌಲ್ಯದ 50ಕ್ಕೂ ಅಧಿಕ ಮರಗಳ ಹನನ ಮಾಡಲಾಗಿದೆ. ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ ಮಾಡಿ ಮರಗಳ‌ ಸಮೇತ ಎರಡು ಲಾರಿ ಮತ್ತು ಎರಡು ಕ್ರೇನ್​ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ