AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಸೂಚನೆ ಬೆನ್ನಲ್ಲೇ ಹಲವೆಡೆ ರೇಡ್; ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ಜಪ್ತಿ

ಕರ್ನಾಟಕದಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಪಟಾಕಿ ಮಳಿಗೆಗಳ ಮೇಲೆ ಹದ್ದಿನ ಕಣ್ಣು ಇಡುವಂತೆ ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದೆ. ಹೀಗಾಗಿ ಇಂದು ದೇವನಹಳ್ಳಿ, ಚಿಕ್ಕಮಗಳೂರು ಸೇರಿದಂತೆ ಕೆಲ ಕಡೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದಾರೆ.

ಸರ್ಕಾರ ಸೂಚನೆ ಬೆನ್ನಲ್ಲೇ ಹಲವೆಡೆ ರೇಡ್; ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ಜಪ್ತಿ
ಚಿಕ್ಕಮಗಳೂರಿನಲ್ಲಿ ದಾಳಿ ನಡೆಸಿ ಪಟಾಕಿ ಜಪ್ತಿ
ನವೀನ್ ಕುಮಾರ್ ಟಿ
| Edited By: ಆಯೇಷಾ ಬಾನು|

Updated on: Oct 11, 2023 | 2:58 PM

Share

ದೇವನಹಳ್ಳಿ, ಅ.11: ಅತ್ತಿಬೆಲೆ ಪಟಾಕಿ ದುರಂತದಲ್ಲಿ 14 ಮಂದಿ ಬಲಿಯಾಗಿದ್ದಾರೆ. ಈ ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ (Karnataka Government) ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಸೂಚಿಸಿದೆ. ಹಾಗೂ ಬಹುಮುಖ್ಯವಾಗಿ ಕರ್ನಾಟಕದಲ್ಲಿ ಪಟಾಕಿ ಬ್ಯಾನ್ (Firecrackers Ban) ಮಾಡಿದೆ. ಪಟಾಕಿ ಮಳಿಗೆಗಳ ಮೇಲೆ ಹದ್ದಿನ ಕಣ್ಣು ಇಡುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ ಇಂದು ದೇವನಹಳ್ಳಿ, ಚಿಕ್ಕಮಗಳೂರು ಸೇರಿದಂತೆ ಕೆಲ ಕಡೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದಾರೆ.

ಅತ್ತಿಬೆಲೆ ಘಟನೆ ಬಳಿಕ ಎಚ್ಚೆತ್ತ ಸಿಎಂ ಸಿದ್ದರಾಮಯ್ಯನವರು ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಪಟಾಕಿ ಮಳಿಗೆಗಳ ಮೇಲೆ ಹದ್ದಿನ ಕಣ್ಣು ಇಡುವಂತೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಲ್ಲಿ ಅಧಿಕಾರಿಗಳು ಪಟಾಕಿ ಮಳಿಗೆಗಳ ಮೇಲೆ ದಾಳಿ ಮಾಡಿದ್ದಾರೆ. ದೇವನಹಳ್ಳಿ ತಹಶೀಲ್ದಾರ್, ವಿಜಯಪುರ ಪೊಲೀಸರು ಕಾರ್ಯಾಚರಣೆ ನಡೆಸಿ ದೇವನಹಳ್ಳಿ ಪಟ್ಟಣ, ಚನ್ನರಾಯಪಟ್ಟಣ ಮತ್ತು ವಿಜಯಪುರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದಾರೆ.

ವಿಜಯಪುರ ಪಟ್ಟಣದಲ್ಲಿ ಎಂಟಿಆರ್ ರಮೇಶ್ ಎಂಬುವವನಿಗೆ ಸೇರಿದ ಗೋಡೌನ್​ ಮೇಲೆ ತಹಶಿಲ್ದಾರ್ ಶಿವರಾಜ್, ಇನ್ಸ್​ಪೆಕ್ಟರ್​​ ಪ್ರಶಾಂತ್ ನೇತೃತ್ವದ ತಂಡ ದಾಳಿ ನಡೆಸಿ ದೀಪಾವಳಿ ಹಬ್ಬಕ್ಕೆ ಮಾರಾಟ ಮಾಡಲು ಗೋಡೌನ್​ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 25 ಲಕ್ಷ ಮೌಲ್ಯದ ಪಟಾಕಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಗೋಡೌನ್​​ ಮಾಲೀಕ ಎಸ್ಕೇಪ್ ಆಗಿದ್ದಾನೆ. ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಪಟಾಕಿಗಳನ್ನು ಶೇಖರಿಸಲಾಗಿತ್ತು.

ಇದನ್ನೂ ಓದಿ: ಹಸಿರು ಪಟಾಕಿ ಎಂದರೇನು? ಗುರುತಿಸುವುದು ಹೇಗೆ, ಎಲ್ಲಿ ಖರೀದಿಸಬೇಕು? ಇಲ್ಲಿದೆ ಮಾಹಿತಿ

ಚಿಕ್ಕಮಗಳೂರಿನಲ್ಲೂ ದಾಳಿ

ಚಿಕ್ಕಮಗಳೂರು ನಗರದ ಗೋಡೌನ್​ಗಳ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿಗಳನ್ನು ಜಪ್ತಿ ಮಾಡಿದ್ದಾರೆ. ಚಿಕ್ಕಮಗಳೂರು ನಗರ, ಬಸವನಹಳ್ಳಿ ಠಾಣೆಯ ಪೊಲೀಸರು ದಾಳಿ ನಡೆಸಿ ಪರವಾನಗಿ ಪಡೆಯದೆ ಗೋಡೌನ್ಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 7 ಲಕ್ಷದ 60 ಸಾವಿರ ಮೌಲ್ಯದ ಪಟಾಕಿ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮ್ಟೆ ಸೂಚನೆ ಮೇರೆಗೆ ಶರೀಫ್ ಗಲ್ಲಿ, ಬಿ.ಎಮ್ ರಸ್ತೆ, ಹಾಲೆನಹಳ್ಳಿ ಬಳಿ ಇರುವ ಗೋಡೌನ್​ಗಳ ಮೇಲೆ ದಾಳಿ ನಡೆದಿದೆ.

ಇನ್ನು ರಾಜಕೀಯ ಕಾರ್ಯಕ್ರಮ, ಮೆರವಣಿಗೆ, ಮದುವೆ, ಗಣೇಶ ಹಬ್ಬ, ಸೇರಿದಂತೆ ಇತರೆ ಸೆಲಿಬ್ರೇಷನ್ ಗಲ್ಲಿ ಯಾವುದೇ ರೀತಿಯ ಪಟಾಕಿ ಬಳಕೆ‌ ಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ. ದೀಪಾವಳಿ ಹಬ್ಬದಂದು ಕೇವಲ ಗ್ರೀನ್ ಪಟಾಕಿಯನ್ನಷ್ಟೇ ಸಿಡಿಸಿ ಹಬ್ಬ ಆಚರಿಸಲು ಸರ್ಕಾರ ಸಲಹೆ ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ