ಪ್ರಿಯಕರನಿಗಾಗಿ ಠಾಣೆ ಮೆಟ್ಟಿಲೇರಿದ ಕಿರಿ ಮಗಳು, ಪ್ರೀತಿಗೆ ಬಿದ್ದ ಹಿರಿ ಮಗಳ ಹತ್ಯೆಗೈದ ತಂದೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆ ನಡೆದಿದೆ. ಪ್ರೀತಿಸಿದ ಪ್ರಿಯತಮನಿಗಾಗಿ ಕಿರಿ ಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿ ಸಾಂತ್ವಾನ ಕೇಂದ್ರದಲ್ಲಿದ್ದು, ಇತ್ತ ಹಿರಿ ಮಗಳ ಪ್ರೀತಿ ವಿಚಾರ ತಿಳಿದ ತಂದೆ ಆಕೆಯನ್ನು ಕೊಲೆ ಮಾಡಿದ್ದಾನೆ. ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.

ಪ್ರಿಯಕರನಿಗಾಗಿ ಠಾಣೆ ಮೆಟ್ಟಿಲೇರಿದ ಕಿರಿ ಮಗಳು, ಪ್ರೀತಿಗೆ ಬಿದ್ದ ಹಿರಿ ಮಗಳ ಹತ್ಯೆಗೈದ ತಂದೆ
ಪ್ರೀತಿಯ ವಿಚಾರ ತಿಳಿದು ಮಗಳನ್ನೇ ತಂದೆ ಕೊಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ
Edited By: Rakesh Nayak Manchi

Updated on: Oct 12, 2023 | 10:21 AM

ದೇವನಹಳ್ಳಿ, ಅ.12: ತನ್ನ ಇಬ್ಬರು ಮಕ್ಕಳ ಸರಣಿ ಪ್ರೀತಿಯಿಂದ ಮನನೊಂದ ವ್ಯಕ್ತಿಯೊಬ್ಬರು ಮರ್ಯಾದೆಗೆ ಅಂಜಿ ಹಿರಿ ಮಗಳನ್ನೇ ಕೊಲೆ (Murder) ಮಾಡಿದ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಪ್ರೀತಿಸಿದ ಪ್ರಿಯತಮನಿಗಾಗಿ ಕಿರಿ ಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿ ಸಾಂತ್ವಾನ ಕೇಂದ್ರ ಸೇರಿದ್ದಾಳೆ. ಇತ್ತ ಹಿರಿ ಮಗಳ ಪ್ರೀತಿ ವಿಚಾರ ತಿಳಿದ ತಂದೆ, ಚಿಕ್ಕ ಮಗಳು ಮರ್ಯಾದೆ ತೆಗೆದಳು, ಇವಳು ಮರ್ಯಾದೆ ಕಳೆಯುತ್ತಾಳೆ ಅಂತ ಕೊಲೆಯೇ ಮಾಡಿದ್ದಾನೆ.

ಕವನಾ (20) ಹತ್ಯೆಯಾದ ಯುವತಿ. ತನ್ನ ಮಗಳನ್ನು ಹತ್ಯೆಗೈದ ಬಳಿಕ ಆರೋಪಿ ಮಂಜುನಾಥ್ ವಿಶ್ವನಾಥಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮಂಜುನಾಥ್ ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ ಮಂಗಳವಾರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಳು. ಪ್ರೀತಿಸಿದವನ ಜೊತೆ ಹೋಗುವುದಾಗಿ ಠಾಣೆಯಲ್ಲಿ ಪಟ್ಟು ಹಿಡಿದಿದ್ದು, ಪೊಲೀಸರು ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಪ್ರೇಮಿಗಳಿಗೆ ಪೋಷಕರೇ ವಿಲನ್: ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ, ಯುವತಿ ಕುಟುಂಬ ಜೈಲು ಪಾಲು

ಇದರ ಬೆನ್ನಲ್ಲೇ ಹಿರಿ‌ ಮಗಳು ಸಹ ಪ್ರೀತಿ ಬಲೆಯಲ್ಲಿರುವ ವಿಚಾರ ತಿಳಿದಿದ್ದ ತಂದೆ ಮಂಜುನಾಥ್, ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಹಿರಿ ಮಗಳನ್ನು ಕೊಲೆ ಮಾಡಿದ್ದಾನೆ.

ಕೋಳಿ ಕೊಯ್ಯುವ ಚಾಕುವಿನಿಂದ ಕತ್ತು ಸೀಳಿದ ತಂದೆ

ಆರೋಪಿ ಮಂಜುನಾಥ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಮಗಳ ಪ್ರೀತಿಯ ವಿಚಾರ ತಿಳಿದ ನಂತರ ಮಂಜುನಾಥ್, ರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.

ಈಜಲು ಹೋಗಿದ್ದ ಬಾಲಕ ಸಾವು

ರಾಮನಗರ: ಕನಕಪುರ ತಾಲೂಕಿನ ಹಲಸೂರು ಗ್ರಾಮದಲ್ಲಿ ಈಜಲು ಹೋಗಿದ್ದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ದರ್ಶನ್ ​(12) ಮೃತ ಬಾಲಕ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಣಸಮುದ್ರ ನಿವಾಸಿ ದರ್ಶನ್, ದಸರಾ ರಜೆ ಹಿನ್ನೆಲೆ ಅಜ್ಜಿ ಮನೆಗೆ ಬಂದಿದ್ದ. ಅದರಂತೆ, ಹಲಸೂರು ಗ್ರಾಮದ ಚೆನ್ನೇಗೌಡನ ಕೆರೆಯಲ್ಲಿ ಈಜಲೆಂದು ಕೆರೆಗೆ ಇಳಿದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಾತನೂರು ಠಾಣಾ ಪೊಲೀಸರು ಮೃತದೇಹ ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us