ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ತು 4 ಕೋಟಿ ರೂ. ಮೌಲ್ಯದ ಚಿನ್ನ, ಇಂದೋರ್​ನಿಂದ ಬೆಂಗಳೂರಿಗೆ ಬಂದಿದ್ಹೇಗೆ ಗೊತ್ತಾ?

ದೇಶಿ ಪ್ರಯಾಣಿಕರನ್ನ ಚೆಕ್ ಮಾಡಲ್ಲ. ಸುಲಭವಾಗಿ ಚಿನ್ನ ಸಾಗಿಸಬಹುದು ಎಂದು ಪ್ಲಾನ್ ಮಾಡಿಕೊಂಡು ಇಂದೋರ್​ನಿಂದ ಬಂದಿದ್ದ ವ್ಯಕ್ತಿ ಬೆಂಗಳೂರಿನಲ್ಲಿ ತಗ್ಲಾಕೊಂಡಿದ್ದು, ಬ್ಯಾಗ್​ನಲ್ಲಿ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಚಿನ್ನದ ಬಿಸ್ಕಟ್​ಗಳು ಪತ್ತೆಯಾಗಿವೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ತು 4 ಕೋಟಿ ರೂ. ಮೌಲ್ಯದ ಚಿನ್ನ, ಇಂದೋರ್​ನಿಂದ ಬೆಂಗಳೂರಿಗೆ ಬಂದಿದ್ಹೇಗೆ ಗೊತ್ತಾ?
Edited By:

Updated on: Jul 18, 2023 | 2:10 PM

ದೇವನಹಳ್ಳಿ (ಬೆಂಗಳೂರು), (ಜುಲೈ 18): ಅಕ್ರಮವಾಗಿ ಚಿನ್ನ (Gold)  ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ(Bengaluru) ಕೆಂಪೇಗೌಡ ವಿಮಾನ ನಿಲ್ದಾಣದ(kempegowda airport) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ಮಗ್ಲರ್ಸ್ ಮೊದಲೇ ಸೀಟ್ ಕೆಳಗಡೆ ಚಿನ್ನವನ್ನಿಟ್ಟು ಬಂಧಿತ ಆರೋಪಿಗೆ ತಿಳಿಸಿದ್ದರು .ಹೀಗಾಗಿ ಬಂಧಿತ ಆರೋಪಿ ಅದೇ ಸೀಟ್ ಬುಕ್ ಮಾಡಿಕೊಂಡು ಬೆಂಗಳೂರು ಬರುತ್ತಿದ್ದಂತೆಯೇ ಆರೋಪಿ, ಸೀಟ್​ ಕೆಳಗೆ ಇಟ್ಟಿದ್ದ ಚಿನ್ನವನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ವಿಮಾನ ಇಳಿದು ಬಂದಿದ್ದಾನೆ. ಆದ್ರೆ, ಏರ್ಪೋರ್ಟ್​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಕೋಟಿ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ದೇಶಿಯ ಪ್ರಯಾಣಿಕರನ್ನ ಚೆಕ್ ಮಾಡಲ್ಲ ಸುಲಭವಾಗಿ ಚಿನ್ನ ಸಾಗಿಸಬಹುದು ಎಂದು ಪ್ಲಾನ್ ಮಾಡಿದ್ದ. ಆದ್ರೆ, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ಅಧಿಕಾರಿಗಳ ಕೈಗೆ ತಗ್ಲಾಕೊಂಡಿದ್ದಾನೆ. ಇದೀಗ ಕಸ್ಟಮ್ಸ್ ಅಧಿಕಾರಿಗಳು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಪ್ಲೈಟ್ ನ ಸೀಟ್ ಕೆಳಗಡೆ ಚಿನ್ನವಿಟ್ಟ ಬಗ್ಗೆ ತನಿಖೆ ನಡೆಸಿದ್ದಾರೆ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us