AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಮದ್ಯದ ನಶೆಯಲ್ಲಿದ್ದ ತಾಯಿಯೊಂದಿಗೆ ತಮಾಷೆ ಮಾಡಲು ಹೋಗಿ ಯುವಕನೋರ್ವ ನೆಲಮಂಗಲದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಹಣ ಕೊಡದಿದ್ದಾಗ ಆತ್ಮಹತ್ಯೆ ಬೆದರಿಕೆ ಹಾಕಿದ್ದ ಆತ, ನೇಣಿನ ಕುಣಿಕೆಗೆ ಸಿಲುಕಿ ಅಕಸ್ಮಿಕವಾಗಿ ಮೃತಪಟ್ಟಿದ್ದಾನೆ. ಈ ಹಿಂದೆಯೂ ಇದೇ ರೀತಿ ಆತ ಕುಟುಂಬಸ್ಥರ ಜೊತೆ ತಮಾಷೆ ಮಾಡಿದ್ದ. ಆ ವೇಳೆ ತಾಯಿ ಬುದ್ಧಿ ಹೇಳಿದ್ದರೂ ಚಾಳಿ ಮುಂದುವರಿಸಿದ್ದ ಎನ್ನಲಾಗಿದೆ. ಮಗನ ಹುಚ್ಚಾಟದ ಕಾರಣ ಆತನ ಮದುವೆ ಬಗ್ಗೆ ಯೋಚಿಸಿದ್ದ ತಾಯಿ ಈಗ ಜಣ್ಣೀರಲ್ಲಿ ಕೈತೊಳೆಯುವಂತಾಗಿದೆ.

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ
ಮೃತ ವಿಜಯ್​​ಕುಮಾರ್​​
ಪ್ರಸನ್ನ ಹೆಗಡೆ
|

Updated on: Dec 31, 2025 | 3:01 PM

Share

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.

ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಬಳಿಕ ತಮಾಷೆ ಮಾಡಲು ಹೋಗಿ ನೇಣಿನ ಕುಣಿಕೆಗೆ ಸಿಲುಕಿ ವಿಜಯ್ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 8 ಗಂಟೆಗೆ ಘಟನೆ ನಡೆದಿದ್ದು, ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಲಿಫ್ಟ್​ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಇದೇ ರೀತಿ ಹಿಂದೆಯೂ ತಮಾಷೆ ಮಾಡಿದ್ದ ವಿಜಯ್​​

ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ವಿಜಯ್​​ಕುಮಾರ್​​ಗೆ ಮದುವೆ ಮಾಡಬೇಕೆಂದು ತಾಯಿ ಕನಸು ಕಂಡಿದ್ದರು. ಚೆನ್ನಾಗಿ ಮಾತನಾಡುತ್ತಾ ತಮಾಷೆಯ ಸ್ವಾಭಾವ ಹೊಂದಿದ್ದ ವಿಜಯ್​​ ಮದ್ಯಪಾನ ಮಾಡಿ ಬಂದಿದ್ದಕ್ಕೆ ತಾಯಿ ಬೈದಿದ್ದರು. ಆ ವೇಳೆ ಆಕೆಯನ್ನು ತಮಾಷೆಗೆ ಹೆದರಿಸಲು ಹೋಗಿ ವಿಜಯ್​​ ನೇಣಿನ ಕುಣಿಕೆಗೆ ಸಿಲುಕಿದ್ದು, ಮನೆಯವರಿಗೆ ಇದು ಗಮನಕ್ಕೆ ಬರುವಷ್ಟರಲ್ಲಿ ಆತನ​​ ಪ್ರಾಣಪಕ್ಷಿ ಹಾರಿ ಹೋಗಿತ್ತು. ಹೆತ್ತವರ ಬಳಿ ಇದೇ ರೀತಿ ಹಲವು ಬಾರಿ ಈತ ತಮಾಷೆ ಮಾಡಿದ್ದು, ಸಾವಿನ ವಿಚಾರದಲ್ಲಿ ತಮಾಷೆ ಮಾಡಬೇಡ ಕಣೋ ಎಂದು ಹಲವು ಬಾರಿ ತಾಯಿಯೂ ವಿಜಯ್​​ಗೆ ಬುದ್ಧಿ ಹೇಳಿದ್ದರು. ಆದರೂ ಅದೇ ಚಾಳಿ ಮುಂದುವರಿಸಿದ್ದ ಕಾರಣ ಈಗ ಮಗ ಪ್ರಾಣವನ್ನೇ ಕಳೆದುಕೊಂಡಿದ್ದಾನೆ ಎಂದು ಕುಟುಂಬಸ್ಥರು ಅಲವತ್ತುಕೊಂಡಿದ್ದಾರೆ.

ವರದಿ: ಮಂಜುನಾಥ್​​, ಡಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ