ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಎಂಟು ಮಕ್ಕಳು ಅಸ್ವಸ್ಥ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ (ಜ.11) ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಜನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

Follow us
ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ

Updated on:Jan 12, 2024 | 8:50 AM

ದೇವನಹಳ್ಳಿ, ಜನವರಿ 12: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ (Government School) ಗುರುವಾರ (ಜ.11) ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಜನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ, ವಸತಿ ನಿಲಯಕ್ಕೆ ತೆರಳಿದ್ದಾರೆ. ಅಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ತಕ್ಷಣ ವಸತಿ ನಿಲಯದ ವಾರ್ಡ್​ನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಪ್ರೌಡಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯಿಂದ ಈ ರೀತಿಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಳೆದೆರಡು ದಿನಗಳಿಂದ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸುತ್ತಿರುವ ಆರೋಪ ಕೇಳಿಬಂದಿದೆ.

Published On - 8:44 am, Fri, 12 January 24