AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ

ಕಳ್ಳರಿಂದ ರಿಕವರಿ ಮಾಡಿದ್ದ ಸುಮಾರು 2 ಕೆ.ಜಿ. ಚಿನ್ನವನ್ನ ವಾರಸುದಾರರಿಗೆ ಹಿಂದಿರುಗಿಸಿಲ್ಲ ಎಂದು ಆರೋಪಿಸಿ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧವೇ ಬೆಂಗಳೂರಲ್ಲಿ ದೂರು ದಾಖಲಾಗಿದೆ. 200 ಗ್ರಾಂಗಳಷ್ಟು ಚಿನ್ನವನ್ನು ಮಾತ್ರ ಸರ್ಕಾರಕ್ಕೆ ಮತ್ತು ಬಂಗಾರ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ
ಪೊಲೀಸರ ಮೇಲೆಯೇ ಆರೋಪ
ರಾಮು, ಆನೇಕಲ್​
| Updated By: ಪ್ರಸನ್ನ ಹೆಗಡೆ|

Updated on: Oct 07, 2025 | 1:02 PM

Share

ಬೆಂಗಳೂರು, ಅಕ್ಟೋಬರ್​ 07: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ (Gold) ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್​ ಆಧರಿಸಿ ಇನ್ಸ್​ಪೆಕ್ಟರ್​ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.

10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್​ ನ ಸಂಜೀವ್ ಕುಮಾರ್ ಮಹಾಜನ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಪತ್ನಿಯಿಂದ ಕಿರುಕುಳ ಆರೋಪ: ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪತಿ

ಆನ್​ಲೈನ್​ ವಂಚನೆ ಜಾಲ ಭೇದಿಸಿದ ಖಾಕಿ

ಆನ್​ಲೈನ್​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​, ವಾಟ್ಸಾಪ್​, ಇನ್​​ಸ್ಟಾಗ್ರಾಂ ಮೂಲಕ ಗ್ಯಾಂಗ್​ ಪ್ರಚಾರ ಮಾಡುತ್ತಿತ್ತು. ಹೆಚ್ಚು ಲಾಭ ನೀಡೋದಾಗಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಆಧರಿಸಿ ನಿನ್ನೆ 7 ಕಡೆ ದಾಳಿ ನಡೆಸಿರುವ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ಬಂಧಿತರಿಂದ 19 ಲ್ಯಾಪ್​ಟಾಪ್​ ಗಳು​​​, 40 ಮೊಬೈಲ್‌, 11 ಪೆನ್ ಡ್ರೈವ್,  42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲುಗಳು, 10 ಮೆಮೊರಿ ಕಾರ್ಡ್, ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷಿನ್, 6 ಕೋಟಿ ಬೆಲೆಬಾಳುವ ಸ್ಥಿರಾಸ್ತಿ ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ