ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ಖಾಸಗಿ ಶಾಲಾ ಶಿಕ್ಷಕನಿಂದ ಹಲ್ಲೆ, ಆರೋಪಿ ಅರೆಸ್ಟ್
ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿಯ ಮೇಲೆ ಖಾಸಗಿ ಶಾಲಾ ಶಿಕ್ಷಕ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆಯ ಪೊಲೀಸ್ ಠಾಣಾ ವ್ಯಾಪ್ತಿಯ ಕಡತನಮಲೆಯಲ್ಲಿ ನಡೆದಿದೆ. ಕಡತನಮಲೆ ಗ್ರಾಮದ ನಿವಾಸಿ ಖಾಸಗಿ ಶಾಲೆಯ ಶಿಕ್ಷಕ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ ಮೇಲೆ ಹಲ್ಲೆ ನಡೆಸಿದ ಆರೋಪಿ. ಸೆಪ್ಟೆಂಬರ್ 4 ನೇ ತಾರೀಖಿನಂದು ಗ್ರಾಮದ ಸರ್ಕಾರಿ ಶಾಲೆಯ ಜಾಗ ಒತ್ತುವರಿ ವಿಚಾರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ್ ಕಂದಾಯ ಅಧಿಕಾರಿಗಳ ಜೊತೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ […]
ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿಯ ಮೇಲೆ ಖಾಸಗಿ ಶಾಲಾ ಶಿಕ್ಷಕ ಹಲ್ಲೆ ನಡೆಸಿ, ಬೆದರಿಕೆ ಹಾಕಿರುವ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆಯ ಪೊಲೀಸ್ ಠಾಣಾ ವ್ಯಾಪ್ತಿಯ ಕಡತನಮಲೆಯಲ್ಲಿ ನಡೆದಿದೆ. ಕಡತನಮಲೆ ಗ್ರಾಮದ ನಿವಾಸಿ ಖಾಸಗಿ ಶಾಲೆಯ ಶಿಕ್ಷಕ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಕಮಲಾಕರ ಮೇಲೆ ಹಲ್ಲೆ ನಡೆಸಿದ ಆರೋಪಿ.
ಸೆಪ್ಟೆಂಬರ್ 4 ನೇ ತಾರೀಖಿನಂದು ಗ್ರಾಮದ ಸರ್ಕಾರಿ ಶಾಲೆಯ ಜಾಗ ಒತ್ತುವರಿ ವಿಚಾರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಮಲಾಕರ್ ಕಂದಾಯ ಅಧಿಕಾರಿಗಳ ಜೊತೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನ ಗುರುತು ಮಾಡಿದ ಅಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಮುಂದಾದಾಗ ಪೊಲೀಸರ ಮುಂದೆಯೆ ಹಲ್ಲೆ ನಡಸಿ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾನೆ.
ಇನ್ನು ಬಿಇಒ ಮೇಲೆ ಹಲ್ಲೆ ನಡೆಸುತ್ತಿದ್ದಂತೆ ಆರೋಪಿಯನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದರು. ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿ ಕಲಂ 323, 504, 353 ಮತ್ತು 34 ಐಪಿಸಿ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
ಖಾಸಗಿ ಶಾಲಾ ಶಿಕ್ಷಕ, ದೇವಾಲಯದ ಪೂಜಾರಿಯೂ..
ಬಿಇಒ ಮೆಲೆ ಹಲ್ಲೆ ನಡೆಸಿದ ಖಾಸಗಿ ಶಾಲೆಯ ಶಿಕ್ಷಕ ರಮೇಶ್ ಬೆಂಗಳೂರು ನಗರದ ಖಾಸಗಿ ಶಾಲೆಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಜೊತೆಗೆ ಗ್ರಾಮದ ದುರ್ಗದಮ್ಮ ದೇವಾಲಯದಲ್ಲಿ ಈತನು ಸೇರಿದಂತೆ ಇವರ ಕುಟುಂಬಸ್ಥರು ಪೂಜೆ ಮಾಡಿಕೊಂಡು ಬರುತ್ತಿದ್ದು ಮನೆಯ ಮುಂದೆ ಇದ್ದ ಶಾಲೆಯ ಜಾಗವನ್ನು ಒತ್ತುವರಿ ತೆರವು ಕಾರ್ಯಾಚರಣೆಗೆ ನೋಟಿಸ್ ನೀಡಿಲ್ಲ ಎಂದು ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
(encroachment yelahanka rajanukunte teacher assaults BEO arrested)