Sign In

By signing in or creating an account, you agree with Associated Broadcasting Company's Terms & Conditions and Privacy Policy.

Anekal News: ಹಸುಗಳಿಗೆ ಕಾಣಿಸಿಕೊಳ್ಳುತ್ತಿದೆ ಮಾರಕ ಖಾಯಿಲೆ; ಸೂಕ್ತ ಪರಿಹಾರ ಕಲ್ಪಿಸುವಂತೆ ರೈತರಿಂದ ಸರ್ಕಾರಕ್ಕೆ ಮನವಿ

ನಮ್ಮಲ್ಲಿ ಇವತ್ತಿಗೂ ಹೈನುಗಾರಿಕೆಯನ್ನೇ ನಂಬಿಕೊಂಡು ಬದುಕುತ್ತಿರುವ ಅದೆಷ್ಟೋ ರೈತರಿದ್ದಾರೆ. ಆದರೆ, ಇದೀಗ ಹಸುಗಳು ವಿಚಿತ್ರವಾದ ರೋಗಕ್ಕೆ ತುತ್ತಾಗಿ, ವಿಲವಿಲವೆಂದು ಒದ್ದಾಡಿ ಸಾವನ್ನಪ್ಪುತ್ತಿವೆ. ಮಾರಕ ರೋಗಕ್ಕೆ ತುತ್ತಾದ ಹಸುಗಳನ್ನ ಉಳಿಸಿಕೊಳ್ಳಲು ರೈತರು ಪರದಾಟ ನಡೆಸುತ್ತಿದ್ದಾರೆ.

Anekal News: ಹಸುಗಳಿಗೆ ಕಾಣಿಸಿಕೊಳ್ಳುತ್ತಿದೆ ಮಾರಕ ಖಾಯಿಲೆ; ಸೂಕ್ತ ಪರಿಹಾರ ಕಲ್ಪಿಸುವಂತೆ ರೈತರಿಂದ ಸರ್ಕಾರಕ್ಕೆ ಮನವಿ
ಮಾರಕ ಕಾಯಿಲೆಯಿಂದ ಬಳಲುತ್ತಿರುವ ಹಸುಗಳು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 18, 2023 | 1:13 PM

ಬೆಂಗಳೂರು ಗ್ರಾಮಾಂತರ: ಕರ್ನಾಟಕ- ತಮಿಳುನಾಡು ಗಡಿ ತಾಲೂಕಾದ ಆನೇಕಲ್(Anekal)​ನಲ್ಲಿ ಹಸುಗಳು ವಿಚಿತ್ರ ವೈರಸ್​ಗೆ ತುತ್ತಾಗಿ ನರಳಾಡುತ್ತಿದೆ. ಹಸುವನ್ನ ಉಳಿಸಿಕೊಳ್ಳಲು ರೈತರು ಪರದಾಟ ನಡೆಸುತ್ತಿದ್ದಾರೆ. ತಾಲ್ಲೂಕಿನ ಸುರಗಜಕ್ಕನಹಳ್ಳಿ, ಹಾರಗದ್ದೆ, ವಣಕನಹಳ್ಳಿ, ಗುಡ್ನಹಳ್ಳಿ ಹಾಗೂ ಸಮಂದೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದ ರೈತರ ಹಸುಗಳಿಗೆ ಮಾರಕ ರೋಗವೊಂದು ಕಾಣಿಸಿಕೊಂಡಿದೆ. ಹಸುಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದವರಿಗೆ, ಇದೀಗ ಅವುಗಳ ಜೀವ ಉಳಿಸಲು ಪರದಾಡುವ ಸ್ಥಿತಿ ನಿಮಾರ್ಣವಾಗಿದೆ.

ರೋಗ ಲಕ್ಷಣಗಳು

ಮೊದಲಿಗೆ ಹಸುಗಳಲ್ಲಿ ಕಿವಿ ಸೋರುವಿಕೆಯಾಗುತ್ತದೆ. ಇದಾದ ಮೂರ್ನಾಲ್ಕು ದಿನಗಳಲ್ಲಿ ತಲೆಯಲ್ಲಿ ಸೋಂಕು ಕಾಣಿಸಿಕೊಂಡು ಹಸು ಸೊರಗುತ್ತದೆ. ನಂತರ ಮೂಗು, ಬಾಯಿಯಲ್ಲಿ ಜೊಲ್ಲಿನ ಮಾದರಿ ಸೋರಿಕೆಯಾಗುತ್ತದೆ. ಈ ವೇಳೆ ಹಸು ವಾಲಿಕೊಂಡು ನಿಲ್ಲುವುದರಿಂದ ತಲೆ ಬೆನ್ನು ಮೂಳೆ ಸಂಪೂರ್ಣ ನಿಷ್ಕ್ರಿಯಗೊಂಡು ತಿಂದ ಆಹಾರ ಮೂಗು ಹಾಗೂ ಬಾಯಿಯಿಂದ ವಾಪಸ್ ಬರುತ್ತಿದ್ದು, ಹಸುಗಳು ಮೇವು ತಿನ್ನದೆ ನೀರನ್ನ ಕುಡಿಯದಂತಾಗಿ ಸಂಪೂರ್ಣ ಅಸ್ವಸ್ಥಗೊಂಡು ಸಾವನ್ನಪ್ಪುತ್ತಿವೆ. ಈ ರೋಗದಿಂದಾಗಿ ಹಸುಗಳು ಹೈರಾಣಾಗಿದ್ದರೆ, ಸೂಕ್ತ ಚಿಕಿತ್ಸೆ ಕೊಡಿಸಲು ಸಾಧ್ಯವಾಗದೇ ರೈತರು ಕಂಗಾಲಾಗಿದ್ದಾರೆ. ಹೈನುಗಾರಿಕೆಯನ್ನೇ ನಂಬಿಕೊಂಡಿದ್ದ ರೈತರು ಈ ರೋಗದಿಂದ ಹಸುಗಳನ್ನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ:West Nail Virus: ಕ್ಯಾಲಿಫೋರ್ನಿಯಾ: ಸತ್ತ ಕಾಗೆಗಳಲ್ಲಿ ವೆಸ್ಟ್​ ನೈಲ್ ವೈರಸ್ ಪತ್ತೆ

ಸಾವನ್ನಪ್ಪಿದ15 ಕ್ಕೂ ಹೆಚ್ಚು ಹಸುಗಳು

ಇನ್ನು ಈ ಹಿಂದೆ ತಮಿಳುನಾಡಿನ ಹಲವು ಗ್ರಾಮಗಳಲ್ಲಿ ಈ ವಿಚಿತ್ರ ರೋಗವು ಕಾಣಿಸಿಕೊಂಡು ಆದೆಷ್ಟೋ ಹಸುಗಳು ಸಾವನ್ನಪ್ಪಿದ್ದವು. ಇದೀಗ ತಮಿಳುನಾಡು ಗಡಿಭಾಗ ಆನೇಕಲ್ ತಾಲ್ಲೂಕಿನ ಗಡಿ ಗ್ರಾಮಗಳಿಗೆ ಆವರಿಸಿದ್ದು, ರೈತಾಪಿ ಜನರ ಜೀವನಾಡಿಯಾಗಿದ್ದ ಹಸುಗಳ ಮಾರಣಹೋಮವಾಗುತ್ತಿದೆ. ಈಗಾಗಲೇ ತಾಲ್ಲೂಕಿನಲ್ಲಿ ಸುಮಾರು 15 ಹೆಚ್ಚು ಹಸುಗಳು ಸಾವನ್ನಪ್ಪಿದ್ದು, 30 ಹೆಚ್ಚು ಹಸುಗಳು ರೋಗಕ್ಕೆ ತುತ್ತಾಗಿವೆ ಎನ್ನಲಾಗಿದೆ. ಇದೀಗ ಆನೇಕಲ್ ಭಾಗದಲ್ಲಿ ಹಸುಗಳಲ್ಲಿ ಸೋಂಕು ಉಲ್ಬಣಗೊಂಡಿರುವುದರಿಂದ ಪ್ರತ್ಯೇಕ ಲಸಿಕೆ ಇಲ್ಲದೆ ಹಸುಗಳು ಸಾವನ್ನಪ್ಪುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ.

ಇದಕ್ಕೆ ನಿಶ್ಚಿತ ಲಸಿಕೆಯಿಲ್ಲ ಎಂದ ನಿವೃತ್ತ ಪಶು ವೈದ್ಯ

ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಭೇಟಿ ನೀಡಿ ಈ ಕಾಯಿಲೆ ಯಾವುದೆಂದು ಪತ್ತೆ ಹಚ್ಚಿ, ಅದಕ್ಕೆ ಔಷಧಿಯನ್ನ ಕಂಡು ಹಿಡಿಯುವ ಮೂಲಕ ಹೈನುಗಾರಿಕೆ ನಡೆಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ. ಇನ್ನು ಈ ಬಗ್ಗೆ ನಿವೃತ್ತ ಪಶು ವೈದ್ಯರಾದ ಪ್ರಕಾಶ್ ಹೆಬ್ಬಾರ್ ಮಾಹಿತಿಯನ್ನ ನೀಡಿದ್ದು, ಇದೊಂದು ಮಾರಕ ರೋಗವಾಗಿದ್ದು, ನಿಶ್ಚಿತ ಲಸಿಕೆ ಇಲ್ಲ. ತಾಲೂಕಿನ ಹಲವು ಹಳ್ಳಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಮಾರಕವಾದ ರೋಗಕ್ಕೆ ತುತ್ತಾಗುತ್ತಿರುವ ಹಸುಗಳಿಗೆ ಯಾವ ರೀತಿಯ ಚಿಕಿತ್ಸೆಯನ್ನ ನೀಡಿ ಅವುಗಳನ್ನ ಉಳಿಸಿಕೊಳ್ಳಬೇಕು ಎಂಬುದು ತಿಳಿಯದಂತಾಗಿದೆ. ಸರ್ಕಾರ ಆದಷ್ಟು ಬೇಗ ವೈದ್ಯಕೀಯ ಇಲಾಖೆ ಮೂಲಕ ಲಸಿಕೆ ಕಂಡು ಹಿಡಿದರೆ ರೈತರು ನೆಮ್ಮದಿಯಾಗಿರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಒಟ್ಟಿನಲ್ಲಿ ರೈತಾಪಿ ಜನರಿಗೆ ಆಸರೆಯಾಗಿದ್ದ ಹಸುಗಳಿಗೆ ಈ ಮಾರಕ ರೋಗ ತಗುಲಿ ಸಾವನ್ನಪ್ಪುತ್ತಿದ್ದು, ಕೂಡಲೇ ಸರ್ಕಾರ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಹಸುಗಳ ಸಾವಿನ ನಿಖರ ಕಾರಣವನ್ನ ಕಂಡು ಹಿಡಿದು, ಹಸುಗಳ ಜೀವ ಉಳಿಸಬೇಕೆಂಬುದು ರೈತಾಪಿ ಜನರು ಆಗ್ರಹವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ