AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರದಲ್ಲಿ ಭೀಕರ ದುರಂತ: ಹಳಿ ದಾಟುತ್ತಿದ್ದ ವೃದ್ಧೆ, ಮೊಮ್ಮಕ್ಕಳಿಗೆ ರೈಲು ಡಿಕ್ಕಿ

Doddaballapur train accident: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಮೊಮ್ಮಕ್ಕಳು ಸೇರಿದಂತೆ ವೃದ್ಧೆ ಸಾವನ್ನಪ್ಪಿರುವಂತಹ ದುರಂತ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದೊಡ್ಡಬಳ್ಳಾಪುರದಲ್ಲಿ ಭೀಕರ ದುರಂತ: ಹಳಿ ದಾಟುತ್ತಿದ್ದ ವೃದ್ಧೆ, ಮೊಮ್ಮಕ್ಕಳಿಗೆ ರೈಲು ಡಿಕ್ಕಿ
ರೈಲು ಡಿಕ್ಕಿImage Credit source: tv9 kannada
ನವೀನ್ ಕುಮಾರ್ ಟಿ.
| Edited By: |

Updated on:Aug 31, 2026 | 8:50 PM

Share

ಮುಖ್ಯಾಂಶಗಳು

  • ರೈಲು ಡಿಕ್ಕಿಯಾಗಿ ವೃದ್ಧೆ, ಇಬ್ಬರು ಮೊಮ್ಮಕ್ಕಳು ದುರ್ಮರಣ
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದಲ್ಲಿ ಘಟನೆ
  • ರೈಲ್ವೆ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ದೇವನಹಳ್ಳಿ, ಆಗಸ್ಟ್​ 31: ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದು ವೃದ್ಧೆ ಸೇರಿದಂತೆ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಕರುಣಾಜನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (bengaluru rural) ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಇರ್ಫಾನಾ(46), ರುಕಿಯಾ(13) ಮತ್ತು ರಾಕಿಯಾ(8) ಮೃತರು. ಸದ್ಯ ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ದೊಡ್ಡಬಳ್ಳಾಪುರದ ಮುತ್ತೂರು ನಿವಾಸಿ ಇರ್ಫಾನಾ ಎಂಬುವವರ ಮನೆಗೆ ಆಂಧ್ರಪ್ರದೇಶದ ಹಿಂದೂಪುರದಿಂದ ಮೊಮ್ಮಕ್ಕಳಾದ ರುಕಿಯಾ ಮತ್ತು ರಾಕಿಯಾ ಕಳೆದ ಶನಿವಾರ ರಜೆ ಕಳೆಯಲೆಂದು ಖುಷಿಯಿಂದ ಬಂದಿದ್ದರು. ಸೋಮವಾರ ಬೆಳಿಗ್ಗೆ ಶಾಲೆಯಿದ್ದ ಕಾರಣ, ಮಕ್ಕಳನ್ನು ಸರಿಯಾದ ಸಮಯಕ್ಕೆ ಕಳುಹಿಸುವಂತೆ ಪೋಷಕರು ತಿಳಿಸಿದ್ದರು. ಹೀಗಾಗಿ ಅಜ್ಜಿ ಇರ್ಫಾನಾ, ಬೆಳಿಗ್ಗೆ 6 ಗಂಟೆಯ ಹಿಂದೂಪುರ ಪ್ಯಾಸೆಂಜರ್ ರೈಲಿನಲ್ಲಿ ಮಕ್ಕಳನ್ನು ಕಳುಹಿಸಲು ಬೆಳಿಗ್ಗೆಯೇ ಇಬ್ಬರನ್ನೂ ಎಬ್ಬಿಸಿ ನಿಲ್ದಾಣಕ್ಕೆ ಕರೆದುಕೊಂಡು ಬಂದಿದ್ದರು.

ಕೈ ಹಿಡಿದು ಹಳಿ ದಾಟುವಾಗ ರೈಲು ಡಿಕ್ಕಿ

ಪ್ಯಾಸೆಂಜರ್ ರೈಲು ತಪ್ಪಿಹೋಗಬಾರದು ಎಂಬ ಆತುರದಲ್ಲಿ ಬೇಗನೆ ಟಿಕೆಟ್ ತೆಗೆದುಕೊಳ್ಳಲು, ನಿಂತಿದ್ದ ಗೂಡ್ಸ್ ರೈಲಿನ ಪಕ್ಕದಲ್ಲೇ ಮೂವರೂ ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದುಕೊಂಡು ಹಳಿ ದಾಟಲು ಯತ್ನಿಸಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಅತಿವೇಗವಾಗಿ ಬಂದ ಎಕ್ಸ್‌ಪ್ರೆಸ್ ರೈಲು ಮೂವರಿಗೂ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೃತದೇಹಗಳು ಹಳಿಯಿಂದ ಸುಮಾರು ನೂರು ಮೀಟರ್ ದೂರದವರೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅಜ್ಜಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಕೈವಾಕ್ ಇಲ್ಲದೆ ನಿತ್ಯ ಜೀವಭಯ: ರೈಲ್ವೆ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಇನ್ನೂ ಗ್ರಾಮದ ಪಕ್ಕದಲ್ಲಿ ರೈಲು ನಿಲ್ಥಾಣವಿದ್ದರೂ ಒಂದು ಸ್ಕೈ ವಾಕ್ ಇಲ್ಲದಿರುವುದು ಈ ರೀತಿಯ ಅನಾಹುತವಾಗಿದ್ದು, ಘಟನೆಗೆ ರೈಲ್ವೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಅಂತ ಸ್ಥಳಿಯರು ಆಕ್ರೋಶ ಹೊರ ಹಾಕಿದ್ದಾರೆ. ಜೊತೆಗೆ ರೈಲು ನಿಲ್ಥಾಣದ ಪಕ್ಕದಲ್ಲೇ ಕೈಗಾರಿಕಾ ಪ್ರದೇಶವು ಇರುವ ಕಾರಣ‌ ರಾತ್ರಿ ವೇಳೆ ಕೆಲಸ ಮುಗಿಸಿ ಜನರು ರೈಲಿನ ಅಡಿ ನುಗ್ಗಿ ಬರುವ ಪರಿಸ್ಥಿತಿಯಿದ್ದು, ಸ್ವಲ್ಪ ಯಾಮಾರಿದರು ಪ್ರಾಣಗಳೇ ಹೋಗುತ್ತವೆ. ಹೀಗಾಗಿ ಗ್ರಾಮದ ಬಳಿ ಸ್ಕೈ ವಾಕ್ ನಿರ್ಮಾಣ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ದಾರುಣ ಅಂತ್ಯಕಂಡ ಯುವಕ

ಶಾಲೆಗೆ ಸರಿಯಾದ ಸಮಯಕ್ಕೆ ಬಿಡಬೇಕು ಎಂದು ಹೊರಟ ಅಜ್ಜಿ, ಮೊಮ್ಮಕ್ಕಳ ಜೊತೆಯಲ್ಲೇ ಬಾರದ ಲೋಕಕ್ಕೆ ತೆರಳಿದ್ದು, ನಿಜಕ್ಕೂ ದುರಂತ‌. ಇನ್ನೂ ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ರೈಲ್ವೆ ಇಲಾಖೆ ಅಧಿಕಾರಿಗಳು ಗ್ರಾಮದ ಬಳಿ ಸ್ಕೈವಾಕ್ ನಿರ್ಮಿಸಿ ಇಂತಹ ದುರ್ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:49 pm, Mon, 31 August 26

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!