AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 ವರದಿ ಬೆನ್ನಲ್ಲೇ ಸರ್ಕಾರಿ ಆಸ್ವತ್ರೆ ಐಸಿಯುಗೆ ಹೊಸ ಎಸಿ: ಫ್ಯಾನ್​​ ಹೊತ್ತು ಬರಬೇಕಿದ್ದ ರೋಗಿಗಳು ನಿರಾಳ

ದೊಡ್ಡಬಳ್ಳಾಫುರ ಸರ್ಕಾರಿ ಆಸ್ಪತ್ರೆಯ ಐಸಿಯು ಎಸಿ ಕೆಟ್ಟು ರೋಗಿಗಳು ಪರದಾಡಿದ್ದಾರೆ. ಟಿವಿ9 ವರದಿ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು, ಹೊಸ ಎಸಿ ಅಳವಡಿಸಲಾಗಿದೆ. ಜೊತೆಗೆ ಐಸಿಯು ಪುನರಾರಂಭಗೊಂಡಿದ್ದು, ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಸಹಕಾರಿಯಾಗಿದೆ. ಟಿವಿ9 ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

TV9 ವರದಿ ಬೆನ್ನಲ್ಲೇ ಸರ್ಕಾರಿ ಆಸ್ವತ್ರೆ ಐಸಿಯುಗೆ ಹೊಸ ಎಸಿ: ಫ್ಯಾನ್​​ ಹೊತ್ತು ಬರಬೇಕಿದ್ದ ರೋಗಿಗಳು ನಿರಾಳ
ದೊಡ್ಡಬಳ್ಳಾಫುರ ಸರ್ಕಾರಿ ಆಸ್ಪತ್ರೆ
ನವೀನ್ ಕುಮಾರ್ ಟಿ.
| Edited By: |

Updated on: Oct 28, 2026 | 4:20 PM

Share

ಮುಖ್ಯಾಂಶಗಳು

  • ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದೊಂದು ತಿಂಗಳಿಂದ ಕೈಕೊಟ್ಟಿದ್ದ ಎಸಿ
  • ದೊಡ್ಡಬಳ್ಳಾಪುರದ ಸರ್ಕಾರಿ ಆಸ್ವತ್ರೆಯಲ್ಲಿ ರೋಗಿಗಳು ಪರದಾಟ
  • ಟಿವಿ9 ವರದಿ ಬೆನ್ನಲ್ಲೇ ಜಿಲ್ಲಾ ಆರೋಗ್ಯ ಇಲಾಖೆ ಅಲರ್ಟ್

ದೇವನಹಳ್ಳಿ, ಅಕ್ಟೋಬರ್​​ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯು ಇದ್ದರೂ ಎಸಿ ಕೈಕೊಟ್ಟ ಹಿನ್ನೆಲೆ ಬಂದ ಮಾಡಲಾಗಿತ್ತು. ಹೀಗಾಗಿ ರೋಗಿಗಳು ಪರದಾಡಿದ್ದು, ಫ್ಯಾನ್​ಗಳನ್ನ ತಮ್ಮ ಪಕ್ಕದಲ್ಲಿಟ್ಟುಕೊಂಡಿದ್ದಾರೆ. ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿತ್ತು. ಈ  ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಇದೀಗ ಆಸ್ಪತ್ರೆಗೆ ಹೊಸ ಎಸಿ ಅಳವಡಿಕೆ ಮಾಡಿದ್ದು, ಐಸಿಯುನಲ್ಲಿ ಚಿಕಿತ್ಸೆಗೆ ಮುಂದಾಗಿದ್ದಾರೆ.

ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕಳೆದೊಂದು ತಿಂಗಳಿಂದ ಸರ್ಕಾರಿ ಆಸ್ಪತ್ರೆ ಐಸಿಯುನಲ್ಲಿ ಎಸಿ ಹಾಳಾಗಿದ್ದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಫ್ಯಾನ್​ಗಳನ್ನ ಕೂಡ ತಮ್ಮೊಂದಿಗೆ ತೆಗೆದುಕೊಂಡು ಬಂದು ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಈ ಕುರಿತು ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ ಅಧಿಕಾರಿಗಳು, ಐಸಿಯುಗೆ ಹೊಸ ಎಸಿ ಅಳವಡಿಸಿದ್ದಾರೆ.

ಐಸಿಯು ಯೂನಿಟ್​​ಗೆ ಚಾಲನೆ: ಅಧಿಕಾರಿಗಳಿಗೆ ಸೂಚನೆ 

ದೊಡ್ಡಬಳ್ಳಾಫುರ ಸುತ್ತಾಮುತ್ತ ಕೈಗಾರಿಕೆ ಪ್ರದೇಶ ಹೆಚ್ಚಿರುವ ಕಾರಣ ಮಧ್ಯಮ ಹಾಗೂ ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಗೆ ಹೆಚ್ಚಾಗಿ ಬರುತ್ತಿದ್ದು, ಎಮರ್ಜೆನ್ಸಿ ವೇಳೆ ಖಾಸಗಿ ಅಥವಾ ಬೆಂಗಳೂರಿನ ಆಸ್ಪತ್ರೆಗಳಿಗೆ ತೆರಳುವ ಅನಿರ್ವಾಯತೆ ಉಂಟಾಗಿತ್ತು. ಹೀಗಾಗಿ ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಡಿಹೆಚ್ಒ ಮಂಜುನಾಥ್, ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಹಾಳಾಗಿದ್ದ ಹಳೆ ಎಸಿಗಳನ್ನ ತೆರವುಗೊಳಿಸಿ, ಹೊಸ ಎಸಿಗಳನ್ನ ಅಳವಡಿಸಿದ್ದಾರೆ. ಜೊತೆಗೆ ಐಸಿಯು ಯೂನಿಟ್​​ಗೆ ಚಾಲನೆ ಕೂಡ ನೀಡಿದ್ದಾರೆ. ಅಷ್ಟೇ ಅಲ್ಲದೆ ರೋಗಿಗಳಿಗೆ ಅನಾನುಕೂಲವಾಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

LIVE TV

ಇದನ್ನೂ ಓದಿ: ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ: ಜನರಲ್ ವಾರ್ಡ್‌ ರೋಗಿಗಳ ಪರದಾಟ

ಒಟ್ಟಾರೆ ಸುಸಜ್ಜಿತ ಕಟ್ಟಡ, ಬೆಡ್, ವಾರ್ಡ್ ಎಲ್ಲಾ ಇದ್ದರೂ ಎಸಿ ಒಂದಿಲ್ಲ ಅಂತ ಮೂಲೆಗುಂಪಾಗಿದ್ದ, ಸರ್ಕಾರಿ ಆಸ್ಪತ್ರೆಯ ಐಸಿಯು ಇದೀಗ ಮತ್ತೆ ತೆರೆಯಲಾಗಿದೆ. ಸಣ್ಣ ಪುಟ್ಟ ವಿಚಾರಗಳಿಗೆ ಬಡ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣ ಮುನ್ನ ಅಧಿಕಾರಿಗಳು ಎಚ್ಚೆತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸ ಮಾಡಬೇಕಿದೆ. ಟಿವಿ9 ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಬಳ್ಳಾರಿಯ ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ಬಳ್ಳಾರಿಯ ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ಫ್ರೀ ಟೀ-ಕಾಫಿಗಾಗಿ ಬೇಕರಿ ಒಡತಿಗೆ ಜೀವ ಬೆದರಿಕೆ!
ಫ್ರೀ ಟೀ-ಕಾಫಿಗಾಗಿ ಬೇಕರಿ ಒಡತಿಗೆ ಜೀವ ಬೆದರಿಕೆ!
ಬರದಿಂದ ತತ್ತರಿಸಿದ್ದ ಬೆಂಗಳೂರು ದಕ್ಷಿಣದಲ್ಲಿ ವರುಣ ಕೃಪೆ: ಕೆರೆಗಳು ಫುಲ್!
ಬರದಿಂದ ತತ್ತರಿಸಿದ್ದ ಬೆಂಗಳೂರು ದಕ್ಷಿಣದಲ್ಲಿ ವರುಣ ಕೃಪೆ: ಕೆರೆಗಳು ಫುಲ್!
'ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ': ಸಿಎಂ ಡಿಕೆಶಿ
'ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ': ಸಿಎಂ ಡಿಕೆಶಿ
'ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ'
'ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ'
ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸತೀಶ್​​
ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸತೀಶ್​​
ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್!
ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್!
ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿಕೆಶಿ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ
ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿಕೆಶಿ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ
ಬಿಗ್ ಬಾಸ್ ಮನೆಗೆ ಕಾಲಿಟ್ಟ ರಕ್ಷಿತಾ ಶೆಟ್ಟಿ; ಶೆಟ್ಟಿ ಕುಟುಂಬದಲ್ಲಿ ಹರ್ಷ
ಬಿಗ್ ಬಾಸ್ ಮನೆಗೆ ಕಾಲಿಟ್ಟ ರಕ್ಷಿತಾ ಶೆಟ್ಟಿ; ಶೆಟ್ಟಿ ಕುಟುಂಬದಲ್ಲಿ ಹರ್ಷ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ