ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ

ವಿದೇಶದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಸಾಗಿಸುತ್ತಿದ್ದವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಏರ್​ಪೋರ್ಟ್​ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಬರೋಬ್ಬರಿ 20 ಕೋಟಿ ರೂ ಮೌಲ್ಯದ 2 ಕೆಜಿ ಕೊಕೇನ್​ ಪತ್ತೆಯಾಗಿದೆ.

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 20 ಕೋಟಿ ರೂ. ಮೌಲ್ಯದ ಕೊಕೇನ್​ ಜಪ್ತಿ
ಡ್ರಗ್ಸ್ ಇರುವ ಕ್ಯಾಪ್ಸೂಲ್
Follow us
ನವೀನ್ ಕುಮಾರ್ ಟಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 20, 2023 | 8:53 PM

ಬೆಂಗಳೂರು, (ಡಿಸೆಂಬರ್ 20): ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ(Bengaluru kempegowda international airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ. ಇಥಿಯೋಪಿಯಾದಿಂದ ಕ್ಯಾಪ್ಸುಲ್‌ಗಳ ರೂಪದಲ್ಲಿ 2 ಕೆಜಿ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್​ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 20 ಕೋಟಿ ರೂ. ಮೌಲ್ಯದ 2 ಕೆಜಿ ಕೋಕೆನ್ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಅದಿಸ್ ಅಬಾಬಾದಿಂದ ಇಥೋಪಿಯಾ ಏರ್ಲೈನ್ಸ್ ನಲ್ಲಿ ಬಂದಿದ್ದ ಆರೋಪಿ, ಡ್ರಗ್ಸ್​ ತುಂಬಿದ್ದ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಸ್ಕ್ಯಾನ್ ಮಾಡಿಸಿದಾಗ ಆರೋಪಿಯ ಹೊಟ್ಟೆಯಲ್ಲಿ 50ಕ್ಕೂ ಅಧಿಕ ಕ್ಯಾಪ್ಸೂಲ್​ಗಳು ಪತ್ತೆಯಾಗಿವೆ. ಬಳಿಕ ವೈದ್ಯರು ಆರೋಪಿಯ ಹೊಟ್ಟೆಯಲ್ಲಿದ್ದ ಕ್ಯಾಪ್ಸೂಲ್‍ಗಳನ್ನು ಹೊರಗೆ ತೆಗೆದಿದ್ದಾರೆ.

ಸದ್ಯ ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಯಾರಿಂದ ಪಡೆದುಕೊಂಡು ಎಲ್ಲಿಗೆ ಕೊಂಡೊಯ್ಯುತ್ತಿದ್ದ ಎನ್ನುವ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Published On - 8:33 pm, Wed, 20 December 23

ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು