ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು

ಅರಣ್ಯ ಇಲಾಖೆಗೆ ಸೇರಿದ್ದ ಕೋಟ್ಯಂತರ ಮೌಲ್ಯದ ಒಂದು ಎಕರೆಗೂ ಅಧಿಕ‌ ಭೂಮಿಯನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ನ್ಯಾಯಾಲಯದ ಆದೇಶದ ಮೆರೆಗೆ ಒತ್ತುವರಿ ಭೂಮಿ ತೆರವು ಮಾಡಲಾಗುತ್ತಿದೆ.

ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು
ಮಳಿಗೆಗಳ ತೆರವು
Edited By: ವಿವೇಕ ಬಿರಾದಾರ

Updated on: Oct 27, 2023 | 9:40 AM

ದೇವನಹಳ್ಳಿ ಅ.27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ನಗರದಲ್ಲಿ ಬೆಳ್ಳಂ ಬೆಳಗ್ಗೆ ಜೆಸಿಬಿಗಳ ಘರ್ಜನೆ ಶರುವಾಗಿದೆ. ಹೊಸಕೋಟೆ ನಗರದ ಕೆಇಬಿ ವೃತ್ತದಲ್ಲಿನ ಅಕ್ರಮ ವಾಣಿಜ್ಯ ಕಟ್ಟಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು (Forest Department Officers) ತೆರವುಗೊಳಿಸುತ್ತಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ್ದ ಕೋಟ್ಯಂತರ ಮೌಲ್ಯದ ಒಂದು ಎಕರೆಗೂ ಅಧಿಕ‌ ಭೂಮಿಯನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು.

ಈ ವಿಚಾರವಾಗಿ 1990ರಿಂದ ಎಂಟಿಬಿ ‌ನಾಗರಾಜ್ ಬೆಂಬಲಿಗ, ಬಿಜೆಪಿ ಮುಖಂಡ ಮೋಹನ್ ರವಿ ಹಾಗೂ ಅರಣ್ಯ ಇಲಾಖೆ ನಡುವೆ ವ್ಯಾಜ್ಯ ನಡೆಯುತ್ತಿದೆ. ಇದೀಗ ನ್ಯಾಯಾಲಯ ಅರಣ್ಯ ಇಲಾಖೆ ಪರ ಆದೇಶ ನೀಡಿದೆ. ಆದೇಶ ಹಿನ್ನೆಲೆಯಲ್ಲಿ ಇದೀಗ ಒತ್ತುವರಿ ಭೂಮಿ ತೆರವು ಮಾಡಲಾಗುತ್ತಿದೆ. ಪೊಲೀಸ್ ಭದ್ರತೆಯಲ್ಲಿ ವಾಣಿಜ್ಯ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಸರ್ವೆ ನಂಬರ್ 264 ರಲ್ಲಿ ಅರಣ್ಯ ಇಲಾಖೆಗೆ ಸೇರಿದ್ದ 15 ಗುಂಟೆ ಜಮೀನಿನಲ್ಲಿ ಗುರುಸ್ವಾಮಿ ಹಾಗೂ ಮಕ್ಕಳಾದ ಮೋಹನ್ ಮತ್ತು ರವಿ ಎಂಬವುವರು ಮನೆ ಹಾಗೂ ಬಾಡಿಗೆ ಕಟ್ಟಡ ನಿರ್ಮಾಣ ಮಾಡಿದ್ದರು.  ರಸ್ತೆ ಬದಿಯಲ್ಲಿ ಅಕ್ರಮವಾಗಿ ಕಟ್ಟಿದ್ದ 38 ಅಂಗಡಿಗಳ ತೆರವುಗೊಳಿಸಲಾಗಿದೆ. ವಾಸದ ಮನೆ ತೆರವಿಗೆ ಒಂದು ವಾರ ಗಡುವು ನೀಡಿ  ತಾತ್ಕಾಲಿಕವಾಗಿ ತೆರವು ಕಾರ್ಯ ಸ್ಥಗಿತಗೊಳಿಸಲಾಗಿದೆ. ವಾರದ ನಂತರ ವಾಸದ ಮನೆ ತೆರವುಗೋಳಿಸಿ ವಶಕ್ಕೆ ಪಡೆಯಲು ನಿರ್ಧರಿಸಲಾಗಿದೆ ಎಂದು ಆರ್​​ಎಫ್​ಒ ವರುಣ್ ಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Fri, 27 October 23

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us