ನೌಕರರ ಮುಷ್ಕರ: ದೇವನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಸೇವೆ ಬಂದ್ ಮಾಡಿ, ಶಾಸಕರಿಗಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳು!

ಕಚೇರಿಯ ಹೊರಗಡೆ ಬಾಗಿಲಿಗೆ ಬೀಗ ಹಾಕಿಕೊಂಡು ಒಳಗಡೆ JDS ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರನ್ನು ಕೂರಿಸಿಕೊಂಡು ಅಧಿಕಾರಿಗಳು ಅವರ ಕೆಲಸ ಮಾಡಿಕೊಟ್ಟಿದ್ದಾರೆ. ಜನ ಸಾಮಾನ್ಯರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೊಂದು ನ್ಯಾಯ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ನೌಕರರ ಮುಷ್ಕರ: ದೇವನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಸೇವೆ ಬಂದ್ ಮಾಡಿ, ಶಾಸಕರಿಗಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳು!
ಶಾಸಕ ನಿಸರ್ಗ ನಾರಾಯಣಸ್ವಾಮಿ
Follow us
ಆಯೇಷಾ ಬಾನು
|

Updated on:Mar 01, 2023 | 12:23 PM

ದೇವನಹಳ್ಳಿ: 7ನೇ ವೇತನ ಜಾರಿಗೆ ಆಗ್ರಹಿಸಿ ಇಂದು (ಮಾರ್ಚ್ 01) ರಾಜ್ಯಾದ್ಯಂತ ಮುಷ್ಕರಕ್ಕೆ ಸರ್ಕಾರಿ ನೌಕರರು ಮುಂದಾಗಿದ್ದು ಇದರಿಂದ ರಾಜ್ಯದಲ್ಲಿ ಭಾರಿ ಸಮಸ್ಯೆ ಎದುರಾಗಿದೆ. ಸರ್ಕಾರಿ ಆಸ್ಪತ್ರೆಗಳ ಮುಂದೆ ರೋಗಿಗಳು ನರಳಾಡುತ್ತಿದ್ದಾರೆ. ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಸರ್ಕಾರಿ ಕಚೇರಿಗಳು ಖಾಲಿ ಖಾಲಿಯಾಗಿವೆ. ಇದರ ನಡುವೆ ಇಲ್ಲೊಂದು ಸರ್ಕಾರಿ ಕಚೇರಿ ಶಾಸಕರನ್ನು ಒಳಗಡೆ ಕೂರಿಸಿಕೊಂಡು ಕೆಲಸ ಮಾಡಿದ್ದು ಆಚೆ ಜನ ಸಾಮಾನ್ಯರು ಕಾದುಕುಳಿತ ಘಟನೆ ನಡೆದಿದೆ.

ಇಂದು ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಬಹುತೇಕ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಲಾಗಿದೆ. ಆದ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಸಾರ್ವಜನಿಕರಿಗೆ ಸೇವೆ ಸ್ಥಗಿತಗೊಳಿಸಿ ಕೇವಲ ಶಾಸಕರಿಗಾಗಿ ಮಾತ್ರ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಕಚೇರಿಯ ಹೊರಗಡೆ ಬಾಗಿಲಿಗೆ ಬೀಗ ಹಾಕಿಕೊಂಡು ಒಳಗಡೆ JDS ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರನ್ನು ಕೂರಿಸಿಕೊಂಡು ಅಧಿಕಾರಿಗಳು ಅವರ ಕೆಲಸ ಮಾಡಿಕೊಟ್ಟಿದ್ದಾರೆ. ಜನ ಸಾಮಾನ್ಯರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೊಂದು ನ್ಯಾಯ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karnataka Govt Employees Strike: ಕರ್ತವ್ಯಕ್ಕೆ ಹಾಜರಾಗದ ನೌಕರರಿಗೆ ಸರ್ಕಾರ ಖಡಕ್​ ಎಚ್ಚರಿಕೆ, ಆದೇಶದಲ್ಲೇನಿದೆ?

ಶಾಸಕರ ನಡೆಗೆ ಸಾರ್ವಜನಿಕರ ಆಕ್ರೋಶ

ಇನ್ನು ಶಾಸಕರ ನಡೆಗೆ ಸಾರ್ವಜನಿಕರು, ಆಮ್ ಆದ್ಮಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಶಾಸಕರನ್ನು ಕಚೇರಿಯಿಂದ ಹೊರಗಡೆ ಬರಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀಗ ತೆಗೆಯಲು ಬಿಡದೆ ಆಮ್ ಆದ್ಮಿ ಕಾರ್ಯಕರ್ತರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾಗಿಲಿಗೆ ಅಡ್ಡಲಾಗಿ ನಿಂತಿದ್ದಾರೆ. ಕಳೆದ ಒಂದು ಗಂಟೆಗೂ ಅಧಿಕ ಸಮಯದಿಂದ ಶಾಸಕರು ಒಳಗಡೆಯೇ ಬಂಧಿಯಾಗಿದ್ದಾರೆ. ಇನ್ನು ಪರಿಸ್ಥಿತಿ ನಿಯಂತ್ರಿಸಿ ಶಾಸಕರನ್ನು ಕಚೇರಿಯಿಂದ ಹೊರ ತರಲು ಬಂದ ಪೊಲೀಸರ ನಡುವೆಯೂ ಮಾತಿನ ಚಕಮಕಿ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:23 pm, Wed, 1 March 23