AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಗಡಿಯಲ್ಲಿ ಆನೆ ಹಾವಳಿ: ಸಿಕ್ಕ ಸಿಕ್ಕವರ ಮೇಲೆ ದಾಳಿ, ಇಬ್ಬರು ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಗಡಿಯಲ್ಲಿ ಜೋಡಿ ಕಿಲ್ಲರ್ ಎಲಿಫೆಂಟ್ಸ್(Elephant) ಹಾವಳಿ ಜೋರಾಗಿದೆ. ಸಿಕ್ಕ ಸಿಕ್ಕ ಸಾರ್ವಜನಿಕರ ಮೇಲೆ ಕಿಲ್ಲರ್ ಎಲಿಫೆಂಟ್ಸ್ ದಾಳಿ ಮಾಡುತ್ತಿದ್ದು, ನಿನ್ನೆ(ಮೇ.23) ಇಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ತಮಿಳುನಾಡಿನ ಹೊಸೂರು ಸಮೀಪದ ನಾಟ್ರಾಪಲ್ಲಿ ಬಳಿ ನಡೆದಿದೆ.

ತಮಿಳುನಾಡು ಗಡಿಯಲ್ಲಿ ಆನೆ ಹಾವಳಿ: ಸಿಕ್ಕ ಸಿಕ್ಕವರ ಮೇಲೆ ದಾಳಿ, ಇಬ್ಬರು ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ತಮಿಳುನಾಡು ಗಡಿಯಲ್ಲಿ ಆನೆ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on: May 24, 2023 | 10:45 AM

Share

ಬೆಂಗಳೂರು ಗ್ರಾಮಾಂತರ: ಗಡಿಯಲ್ಲಿ ಜೋಡಿ ಕಿಲ್ಲರ್ ಎಲಿಫೆಂಟ್ಸ್(Elephant) ಹಾವಳಿ ಜೋರಾಗಿದೆ. ಸಿಕ್ಕ ಸಿಕ್ಕ ಸಾರ್ವಜನಿಕರ ಮೇಲೆ ಕಿಲ್ಲರ್ ಎಲಿಫೆಂಟ್ಸ್ ದಾಳಿ ಮಾಡುತ್ತಿದ್ದು, ನಿನ್ನೆ(ಮೇ.23) ಇಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ತಮಿಳುನಾಡಿ(Tamilnadu) ನ ಹೊಸೂರು ಸಮೀಪದ ನಾಟ್ರಾಪಲ್ಲಿ ಬಳಿ ನಡೆದಿದೆ. ದನ ಮೇಯಿಸುತ್ತಿದ್ದ ದನಗಾಹಿಯನ್ನ ಕೊಂದು, ಬಳಿಕ ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆ ಮೇಲೂ ದಾಳಿ ಮಾಡಿದೆ. ಇಬ್ಬರು ದಾಳಿಗೊಳಗಾದ ಸ್ಥಳದಲ್ಲೇ ಅಸುನೀಗಿದ್ದಾರೆ. ಮನೆಗೆ ಆಧಾರವಾಗಿದ್ದವರನ್ನ ಕಳೆದುಕೊಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ತಿಂಗಳ ಹಿಂದೆ ತಮಿಳುನಾಡು, ಆಂಧ್ರ ಗಡಿಯಲ್ಲಿ ನಾಲ್ವರ ಮೇಲೆ ದಾಳಿ ನಡೆಸಿ ಕೊಂದಿದ್ದ ಕಿಲ್ಲರ್ ಎಲಿಫೆಂಟ್ಸ್. ಇದೀಗ ತಮಿಳುನಾಡು ಗಡಿಯಲ್ಲು ಇಬ್ಬರನ್ನ ಬಲಿ ಪಡೆದಿದೆ.

ಕಿಲ್ಲರ್ ಕಾಡಾನೆಗಳ ಉಪಟಳಕ್ಕೆ ಗಡಿ ಗ್ರಾಮ ವಾಸಿಗಳ ಕಂಗಾಲಾಗಿದ್ದು, ಜನರನ್ನು ಕಂಡರೆ ಗುಂಪಿನತ್ತ ನುಗ್ಗುವ ಕಾಡಾನೆಗಳ ಕಾಟಕ್ಕೆ ಜನ ಸಾಮಾನ್ಯರು ಬೆಚ್ಚಿಬಿದ್ದಿದ್ದಾರೆ. ಇನ್ನು ಚೆನ್ನೈ ಹೆದ್ದಾರಿಯಲ್ಲಿ ಸಾಗಲು ವಾಹನ ಸವಾರರಿಗೂ ಇದೀಗ ಡವ ಡವ ಸುರುವಾಗಿದೆ. ಆದಷ್ಟು ಬೇಗ ಕಿಲ್ಲರ್ ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಚಾಮರಾಜನಗರದಲ್ಲಿ ಆನೆ, ಚಿಕ್ಕಮಗಳೂರಿನಲ್ಲಿ ಹುಲಿ ಹಾವಳಿ; ಆತಂಕದಲ್ಲಿ ಜನ

ಕಾಫಿ ತೋಟದಲ್ಲಿ ಕಾಡಾನೆ ಪ್ರತ್ಯಕ್ಷ ಆತಂಕದಲ್ಲಿ ಕಾರ್ಮಿಕರು

ಚಿಕ್ಕಮಗಳೂರು: ಅಲ್ದೂರು ಸಮೀಪದ ಕೆರೆಹಕ್ಲು ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಕಾಫಿತೋಟದಲ್ಲಿ ಕಾಡಾನೆ ಸಂಚಾರದಿಂದ ಕಾರ್ಮಿಕರು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಎರಡು ದಿನದಿಂದ ಕೆರೆಹಕ್ಲು ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಯ ಸ್ಥಳಾಂತರಕ್ಕೆ ಸ್ಥಳೀಯರ ಒತ್ತಾಯ ಮಾಡುತ್ತಿದ್ದಾರೆ.

15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ಚಿಕ್ಕಮಗಳೂರು: ರಾಜ ಗಾಂಭೀರ್ಯದಿಂದ ಫೋಸ್ ಕೊಡುತ್ತಿರುವ ಗಜರಾಜ. ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಂದೇ ರೋಡು ಎನ್ನುವ ಹಾಗೇ ವಾಕ್ ಮಾಡುತ್ತಿರುವ ಆನೆ. ಮರೆಯಲ್ಲಿ ನಿಂತು ಕಳ್ಳನಂತೆ ನೋಡ್ತಿರೋ ಆನೆ. ರಸ್ತೆ ಬದಿಯ ಕಟ್ಟೆ ದಾಟಿ ಮತ್ತೊಂದೆಡೆಗೆ ಸಾಗ್ತಿರುವ ಒಂಟಿಸಲಗ. ಹೇಳೋಕೆ ಒಂದೋ ಎರಡೋ. ಕಳೆದ 15 ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಕಾಡಾನೆ ಹಾವಾಳಿ ಮೀತಿಮೀರಿದೆ. 22 ಕಿ.ಮೀ ವ್ಯಾಪ್ತಿಯ ಚಾರ್ಮಾಡಿಯಲ್ಲಿ ಒಂದೇ ಆನೆ ಇದೆಯೋ ಅಥವಾ ಅದಕ್ಕಿಂತ ಹೆಚ್ಚು ಇದ್ದಾವೋ ಗೊತ್ತಿಲ್ಲ. ಈ ಮಾರ್ಗದಲ್ಲಿ ಓಡಾಡುವ ಜನ ನಿತ್ಯ ಒಂದೊಂದು ಜಾಗದಲ್ಲಿ ಆನೆ ಕಂಡು ಆತಂಕಕ್ಕೀಡಾಗಿದ್ದಾರೆ.

ಇದನ್ನೂ ಓದಿ:Viral Video: ಆನೆಯು ಮರದಿಂದ ಹಲಸಿನ ಹಣ್ಣು ಕೀಳುವುದ ಎಲ್ಲಾರೂ ಕಂಡಿರಾ

ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತೆ. ಎರಡ್ಮೂರು ದಿನದ ಹಿಂದೆ ರಸ್ತೆ ಮಧ್ಯೆ ನಿಂತಿದ್ದ ಆನೆ ಕಂಡು ಸರ್ಕಾರಿ ಬಸ್ ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು. ಬೈಕ್-ಕಾರು ಸವಾರರು ಕೂಡ ನಿಂತಲ್ಲೇ ನಿಂತಿದ್ದರು. ಗಾಡಿ ರಿವರ್ಸ್ ತೆಗೆದು ಹೋಗೋದಕ್ಕೂ ಸಾಧ್ಯವಿಲ್ಲ. ಏಕೆಂದರೆ ಈ ಹಾವು ಬಳುಕಿನ ಮೈಕಟ್ಟಿನ ತರಹ ರಸ್ತೆಯಿರುವ ಕಾರಣ, ಹಾಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕಿದೆ. ನಾಳೆ ಮತ್ತೊಂದು ಅನಾಹುತವಾದ ಬಳಿಕ ಪರಿಹಾರವೆಂದು ಎಚ್ಚೆತ್ತುಕೊಳ್ಳುವ ಬದಲು ಆನೆಯನ್ನೇ ಸ್ಥಳಾಂತರ ಮಾಡೋದು ಒಳ್ಳೆಯದು ಎಂದು ಜನರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ