AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯಲ್ಲಿ ಅಪಾರ್ಟ್​ಮೆಂಟ್ ಗೋಡೆ ಕುಸಿದು ನಾಲ್ವರು ದುರ್ಮರಣ!

ಶೆಡ್​ನಲ್ಲಿ ಒಟ್ಟು 8 ಕಾರ್ಮಿಕರು ಮಲಗಿದ್ದರು. ಈ ವೇಳೆ ಅಪಾರ್ಟ್​ಮೆಂಟ್ ಗೋಡೆ ಕುಸಿದಿದೆ. ಉಳಿದ ನಾಲ್ಕು ಕಾರ್ಮಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಹೊಸಕೋಟೆಯಲ್ಲಿ ಅಪಾರ್ಟ್​ಮೆಂಟ್ ಗೋಡೆ ಕುಸಿದು ನಾಲ್ವರು ದುರ್ಮರಣ!
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ
TV9 Web
| Updated By: sandhya thejappa|

Updated on:Jul 21, 2022 | 9:31 AM

Share

ದೇವನಹಳ್ಳಿ: ಅಪಾರ್ಟ್​ಮೆಂಟ್ (Apartment) ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಶೆಡ್ ಮೇಲೆ ಗೋಡೆ ಕುಸಿದು ನಾಲ್ವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಮೃತ ಕಾರ್ಮಿಕರು ಉತ್ತರ ಭಾರತ ಮೂಲದ ನಿವಾಸಿಗಳು. ಶೆಡ್​ನಲ್ಲಿ ಒಟ್ಟು 8 ಕಾರ್ಮಿಕರು ಮಲಗಿದ್ದರು. ಈ ವೇಳೆ ಅಪಾರ್ಟ್​ಮೆಂಟ್ ಗೋಡೆ ಕುಸಿದಿದೆ. ಉಳಿದ ನಾಲ್ಕು ಕಾರ್ಮಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳಕ್ಕೆ ಎಎಸ್​ಪಿ ಪುರುಷೋತ್ತಮ್ ಹಾಗೂ ಹೊಸಕೋಟೆ ಡಿವೈಎಸ್​ಪಿ ಉಮಾಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಸಂಸ್ಥೆ​​​​ ಕಾಂಪೌಂಡ್​​ ಗೋಡೆ ನಿರ್ಮಾಣ ಮಾಡಿತ್ತು. ಕೂಲಿ ಕಾರ್ಮಿಕರು ಸೌಪರ್ಣಿಕಾ ಅಪಾರ್ಟ್​ಮೆಂಟ್ ಬಳಿ ತಂಗಲು ತಾತ್ಕಾಲಿಕ ಶೆಡ್ ನಿರ್ಮಿಸಿದ್ದರು. ರಾತ್ರಿ ಸುರಿದ ಮಳೆಗೆ ಪಕ್ಕದ ಗೋಡೆ ಶೆಡ್ ಮೇಲೆ ಕುಸಿದು ದುರಂತ ಸಂಭವಿಸಿದೆ. ಬಹು ಕಟ್ಟಡ ನಿರ್ಮಾಣದ ಹಂತದಲ್ಲಿದೆ.  ಮನೋಜ್ ಕುಮಾರ್ ಸದಯ್ (35 ), ರಾಮ್ ಕುಮಾರ್ ಸದಯ್ (25), ನಿತೀಶ್ ಕುಮಾರ್ ಸದಯ್ (22) ಮೃತ ದುರ್ದೈವಿಗಳು. ಮತ್ತೊರ್ವನ ಹೆಸರು ಪತ್ತೆಯಾಗಿಲ್ಲ. ಇನ್ನು ಘಟನೆಯಲ್ಲಿ ಸುನಿಲ್ ಮಂಡಲ್, ಶಂಭು ಮಂಡಲ, ದಿಲೀಪ್, ದುರ್ಗೇಶ್​ಗೆ ಗಾಯವಾಗಿದೆ. ಗಾಯಾಳುಗಳನ್ನ ವೈಟ್ ಫೀಲ್ಡ್​ನ ವೈದೇಹಿ ಅಸ್ವತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಬಗ್ಗೆ ಹೆಚ್ಚಿತು ಅಂತೆ-ಕಂತೆ; ‘ಇಂಥ ಸುದ್ದಿ ಎಲ್ಲಿ ಸಿಗುತ್ತದೆ’ ಎಂದು ನೇರವಾಗಿ ಪ್ರಶ್ನೆ ಮಾಡಿದ ಮನೋಜ್​ ಬಾಜ್​ಪಾಯಿ

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ಹೆಚ್ಚಿತು ಅಂತೆ-ಕಂತೆ; ‘ಇಂಥ ಸುದ್ದಿ ಎಲ್ಲಿ ಸಿಗುತ್ತದೆ’ ಎಂದು ನೇರವಾಗಿ ಪ್ರಶ್ನೆ ಮಾಡಿದ ಮನೋಜ್​ ಬಾಜ್​ಪಾಯಿ
Image
ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದು ಒಂದೇ ದಿನದಲ್ಲಿ 14 ಜನ ಸಾವು, 16 ಮಂದಿಗೆ ಗಾಯ
Image
ಸಂತೋಷ್ ಆತ್ಮಹತ್ಯೆ ಪ್ರಕರಣ: ನಮಗೆ ಸರ್ಕಾರದ ಮೇಲೆ ಬಹಳ ನಂಬಿಕೆ ಇತ್ತು; ಮೃತ ಸಂತೋಷ ಪಾಟೀಲ್ ಸಹೋದರ ಪ್ರಶಾಂತ್ ಹೇಳಿಕೆ
Image
ಸೋನಿಯಾ ಗಾಂಧಿ ಇಡಿ ವಿಚಾರಣೆ: ಬೆಂಗಳೂರಿನಲ್ಲಿ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಕೆಎಸ್​ಆರ್​​ಟಿಸಿ ಬಸ್​ಗೆ ಕಾರು ಡಿಕ್ಕಿ: ಬೆಂಗಳೂರು: ಕೆಎಸ್​ಆರ್​​ಟಿಸಿ ಬಸ್​ಗೆ ಕಾರು ಡಿಕ್ಕಿಯಾಗಿ ಕಾರು ಚಾಲಕ ದುರ್ಮರಣ ಹೊಂದಿದ್ದಾರೆ. ಏರ್​ಪೋರ್ಟ್ ರಸ್ತೆಯ BSF ಕ್ಯಾಂಪಸ್ ಬಳಿ ಈ ಘಟನೆ ನಡೆದಿದೆ. ಲೋಹಿತ್ ಪ್ರಸಾದ್ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ. ಡಿವೈಡರ್ ಹಾರಿ ಕಾರು ಕೆಎಸ್​ಆರ್​ಟಿಸಿ ಬಸ್​​ಗೆ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂ ಆಗಿದ್ದು, ಚಾಲಕ‌‌‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Published On - 8:53 am, Thu, 21 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!