AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಯುವತಿಯನ್ನ ಪ್ರೀತಿಸಿ ಮದುವೆಯಾಗಿದಕ್ಕೆ ಯುವಕನ ಮನೆಗೆ ನುಗ್ಗಿ ಹಲ್ಲೆ, ಮುಂದೇನಾಯ್ತು?

ಕಾಲೇಜಿಗೆ ಹೋಗಬೇಕಾದ್ರೆ ಪ್ರೀತಿ, ಪ್ರೇಮ, ಪ್ರಣಯ ಅಂತ ಹುಡಗಿಯಿಂದೆ ಬಿದ್ದಿದ್ದ ಯುವಕ ಕೊನೆಗೆ ಮನೆಯವರ ವಿರೋಧದ ನಡುವೆ ಅಪ್ರಾಪ್ತೆಯನ್ನ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಅಪ್ರಾಪ್ತೆ ಕಡೆಯವರು ಯುವಕನ ಮನೆ ಮೇಲೆ ದಾಳಿ ಮಾಡಿ ಹುಡುಗನ ತಂದೆ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಅಪ್ರಾಪ್ತ ಯುವತಿಯನ್ನ ಪ್ರೀತಿಸಿ ಮದುವೆಯಾಗಿದಕ್ಕೆ ಯುವಕನ ಮನೆಗೆ ನುಗ್ಗಿ ಹಲ್ಲೆ, ಮುಂದೇನಾಯ್ತು?
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ
| Edited By: |

Updated on:Oct 04, 2024 | 9:55 AM

Share

ದೇವನಹಳ್ಳಿ, ಅ.04: ದೇವನಹಳ್ಳಿಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದೆ. ಕಾಲೇಜಿಗೆ ಹೋಗುವಾಗ ಅಪ್ರಾಪ್ತ ಯುವತಿಯ ಮೇಲೆ ಯುವಕನಿಗೆ ಪ್ರೀತಿ (Love) ಹುಟ್ಟಿದ್ದು ಇಬ್ಬರೂ ಮನೆಯವರ ವಿರೋಧದ ನಡುವೆ ಓಡಿ ಹೋಗಿ ಮದುವೆಯಾಗಿದ್ದರು (Marriage). ಆದರೆ ಅಪ್ರಾಪ್ತೆಯ ಮನೆಯವರು ಯುವಕನ ಮನೆಗೆ ನುಗ್ಗಿ ತಂದೆ-ತಾಯಿಯ ಮೇಲೆ ಹಲ್ಲೆ ಮಾಡಿ ಬಳಿಕ ಯುವಕನನ್ನೂ ಪತ್ತೆ ಮಾಡಿ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದಾರೆ. ಸದ್ಯ ಯುವಕ ತನ್ನ ಹೆಂಡತಿ ಬೇಕು ಎಂದು ನ್ಯಾಯಕ್ಕಾಗಿ ಕಣ್ಣೀರಿಟ್ಟಿದ್ದಾನೆ.

ಗುರುಕಿರಣ್ ಎಂಬ ಯುವಕನ ಪ್ರೇಮ ಪುರಾಣಕ್ಕೆ ಈತನ ಮನೆಯವರು ಇದೀಗ ಬೆಚ್ಚಿಬಿದ್ದಿದ್ದಾರೆ. ದೇವನಹಳ್ಳಿ ತಾಲೂಕಿನ ಕೆಂಪತಿಮ್ಮನಹಳ್ಳಿ ಗ್ರಾಮದವನಾದ ಇವನಿಗೆ ಕಾಲೇಜಿಗೆ ಹೋಗ್ತಿದ್ದ ಅಪ್ರಾಪ್ತೆ ಜೊತೆ ಪ್ರೇಮಾಂಕುರವಾಗಿದ್ದು ಮದುವೆ ಮಾಡಿಕೊಂಡಿದ್ದಾನೆ. ಮನೆಯವರ ವಿರೋಧದ ನಡುವೆ ನಾಲ್ಕು ದಿನಗಳಿಂದೆ ಅಪ್ರಾಪ್ತೆಯನ್ನ ಕರೆದುಕೊಂಡು ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾನೆ. ಜೊತೆಗೆ ಮದುವೆಯಾಗಿ ಸಂಬಂಧಿಗಳು, ಸ್ನೇಹಿತರ ಜೊತೆ ಓಡಾಡಿಕೊಂಡಿದ್ದು ಮನೆಗೆ ಫೋನ್ ಮಾಡಿದಾಗ ತಾಯಿ ಕೂಡ ಬೈದು ಕಣ್ಣೀರು ಹಾಕಿದ್ದಾರೆ. ಮತ್ತೊಂದೆಡೆ ಯುವಕ ಮದುವೆಯಾಗಿದಕ್ಕೆ ಆಕ್ರೋಶಗೊಂಡ ಅಪ್ರಾಪ್ತೆ ಮನೆಯವರು ಎರಡು ಕಾರುಗಳಲ್ಲಿ ಗುಂಪು ಕಟ್ಟಿಕೊಂಡು ಬಂದು ಯುವಕನ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಹುಡುಗ‌ನ ತಾಯಿ ತಂದೆ ಮತ್ತು ಮಾವನ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನು ಮನೆಗೆ ನುಗ್ಗಿ ಹಲ್ಲೆ‌ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಒಟ್ಟಿಗೆ ಎಣ್ಣೆ ಹಾಕುವಾಗ ಗಲಾಟೆ; ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ

ಮನೆಗೆ ನುಗ್ಗಿದ ಅಪ್ರಾಪ್ತೆ ಕಡೆಯವರು ಯುವಕನ ತಂದೆಯನ್ನ ಹೊಡೆದು ಅವರನ್ನು ಕಾರಿನಲ್ಲಿ ಎಳೆದೊಯ್ದು ಹುಡುಗ ಎಲ್ಲಿದ್ದಾನೆ ಎಂದು ತೋರಿಸುವಂತೆ ಹಿಂಸೆ ಮಾಡಿದ್ದಾರೆ. ಬಳಿಕ ಯುವಕನನ್ನು ಪತ್ತೆ ಹಚ್ಚಿ ಅಪ್ರಾಪ್ತ ಯುವತಿಯನ್ನು ಯುವಕನಿಂದ ಬಿಡಿಸಿಕೊಂಡು ಹೋಗಿದ್ದಾರೆ. ಯುವಕನ ತಂದೆ ಹಾಗೂ ಯುವಕನನ್ನ ಚನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿ ಅಪ್ರಾಪ್ತೆ ಕಡೆಯವರು ಮನೆಗೆ ತೆರಳಿದ್ದಾರೆ. ಇನ್ನೂ ಹಲ್ಲೆ ವಿರುದ್ದ ನಾವು ದೂರು ನೀಡಿದ್ರು ಪೊಲೀಸರು ಕ್ರಮ ಕೈಗೊಳ್ತಿಲ್ಲ. ನಮಗೆ ನ್ಯಾಯ ಕೊಡಿಸಿ ಎಂದು ಯುವಕನ ಮನೆಯವರು ಒತ್ತಾಯ ಮಾಡ್ತಿದ್ದಾರೆ.

ಒಟ್ಟಾರೆ ಪ್ರೀತಿ ಮಾಡಿ ಅಪ್ರಾಪ್ತೆಯನ್ನ ಯುವಕ ಕರೆದುಕೊಂಡು ಹೋಗಿ ಮದುವೆಯಾದ್ರೆ ಇತ್ತ ಯುವಕನ ತಂದೆ ತಾಯಿ ಮಾಡದ ತಪ್ಪಿಗೆ ಶಿಕ್ಷೆಯನುಭವಿಸುವಂತಾಗಿದ್ದು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಇನ್ನೂ ಈ ಸಂಬಂಧ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನೊಂದ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Fri, 4 October 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ