ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಸಾವು

ನಾಳೆ ಅಂದರೆ ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬ ಇದ್ದು, ಜನ ಹಬ್ಬ ಆಚರಣೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಹೂ -ಹಣ್ಣು ಖರೀದಿಗೆ ಜನ ಮಾರ್ಕೆಟ್​ಗಳಲ್ಲಿ ಮುಗಿಬಿದ್ದಿದ್ದಾರೆ. ಇದರ ಮಧ್ಯೆ ವರಮಹಾಲಕ್ಷ್ಮೀ ಹೂ ತರಲು ಹೋಗಿದ್ದ ತಂದೆ-ಮಗ ದುರಂತ ಅಂತ್ಯಕಂಡಿದ್ದಾರೆ.

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ ದುರಂತ ಸಾವು
ಮೃತ ತಂದೆ-ಮಗ
Edited By:

Updated on: Aug 24, 2023 | 10:08 AM

ಬೆಂಗಳೂರು, (ಆಗಸ್ಟ್ 24): ವರಮಹಾಲಕ್ಷ್ಮಿ ಹಬ್ಬ (varalakshmi festival) ಮತ್ತೆ ಬಂದಿದೆ. ನಾಳೆ ಅಂದರೆ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬ ಇದ್ದು, ವಿಶೇಷ ಪೂಜೆ-ಪುನಸ್ಕಾರಕ್ಕೆ ಜನರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ವರಮಹಾಲಕ್ಷ್ಮೀ ಹಬ್ಬಕ್ಕೆಂದು ತಾವರೆ ಹೂವು ಕೀಳಲು ಹೋಗಿ ತಂದೆ-ಮಗ (Father And Son) ದುರಂತ ಅಂತ್ಯಕಂಡಿದ್ದಾರೆ. ಹೌದು… ತಾವರೆ ಹೂವು ಕೀಳಲು ಹೋಗಿ ತಂದೆ, ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು(42), ಮಗ ಕೇಶವ(14) ಮೃತ ದುರ್ದೈವಿಗಳು.

ವರಮಹಾಲಕ್ಷ್ಮಿ ಹಬ್ವಕ್ಕೆ ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್​ ಮಾಡಿದ್ದರು. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಹೋಗಿದ್ದಾರೆ. ಮೊದಲು ಹೂ ಕೀಳಲು ಪುತ್ರ ಕೇಶವ ಕೆರೆಗೆ ಇಳಿದಿದ್ದಾನೆ. ಆದ್ರೆ, ಏಕಾಏಕಿ ನೀರಿನಲ್ಲಿ ಮುಳುಗಿದ್ದಾನೆ. ಕೂಡಲೇ ತಂದೆ ಪುಟ್ಟರಾಜು ಸಹ ಪುತ್ರನನ್ನು ರಕ್ಷಿಸಲು ನೀರಿಗಿಳಿದಿದ್ದಾರೆ. ಆದ್ರೆ, ದುರದೃಷ್ಟವಶಾತ್​ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿಜಯಪುರ: ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

ಈ ದುರ್ಘಟನೆ ಸಂಭವಿಸಿದ ಸ್ವಲ್ಪ ಹೊತ್ತಿನ ನಂತರ ಮತ್ತೋರ್ವ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ದಡದಲ್ಲಿ ಮೊಬೈಲ್ ಮತ್ತು ಚಪ್ಪಲಿ ಪತ್ತೆಯಾಗಿವೆ. ಇದರಿಂದ ಅನುಮಾನಗೊಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಇನ್ನು ವಿಷಯ ತಿಳಿದು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತಂದೆ-ಮಗನ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:06 am, Thu, 24 August 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us