ಬೆಂಗಳೂರು ಗಡಿಯಲ್ಲಿ 5 ಒಂಟೆಗಳ ರಕ್ಷಣೆ, ರಂಜಾನ್ ಹಬ್ಬಕ್ಕೆ ಬಲಿ ಕೊಡಲು ತಂದಿದ್ರಾ?

ಚೆನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಪಸಂದ್ರ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು ಗಡಿಯಲ್ಲಿ 5 ಒಂಟೆಗಳ ರಕ್ಷಣೆ, ರಂಜಾನ್ ಹಬ್ಬಕ್ಕೆ ಬಲಿ ಕೊಡಲು ತಂದಿದ್ರಾ?
5 ಒಂಟೆಗಳ ರಕ್ಷಣೆ
Follow us
|

Updated on: Apr 05, 2023 | 1:37 PM

ಬೆಂಗಳೂರು: ಚೆನೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಪಸಂದ್ರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಒಂಟೆಗಳನ್ನು (camels) ರಕ್ಷಣೆ ಮಾಡಲಾಗಿದೆ. ರಂಜಾನ್ ಹಬ್ಬದ ವೇಳೆ ಬಲಿ ಕೊಡಲು ಒಂಟೆಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಪಸಂದ್ರ ಬಳಿ ಐದು ಒಂಟೆಗಳನ್ನು ತಂದು ಕಟ್ಟಿ ಹಾಕಲಾಗಿದೆ ಎಂದು ತಿಳಿದುಬಂದಿದೆ. ಖಚಿತ ಮಾಹಿತಿ ಆಧಾರದ ಮೇರೆಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಅರಣ್ಯ ಇಲಾಖೆ, ಪೋಲೀಸರು ಹಾಗೂ ಪಶುಸಂಗೋಪನೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕದ್ದ ಚಿನ್ನವನ್ನು ಗುಜರಿಗೆ ಹಾಕಿದ ಮುಗ್ಧ ಕಳ್ಳನ ರೋಚಕ ಕಥೆ ಇಲ್ಲಿದೆ!

ಹಿಂದೂ ಕಾರ್ಯಕರ್ತರು ದಾಳಿ ಮಾಡುತ್ತಿದ್ದಂತೆ ಸಾಗಾಟಗಾರರು ಒಂಟೆಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಒಂಟೆಗಳ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ಹಲವೆಡೆಗೆ ಒಂಟೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ರಾಜ್ಯದಲ್ಲಿ ಚುನಾವಣಾ ಚೆಕ್​ಪೋಸ್ಟ್​ಗಳ ನಿಯೋಜನೆ ಹಿನ್ನೆಲೆಯಲ್ಲಿ ಒಂಟೆಗಳನ್ನ ಸಾಗಿಸಲಾಗದೆ ಗೋಪಸಂದ್ರ ಅರಣ್ಯ ಪ್ರದೇಶದಲ್ಲಿ ಕಟ್ಟಿಹಾಕಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೊಸೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ., ರಕ್ಷಣೆ ಮಾಡಿದ ಒಂಟೆಗಳನ್ನು ಅಧಿಕಾರಿಗಳು ಗೋಶಾಲೆಗೆ ರವಾನೆ ಮಾಡಿದ್ದಾರೆ.

10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರ ಸೆರೆ

ಬೆಂಗಳೂರು: 10 ವರ್ಷದಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಮೂವರನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮೊಹ್ಮದ್ ಜಬೀವುದ್ದೀನ್, ಮೊಹ್ಮದ್ ಮೆಹತಾಬ್, ದಿನೇಶ್​ ಅಲಿಯಾಸ್ ದಿನ ಎಂಬಾತನನ್ನು ಬಂಧಿಸಿದ ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ಮೂವರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ವಾರಂಟ್ ಜಾರಿ ಮಾಡಿದ್ದರೂ ಕೋರ್ಟ್​ಗೆ ಹಾಜರಾಗದೆ ನಾಪತ್ತೆಯಾಗಿದ್ದರು. ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈ ಮೂವರು ಪಾತಕಿಗಳನ್ನು ಸಿಸಿಬಿ ಪೊಲೀಸರು ಸೆರೆ ಹಿಡಿದು ಜೈಲಿಗಟ್ಟಿದ್ದಾರೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್