AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರಿಗೆ ಸಿಹಿ ಸುದ್ದಿ: ದೊಡ್ಡಬಳ್ಳಾಪುರದ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಲೋಕಾರ್ಪಣೆ!

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ 100 ಹಾಸಿಗೆಗಳ ನೂತನ ಇಎಸ್ಐ ಆಸ್ಪತ್ರೆಯನ್ನು ಕೇಂದ್ರ ಸಚಿವ ಮನ್ಸುಕ್ ಮಾಂಡವೀಯ ಉದ್ಘಾಟಿಸಿದ್ದಾರೆ. 101.14 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಈ ಸುಸಜ್ಜಿತ ಆಸ್ಪತ್ರೆಯು ಮೂರು ವರ್ಷಗಳ ಕಾಯುವಿಕೆಯ ನಂತರ ಲೋಕಾರ್ಪಣೆಗೊಂಡಿದ್ದು, ಸಾವಿರಾರು ಕಾರ್ಮಿಕರಿಗೆ ವರದಾನವಾಗಲಿದೆ.

ಕಾರ್ಮಿಕರಿಗೆ ಸಿಹಿ ಸುದ್ದಿ: ದೊಡ್ಡಬಳ್ಳಾಪುರದ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಲೋಕಾರ್ಪಣೆ!
ದೊಡ್ಡಬಳ್ಳಾಪುರದ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ಲೋಕಾರ್ಪಣೆ!
ನವೀನ್ ಕುಮಾರ್ ಟಿ
| Edited By: |

Updated on: May 03, 2026 | 2:47 PM

Share

ದೊಡ್ಡಬಳ್ಳಾಪುರ, ಮೇ 03: ಕಳೆದ ಮೂರು ವರ್ಷಗಳಿಂದ ಉದ್ಘಾಟನೆಗಾಗಿ ಕಾಯುತ್ತಿದ್ದ ದೊಡ್ಡಬಳ್ಳಾಪುರದ ನೂತನ ಇಎಸ್ಐ (ESI) ಆಸ್ಪತ್ರೆಯು ಕೊನೆಗೂ ಲೋಕಾರ್ಪಣೆಗೊಂಡಿದೆ. ತಾಲೂಕಿನ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಈ ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು (Hospital) ಕೇಂದ್ರ ಕಾರ್ಮಿಕ ಸಚಿವ ಮನ್ಸುಕ್ ಮಾಂಡವೀಯ ಅವರು ಇಂದು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.

101.14 ಕೋಟಿ ರೂ. ವೆಚ್ಚದ ಯೋಜನೆ

ಕೇಂದ್ರ ಸರ್ಕಾರದ ವತಿಯಿಂದ ಸುಮಾರು 101.14 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ಈ ಆಸ್ಪತ್ರೆ ಕಟ್ಟಡವನ್ನು ನಿರ್ಮಿಸಲಾಗಿದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡು ಮೂರು ವರ್ಷಗಳೇ ಕಳೆದಿದ್ದರೂ, ವಿವಿಧ ಕಾರಣಗಳಿಂದ ಉದ್ಘಾಟನೆ ಭಾಗ್ಯ ಕಂಡಿರಲಿಲ್ಲ. ಇಂದು ಅಧೀಕೃತವಾಗಿ ಲೋಕಾರ್ಪಣೆಗೊಳ್ಳುವ ಮೂಲಕ ಕಾರ್ಮಿಕರ ಚಿಕಿತ್ಸೆಗೆ ಹಾದಿ ಸುಗಮವಾಗಿದೆ.

ಕಾರ್ಮಿಕರಿಗೆ ವರದಾನ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದು, ತುರ್ತು ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ಇತ್ತು. ಈಗ ಸ್ಥಳೀಯವಾಗಿ ಸುಸಜ್ಜಿತ ಆಸ್ಪತ್ರೆ ಲಭ್ಯವಿರುವುದರಿಂದ ಸಾವಿರಾರು ಕುಟುಂಬಗಳಿಗೆ ಅನುಕೂಲವಾಗಲಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ಮತ್ತು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಗುಣಮಟ್ಟದ ಚಿಕಿತ್ಸೆ ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಈ ಆಸ್ಪತ್ರೆ ದೊಡ್ಡಬಳ್ಳಾಪುರ ತಾಲೂಕಿನ ಮೈಲಿಗಲ್ಲಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More