ಮಾಜಿ ವಿಧಾನಪರಿಷತ್​ ಸದಸ್ಯನ ಸಹೋದರನ ಮನೆ ಮೇಲೆ ಇಡಿ ದಾಳಿ

ಮಾಜಿ ವಿಧಾನಪರಿಷತ್ ಸದಸ್ಯ​ ಬಿ.ಟಿ. ದಯಾನಂದರೆಡ್ಡಿ ಸಹೋದರ, ಬಿಲ್ಡರ್ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿ.ಟಿ.ನಾಗರಾಜ್ ರೆಡ್ಡಿ ಅವರು ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಮಹೇಂದ್ರ ಹೋಮ್ಸ್ ಮತ್ತು ಗ್ರೂಪ್ ಅಪ್ ಕಂಪನಿಗಳ ಮಾಲೀಕರಾಗಿದ್ದಾರೆ.

ಮಾಜಿ ವಿಧಾನಪರಿಷತ್​ ಸದಸ್ಯನ ಸಹೋದರನ ಮನೆ ಮೇಲೆ ಇಡಿ ದಾಳಿ
ಬಿ.ಟಿ. ನಾಗರಾಜ್ ರೆಡ್ಡಿ
Follow us
| Updated By: ವಿವೇಕ ಬಿರಾದಾರ

Updated on:Mar 13, 2024 | 10:37 AM

ಆನೇಕಲ್ ಮಾರ್ಚ್​ 13: ಮಾಜಿ ವಿಧಾನಪರಿಷತ್ (Legislative Council) ಸದಸ್ಯ​ ಬಿ.ಟಿ. ದಯಾನಂದರೆಡ್ಡಿ ಸಹೋದರ, ಬಿಲ್ಡರ್ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿ.ಟಿ.ನಾಗರಾಜ್ ರೆಡ್ಡಿ ಅವರು ಆನೇಕಲ್ (Anekal) ತಾಲೂಕಿನ ಬೊಮ್ಮಸಂದ್ರದಲ್ಲಿರುವ ಮಹೇಂದ್ರ ಹೋಮ್ಸ್ ಮತ್ತು ಗ್ರೂಪ್ ಅಪ್ ಕಂಪನಿಗಳ ಮಾಲೀಕರಾಗಿದ್ದಾರೆ. ಇಡಿ ಅಧಿಕಾರಿಗಳು ಹಲವು ದಾಖಲೆಗಳು ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಬಿ.ಟಿ.ನಾಗರಾಜರೆಡ್ಡಿ ಅವರು ಇತ್ತೀಚೆಗೆ ಮಹೇಂದ್ರ ಹೋಮ್ಸ್ ಹೆಸರಿನಲ್ಲಿ ಅಪಾರ್ಟ್ಮೆಂಟ್​ಗಳನ್ನು ನಿರ್ಮಾಣ ಮಾಡಿದ್ದರು. ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಹೆಚ್ಚು ಹೂಡಿಕೆ ಮಾಡಿದ್ದರು.

ಬೆಂಗಳೂರಿನಲ್ಲಿ ಇಡಿ ದಾಳಿ: 11.25 ಕೋಟಿ ನಗದು ಜಪ್ತಿ

ಕಳೆದ ಕೆಲ ದಿನಗಳ ಹಿಂದೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವಿಜಯ್ ತಾತ ಎಂಬವರ ಮತ್ತು ಅವರ ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ಇಡಿ ಅಧಿಕಾರು ಪರಿಶೀಲನೆ ನಡೆಸಿದ್ದರು. ಪರಿಶೀಲನೆ ವೇಳೆ ಅಧಿಕಾರಿಗಳು ಆರೋಪಿಗಳ ಅಕೌಂಟ್‌ನಲ್ಲಿದ್ದ ಸುಮಾರು 11.25 ಕೋಟಿ ಹಣವನ್ನ ಜಪ್ತಿ ಮಾಡಿಕೊಂಡಿದ್ದರು. 120 ಕೋಟಿ ಮೌಲ್ಯದ ಆಸ್ತಿ ಪತ್ರಗಳು, ಡಿಜಿಟಲ್ ಎವಿಡೆನ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದರು.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ, ಫೆಬ್ರವರಿ 29 ಮತ್ತು ಮಾರ್ಚ್ 1 ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಪಿಎಂಎಲ್‌ಎ 2002 ರ ಅಡಿಯಲ್ಲಿ ಆರೋಪಿಗಳಾದ ವಿಜಯಾ ಆರ್ ತಾತಾ ಮತ್ತು ಅವರ ಸಹಚರರ ವಸತಿ ಆವರಣದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ತಿಳಿಸಿತ್ತು.

ಇದನ್ನೂ ಓದಿ: DK Shivakumar: ಇಡಿ ಪ್ರಕರಣ ರದ್ದಾದರೂ ಡಿಕೆ ಶಿವಕುಮಾರ್​ಗೆ ಕಾಡುತ್ತಿದೆ ಸಿಬಿಐ ಕಂಟಕ!

ಆರ್ ಎಸ್ ಚಂದ್ರಶೇಖರ್, ಮುನಿರಾಜು ಕೆ, ಡಿ ನಾಗೇಂದ್ರ ಬಾಬು, ಮಂಜುನಾಥ್ ಬಿ ಎಸ್ ಮತ್ತು ಸಂಬಂಧಿತ ಕಂಪನಿಗಳ ಕಚೇರಿಗಳ ಮೇಲೆ. ಸಂಚಯ ಲ್ಯಾಂಡ್ ಆ್ಯಂಡ್ ಎಸ್ಟೇಟ್ ಪ್ರೈ. ಲಿಮಿಟೆಡ್, ಬಿಸಿಸಿ ಕನ್ಸ್ಟ್ರಕ್ಷನ್ಸ್ ಪ್ರೈ. ಲಿಮಿಟೆಡ್, ಆಕಾಶ್ ಎಜುಕೇಶನ್ ಅಂಡ್ ಡೆವಲಪ್‌ಮೆಂಟ್ ಟ್ರಸ್ಟ್, ಎಸ್ ವಿ ಕಾಂಕ್ರೀಟ್ ಪ್ರಾಜೆಕ್ಟ್ಸ್ ಪ್ರೈವೇಟ್, M/s ಸಂಚಯ ಲ್ಯಾಂಡ್ & ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರಿಗೆ ಸಂಬಂಧಿಸಿದ ಪ್ರಕರಣಗಳು ಇದಾಗಿದೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿ 11.25 ಕೋಟಿ ರೂಪಾಯಿ ಪತ್ತೆಯಾಗಿದ್ದು, ಇದನ್ನು ಫ್ರೀಜ್ ಮಾಡಲಾಗಿದೆ. ಇದರೊಂದಿಗೆ 120 ಕೋಟಿ (ಅಂದಾಜು) ಮೌಲ್ಯದ ಸ್ಥಿರ/ಚರ ಆಸ್ತಿಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Wed, 13 March 24