AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆಗಳು ಸ್ಥಗಿತಗೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ಹಾಗೂ ಮಂಗಳೂರಿನಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಪ್ರಯಾಣಿಕರು ಶುಲ್ಕವಿಲ್ಲದೆ ಪ್ರಯಾಣ ಮರುನಿಗದಿಪಡಿಸಲು ಅಥವಾ ಪೂರ್ಣ ಹಣ ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು
ಏರ್ ಇಂಡಿಯಾ ಎಕ್ಸಪ್ರೆಸ್​​ ವಿಮಾನImage Credit source: Google
ಹರೀಶ್ ಜಿ.ಆರ್​.
| Edited By: |

Updated on: Mar 16, 2026 | 3:01 PM

Share

ಬೆಂಗಳೂರು, ಮಾರ್ಚ್​​ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ‌ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ.

ಬೆಂಗಳೂರಲ್ಲಿ 24 ವಿಮಾನಗಳ ಹಾರಾಟ ಕ್ಯಾನ್ಸಲ್

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮನ ಮತ್ತು ಆಗಮಿಸಬೇಕಿದ್ದ ಒಟ್ಟು 24 ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿವೆ. ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮಿಸಬೇಕಿದ್ದ 11 ಫ್ಲೈಟ್​ಗಳು ಮತ್ತು ಅರಬ್ ದೇಶಗಳಿಂದ ಕೆಐಎಬಿಗೆ ಆಗಮಿಸಬೇಕಿದ್ದ 13 ಫ್ಲೈಟ್ ರದ್ದಾಗಿವೆ. ಅಬುದಾಬಿ, ರಿಯಾದ್, ಜಿಡ್ಡಾ, ಡಮಾಮ್, ದುಬೈ ಹಾಗೂ ದೋಹಾದಿಂದ ಕೆಐಎಬಿಗೆ ಆಗಮಿಸಿದ್ದ ವಿಮಾನಗಳು ಕ್ಯಾನ್ಸಲ್ ಆಗಿವೆ ಎನ್ನಲಾಗಿದೆ.

ಇದನ್ನೂ ಓದಿ: ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ; ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ

ಮಂಗಳೂರು ಏರ್​​ಪೋರ್ಟ್​​ನಿಂದಲೂ ವಿಮಾನ ಹಾರಾಟ ವ್ಯತ್ಯಯ

ದುಬೈ ವಿಮಾನ ನಿಲ್ದಾಣದ ಬಳಿ ದಾಳಿ ಹಿನ್ನೆಲೆ ಮಂಗಳೂರಿನಿಂದ ದುಬೈ, ಡಮಾಮ್ ಮತ್ತು ಅಬುಧಾಬಿಗೆ ವಿಮಾನ ಸೇವೆ ಸ್ಥಗಿತಗೊಂಡಿದೆ. ಏರ್ ಇಂಡಿಯಾ ಎಕ್ಸ್​​ಪ್ರೆಸ್​​ನ ಇಂದು ಮತ್ತು ನಾಳೆಯ ವಿಮಾನ ಹಾರಾಟ ರದ್ದಾಗಿದೆ. ಯುನೈಟೆಡ್‌ ಅರಬ್‌ ಎಮಿರೇಟ್ಸ್ ವಿಮಾನ ನಿಲ್ದಾಣದ ಅಧಿಕಾರಿಗಳ ಸೂಚನೆಯ ಹಿನ್ನೆಲೆ ವಿಮಾನಯಾನ ಹಾರಾಟ ನಡೆಸುತ್ತಿಲ್ಲ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More