ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ವಾಪಸ್ ಬೆಂಗಳೂರಿಗೆ ಬಂದ ವಿಮಾನ: ಪ್ರಯಾಣಿಕರು ಕಂಗಾಲು
ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಘಟನೆ ನಡೆದಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಅಷ್ಟಕ್ಕೂ ವಿಮಾನ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ ಆಗಿದ್ದೇಕೆ?
ಬೆಂಗಳೂರು, (ಅಕ್ಟೋಬರ್ 13): ಬೆಂಗಳೂರಿನಿಂದ(Bengaluru) ಹುಬ್ಬಳ್ಳಿಗೆ (Hubballi) ಹೋಗಿದ್ದ ವಿಮಾನ (Flight) ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ (kempegowda international airport ) ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ. ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ.
ಇಂದು (ಅಕ್ಟೋಬರ್ 13) ಬೆಳಗ್ಗೆ 05:50ಕ್ಕೆ 6E7227 ನಂಬರಿನ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿದ್ದು, ಬೆಳಗ್ಗೆ 7 ಗಂಟೆಗೆ ಲ್ಯಾಂಡ್ ಆಗಬೇಕಿತ್ತು. ಆದ್ರೆ, ಹುಬ್ಬಳ್ಳಿಯಲ್ಲಿ ಹವಾಮಾನ ವೈಪರೀತ್ಯ ಕಾರಣದಿಂದ ವಿಮಾನವನ್ನು ಲ್ಯಾಂಡ್ ಮಾಡಲು ಪೈಲೆಟ್ಗೆ ಸರಿಯಾಗಿ ರನ್ವೇ ಕಾಣಿಸಿಲ್ಲ. ಇದರಿಂದ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ವಾಪಸ್ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದೆ. ಇದರಿಂದ ಹುಬ್ಬಳ್ಳಿಗೆ ಹೋಗಬೇಕೆಂದು ಸಾವಿರಾರು ರೂಪಾಯಿ ಕೊಟ್ಟು ವಿಮಾನ ಬುಕ್ ಮಾಡಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.
ಇದನ್ನೂ ಓದಿ: ಹವಾಮಾನ ವೈಪರೀತ್ಯ: ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ವಾಪಸ್ ಆದ ವಿಮಾನ
ಇದೇ ತರ ಇತ್ತೀಚೆಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಿಂದ ಹೋಗಿದ್ದ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣ (Shivamogga airport) ದಲ್ಲಿ ಲ್ಯಾಂಡ್ ಆಗದೆ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣ ಬಂದಿತ್ತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತುಂತುರು ಮಳೆ ಜೊತೆಗೆ ಭಾರೀ ಪ್ರಮಾಣದ ಮೋಡ ಆವರಿಸಿತ್ತು. ಹಾಗಾಗಿ ಪೈಲೆಟ್ಗೆ ರನ್ ವೇ ಸರಿಯಾಗಿ ಕಾಣಿಸಿಲ್ಲ. ಈ ಹಿನ್ನೆಲೆ ಇಂಡಿಗೋ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣ ಸುತ್ತ ಕೆಲ ಕಾಲ ಹಾರಾಟ ಮಾಡಿದೆ. ಆದರೂ ರನ್ ವೇ ಸರಿಯಾಗಿ ಕಾಣಿಸದಿರುವುದರಿಂದ ಬೆಂಗಳೂರಿಗೆ ವಾಪಸ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.