ಬೆಂಗಳೂರು, (ಡಿಸೆಂಬರ್ 20): ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ(Bengaluru kempegowda international airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ. ಇಥಿಯೋಪಿಯಾದಿಂದ ಕ್ಯಾಪ್ಸುಲ್‌ಗಳ ರೂಪದಲ್ಲಿ 2 ಕೆಜಿ ಕೊಕೇನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 20 ಕೋಟಿ ರೂ. ಮೌಲ್ಯದ 2 ಕೆಜಿ ಕೋಕೆನ್ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.
ಅದಿಸ್ ಅಬಾಬಾದಿಂದ ಇಥೋಪಿಯಾ ಏರ್ಲೈನ್ಸ್ ನಲ್ಲಿ ಬಂದಿದ್ದ ಆರೋಪಿ, ಡ್ರಗ್ಸ್ ತುಂಬಿದ್ದ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಸ್ಕ್ಯಾನ್ ಮಾಡಿಸಿದಾಗ ಆರೋಪಿಯ ಹೊಟ್ಟೆಯಲ್ಲಿ 50ಕ್ಕೂ ಅಧಿಕ ಕ್ಯಾಪ್ಸೂಲ್ಗಳು ಪತ್ತೆಯಾಗಿವೆ. ಬಳಿಕ ವೈದ್ಯರು ಆರೋಪಿಯ ಹೊಟ್ಟೆಯಲ್ಲಿದ್ದ ಕ್ಯಾಪ್ಸೂಲ್‍ಗಳನ್ನು ಹೊರಗೆ ತೆಗೆದಿದ್ದಾರೆ.
ಸದ್ಯ ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಯಾರಿಂದ ಪಡೆದುಕೊಂಡು ಎಲ್ಲಿಗೆ ಕೊಂಡೊಯ್ಯುತ್ತಿದ್ದ ಎನ್ನುವ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
Published On - 8:33 pm, Wed, 20 December 23