ದೊಡ್ಡಬಳ್ಳಾಪುರ: ಭಾರಿ ಮಳೆಯಿಂದ ಮೇಡಹಳ್ಳಿಯಲ್ಲಿ ಮನೆಗಳಿಗೆ ನುಗ್ಗಿದ ನೀರು; ವಸ್ತುಗಳು ಜಲಾವೃತ

Heavy Rain: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಹಾಗೂ ದೇವನಹಳ್ಳಿ ತಾಲೂಕಿನ ಕೋರಮಂಗಲ ಗ್ರಾಮದ ಜನರು ಮಳೆಯಿಂದ ಪರದಾಟ ನಡೆಸಿದ್ದು, ಈ ಕುರಿತ ವರದಿ ಇಲ್ಲಿದೆ.

ದೊಡ್ಡಬಳ್ಳಾಪುರ: ಭಾರಿ ಮಳೆಯಿಂದ ಮೇಡಹಳ್ಳಿಯಲ್ಲಿ ಮನೆಗಳಿಗೆ ನುಗ್ಗಿದ ನೀರು; ವಸ್ತುಗಳು ಜಲಾವೃತ
ಮನೆಗೆ ನುಗ್ಗಿರುವ ನೀರನ್ನು ಹೊರಹಾಕುತ್ತಿರುವ ಜನರು
Follow us
TV9 Web
| Updated By: sandhya thejappa

Updated on:Oct 09, 2021 | 12:25 PM

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕಿನ ಮೇಡಹಳ್ಳಿ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ರಾತ್ರಿ ಇಡೀ ಆತಂಕದಲ್ಲಿ ಜನರು ಕಾಲ ಕಳೆದಿದ್ದಾರೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲ ಜಲಾವೃತಗೊಂಡಿದೆ. ಮಳೆ ನೀರನ್ನು ಮನೆಯಿಂದ ಹೊರಹಾಕಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಅಧಿಕಾರಿಗಳು ಜನಪ್ರತಿನಿಧಿಗಳ ವಿರುದ್ದ ಗ್ರಾಮಸ್ಥರು ಸಮಪರ್ಕ ಚರಂಡಿ ವ್ಯವಸ್ಥೆ ಮಾಡದ ಕಾರಣ ಅವ್ಯವಸ್ಥೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತ ವಿಡಿಯೊ ವರದಿ ಇಲ್ಲಿದೆ:

ಕೋರಮಂಗಲ ಗ್ರಾಮದಲ್ಲಿ ಮಳೆಗೆ ತುಂಬಿ ಹರಿದ ರಾಜಕಾಲುವೆ, ಹಳ್ಳಗಳು; ಸಂಚರಿಸಲು ಜನರ ಪರದಾಟ: ಕಳೆದ ಎರಡು ದಿನಗಳಿಂದ ಸುರಿದಯುತ್ತಿರುವ ಭಾರಿ ಮಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋರಮಂಗಲ ಗ್ರಾಮದಲ್ಲಿ ರಾಜಕಾಲುವೆ ಮತ್ತು ಹಳ್ಳಗಳು ತುಂಬಿ ಹರಿದಿವೆ. ಇದರಿಂದಾಗಿ ಗ್ರಾಮಸ್ಥರಿಗೆ ತೋಟದ ಮನೆಗಳಿಂದ ಮತ್ತೊಂದೆಡೆಗೆ ಸಂಚರಿಸಲು ಸಾಧ್ಯವಾಗದೇ ಪರದಾಟ ನಡೆಸಿದ್ದಾರೆ. ಕೊನೆಗೆ ಸ್ಥಳೀಯರ ಸಹಾಯದಿಂದ ಕಾಲುವೆಗೆ ಅಡ್ಡಲಾಗಿ ಹಗ್ಗ ಕಟ್ಟಿ, ಹಗ್ಗದ ಮೂಲಕ ಜನರು ಹಳ್ಳ‌ ದಾಟಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.

Rain effect in Doddaballapur

ಸ್ಥಳೀಯರ ಸಹಾಯದಿಂದ ಕಾಲುವೆ ದಾಟುತ್ತಿರುವ ಜನರು

ರೈತರಿಗೆ ಸಂತಸ ಚಿಕ್ಕಬಳ್ಳಾಫುರ: ಜಿಲ್ಲೆಯಾದ್ಯಂತ ಧಾರಾಕರ ಮಳೆಯಾಗುತ್ತಿರುವ ಹಿನ್ನೆಲೆ ಬತ್ತಿ ಹೋಗಿದ್ದ ಉತ್ತರ ಪಿನಾಕಿನ ನದಿ ಮತ್ತೆ ಉಕ್ಕಿ ಹರಿಯುತ್ತಿದೆ. ಗೌರಿಬಿದನೂರಿನ ಕಿಂಡಿ ಹಣೆ ಕಟ್ಟು ಬಳಿ ನದಿ ಮೈದುಂಬಿ ಹರಿಯುತ್ತಿದೆ. ಕರ್ನಾಟದಿಂದ ಆಂಧ್ರಕ್ಕೆ ನದಿ ನೀರು ಹರಿಯಯುತ್ತಿದೆ. ನದಿಯಲ್ಲಿ ನೀರು ಕಂಡು ರೈತರು ಸಂತಸಗೊಂಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರಲ್ಲಿ ಬಿಬಿಎಂಪಿ ಎಡವಟ್ಟಿಗೆ 9 ವರ್ಷದ ಬಾಲಕ ಬಲಿ!

ಸಿಎಂ ಬಸವರಾಜ ಬೊಮ್ಮಾಯಿ ಅಕ್ಟೋಬರ್ 11ರಂದು ತಿರುಪತಿಯಲ್ಲಿ ವಾಸ್ತವ್ಯ, ತಿಮ್ಮಪ್ಪನ ದರ್ಶನ

ಸುದೀಪ್​ಗೆ ವಯಸ್ಸು ಆಗೋದೇ ಇಲ್ವಾ? ನಟಿ ರಮ್ಯಾ ನೇರ ಪ್ರಶ್ನೆ: ‘ಕೋಟಿಗೊಬ್ಬ 3’ ಟ್ರೇಲರ್​ಗೆ ಮೆಚ್ಚುಗೆ

Published On - 9:23 am, Sat, 9 October 21

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ